ಬೆಂಗಳೂರು: ಮೋಜಿನ ಜೀವನಕ್ಕಾಗಿ ದ್ವಿಚಕ್ರ ವಾಹನ, ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಮನೆ ಕಳವು ಮಾಡುತ್ತಿದ್ದ ಇಬ್ಬರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ವಿದ್ಯಾರಣ್ಯಪುರದ ರಂಜಿತ್ (27) ಮತ್ತು ಅಜಿತ್(25) ಬಂಧಿತರು. ಇವರಿಂದ 5 ದ್ವಿಚಕ್ರ ವಾಹನ, 3 ಲ್ಯಾಪ್‌ಟಾಪ್, ವಿವಿಧ ಕಂಪನಿಗಳ 9 ಮೊಬೈಲ್ ಫೋನ್ ಹಾಗೂ ಒಂದು ಚಿನ್ನದ ಸರ ಸೇರಿದಂತೆ ಒಟ್ಟು 6.87 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇತ್ತೀಚೆಗೆ ವಿದ್ಯಾರಣ್ಯಪುರದ ಅಬ್ದುಲ್ ಖಾದರ್ ಎಂಬುವವರ ಮನೆಯಲ್ಲಿ ಹಾಡಹಗಲೇ ಒಂದು ಮೊಬೈಲ್, ಲ್ಯಾಪ್‌ಟಾಪ್ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಆರೋಪಿಗಳು ಮನೆಯೆದುರು, ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕದಿಯುವುದು, ಬಸ್ ನಿಲ್ದಾಣ, ಬಸ್‌ಗಳಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್ ಮೊಬೈಲ್ ಕದಿಯುವುದು, ಬೀಗ ಹಾಕಿದ ಮನೆಗಳನ್ನು ಗುರುತಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು. ಕದ್ದ ವಸ್ತುಗಳನ್ನು ಪರಿಚಿತರ ಮೂಲಕ ವಿಲೇವಾರಿ ಮಾಡಿಸಿ ಬಂದ ಹಣವನ್ನು ಹಂಚಿಕೊಂಡು ಮೋಜಿನ ಜೀವನ ನಡೆಸುತ್ತಿದ್ದರು ಎಂದು ವಿಚಾರಣೆಯಿಂದ ತಿಳಿದು ಬಂದಿದೆ.
ಎಂದು ಹೇಳಿದರು.
ಇದನ್ನೂ ಓದಿ :ಮೆಕ್ಯಾನಿಕ್ ಕೆಲಸ ಬಿಟ್ಟು ಬೈಕ್ ಕಳ್ಳತನಕ್ಕಿಳಿದ ಖದೀಮರು.. ಪುಟ್ಟೇನಹಳ್ಳಿ ಪೊಲೀಸರು ಸುಮ್ನೇ ಬಿಡ್ಬೇಕಲ್ಲ..