ETV Bharat / state

ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯ ಬಂಧನ - ಕಳ್ಳನ ಬಂಧನ

ವಯಸ್ಸಾದವರಿಗೆ ಬಿಪಿಎಲ್ ಕಾರ್ಡ್ ಮಾಡಿಸಿಕೊಡುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

theft arrest
ಕಳ್ಳತನ ಆರೋಪಿ ಬಂಧನ
author img

By

Published : Jan 7, 2021, 3:10 PM IST

ಬೆಂಗಳೂರು: ವಯಸ್ಸಾದವರನ್ನೇ ಟಾರ್ಗೆಟ್​ ಮಾಡಿಕೊಂಡು ಬಿಪಿಎಲ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ ಅವರಿಂದ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಹುರುಳು ಚಿಕ್ಕನಹಳ್ಳಿಯ ನಿವಾಸಿ ಮಂಜೇಶ್ ಅಲಿಯಾಸ್ ಹೊಟ್ಟೆ ಮಂಜ ಬಂಧಿತ ಆರೋಪಿ. ಈತ ಮಯಸ್ಸಾದವರನ್ನೇ ಟಾರ್ಗೆಟ್ ಮಾಡಿ ಅವರಿಗೆ ಬಿಪಿಎಲ್ ಕಾರ್ಡ್ ಮಾಡಿಸಿಕೊಡಲು ಫೋಟೋ ತೆಗೆಸುವ ವೇಳೆ ಅವರು ಹಾಕಿದ್ದ ಚಿನ್ನಾಭರಣವನ್ನು ಬಿಚ್ಚಿ ಕೊಡಲು ಹೇಳಿ ಅವರಿಂದ ಚಿನ್ನ ದೋಚಿ ಪರಾರಿಯಾಗುತ್ತಿದ್ದ. ಈ ಬಗ್ಗೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿ, ಆರೋಪಿಯಿಂದ 8 ಲಕ್ಷಕ್ಕೂ ಅಧಿಕ ಮೌಲ್ಯದ 171 ಗ್ರಾಂ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ಈತ 9 ಕಳವು ಪ್ರಕರಣ, 5‌ ಮನೆಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯಾಗಿದ್ದಾನೆ.

ಈತನ ವಿರುದ್ಧ ಬೆಂಗಳೂರಿನ ಆರ್​ಟಿ ನಗರ, ಬೇಲೂರು, ಮಂಗಳೂರು ದಕ್ಷಿಣ, ಮಣಿಪಾಲ್, ತ್ಯಾಮಗೊಂಡ್ಲು, ಅಮೃತಹಳ್ಳಿ, ಬಗಲುಗೊಂಟೆ ಸೇರಿದಂತೆ ಹಲವು ಕಡೆ ಪ್ರಕರಣ ದಾಖಲಾಗಿವೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.