ETV Bharat / state

ದ್ವಿಚಕ್ರ ವಾಹನ, ಮೊಬೈಲ್ ಕಳ್ಳತನ ಪ್ರಕರಣ: ಮೂವರು ಪೊಲೀಸರ ವಶಕ್ಕೆ.. - banglore crime news

ಮೊಬೈಲ್ ಹಾಗೂ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದು, 5 ಮೊಬೈಲ್ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಹೋಂಡಾ ಆ್ಯಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.

banglore
ಬಂಧಿತ ಆರೋಪಿಗಳು
author img

By

Published : Feb 1, 2021, 1:46 PM IST

ಬೆಂಗಳೂರು: ನಗರದ ಚಂದ್ರಾ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ಹಾಗೂ ಬೈಕ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀಶೈಲ, ಹನುಮಂತ ಮತ್ತು ವೆಂಕಟೇಶ್ ಬಂಧಿತ ಆರೋಪಿಗಳಾಗಿದ್ದು, ನಾಗರಾಭಾವಿ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ಮಾಡಿದ್ದರು. ಈ ಸಂಬಂಧ ಚಂದ್ರಾ ಲೇಔಟ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿತ್ತು. ಠಾಣಾ ಇನ್ಸ್​​ಪೆಕ್ಟರ್ ಬಿಜ್ರೇಸ್ ನೇತೃತ್ವದಲ್ಲಿ ಮೂವರು ಖದೀಮರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರಿಂದ ದ್ವಿಚಕ್ರ ವಾಹನಗಳು, 5 ಮೊಬೈಲ್ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಹೋಂಡಾ ಆ್ಯಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.

ಓದಿ: ಹಠಾತ್​ ಕುಸಿದ ಬೃಹತ್​ ಗೋದಾಮು... ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ! ವಿಡಿಯೋ...

ಈ ಸಂಬಂಧ ಚಂದ್ರಾ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.