ETV Bharat / state

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಸಹೋದರನ ಮನೆಗೆ ಕನ್ನ.. 5 ಕೆಜಿ ಚಿನ್ನ ಕದ್ದೊಯ್ದ ಖದೀಮರು

author img

By ETV Bharat Karnataka Team

Published : Oct 30, 2023, 7:41 PM IST

Updated : Oct 30, 2023, 7:49 PM IST

ನಟ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ನಿವಾಸಕ್ಕೆ ಖದೀಮರು ಕನ್ನ ಹಾಕಿದ್ದಾರೆ.

Theft in rockline venkatesh brother house 5kg gold missing
ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಸಹೋದರನ ಮನೆಯಲ್ಲಿ 5 ಕೆಜಿ ಚಿನ್ನ ಕಳ್ಳತನ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ನಿವಾಸದಲ್ಲಿ ಕಳ್ಳತನವಾಗಿದೆ. ನಗರದ ಮಹಾಲಕ್ಷ್ಮೀ ಲೇಔಟ್​ನಲ್ಲಿರುವ ಅವರ ಮನೆಯಲ್ಲಿದ್ದ 5 ಕೆ.ಜಿ ಚಿನ್ನ ಹಾಗೂ 6 ಲಕ್ಷ ರೂಪಾಯಿ ನಗದು ಕಳವು ಆಗಿದೆ.

ಭ್ರಮರೇಶ್ ಅವರು ಕುಟುಂಬ ಸಮೇತರಾಗಿ ಯುರೋಪ್​ ಪ್ರವಾಸಕ್ಕೆಂದು ತೆರಳಿದ್ದರು. ಈ ವೇಳೆ ಕಳ್ಳರು ತಮ್ಮ ಕೈಚೆಳಕ ತೋರಿಸಿದ್ದಾರೆ. ಟ್ರಿಪ್​ ಮುಗಿಸಿಕೊಂಡು ಭಾನುವಾರ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಭ್ರಮರೇಶ್ ಮಹಾಲಕ್ಷ್ಮೀ ಲೇಔಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆಯನ್ನು ಕೈಗೆತ್ತಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಖದೀಮರಿಗಾಗಿ ಬಲೆ ಬೀಸಿದ್ದಾರೆ. ಭ್ರಮರೇಶ್ ಮನೆಯ ಕೆಲಸದವರಿಂದಲೂ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದು, ತನಿಖೆ ಮುಂದುವರೆದಿದೆ.

ಹುಲಿ ಉಗುರು ಪೆಂಡೆಂಟ್​ ಪ್ರಕರಣ: ಇತ್ತೀಚೆಗೆ ಹುಲಿ ಉಗುರು ಪೆಂಡೆಂಟ್​ ಪ್ರಕರಣದಲ್ಲಿ ರಾಕ್​ಲೈನ್​ ವೆಂಕಟೇಶ್​ ಹೆಸರು ತಳುಕು ಹಾಕಿಕೊಂಡಿತ್ತು. ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ವರ್ತೂರು ಸಂತೋಷ್​ ಅವರನ್ನು ಈ ಕೇಸ್​ಗೆ ಸಂಬಂಧಿಸಿ ಅರೆಸ್ಟ್​ ಮಾಡಿದ ಬೆನ್ನಲ್ಲೇ ನಟ ಜಗ್ಗೇಶ್​, ದರ್ಶನ್​, ರಾಕ್​ಲೈನ್​ ವೆಂಕಟೇಶ್​ ಹಲವರ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಅದರಂತೆ, ಈ ನಟರುಗಳಿಗೆ ನೋಟಿಸ್​ ನೀಡಿ ಅವರ ಮನೆಯನ್ನು ಕಳೆದ ಬುಧವಾರ ಪರಿಶೀಲನೆ ನಡೆಸಲಾಗಿತ್ತು. ಇಲಾಖೆಯ ನಾಲ್ಕು ತಂಡಗಳು ಪ್ರತ್ಯೇಕವಾಗಿ ನಟರ ಮನೆಗಳಿಗೆ ತೆರಳಿ, ನೊಟೀಸ್ ನೀಡಿ, ಮನೆ ಶೋಧಿಸಿದ್ದರು.

ಇದನ್ನೂ ಓದಿ: ಹುಲಿ ಉಗುರು ಪೆಂಡೆಂಟ್​ ಪ್ರಕರಣ: ಜಗ್ಗೇಶ್​ ವಿರುದ್ಧದ ಅರಣ್ಯಾಧಿಕಾರಿಗಳ ನೋಟಿಸ್‌ಗೆ ಹೈಕೋರ್ಟ್ ತಡೆ

ಸಾಮಾಜಿಕ ಜಾಲತಾಣ ಹಾಗೂ ನಿರ್ದಿಷ್ಟವಾಗಿ ಕೆಲವು ಸಂಘ ಸಂಸ್ಥೆಗಳು ಹುಲಿಯ ಉಗುರಿನ ಪೆಂಡೆಂಟ್​ ಧರಿಸಿರುವ ತಮ್ಮ ಛಾಯಾಚಿತ್ರಗಳೊಂದಿಗೆ ತಮ್ಮ ವಿರುದ್ಧ ದೂರು ದಾಖಲಿಸಿವೆ. ವನ್ಯಜೀವಿಗಳ ಅಂಗಾಂಗಗಳನ್ನು ಹೊಂದುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಕಲಂ 9, 39,40,42,44, 48ಎ, 49ಎ, 49ಬಿ, 51,52 ಹಾಗೂ 58 ರ ಪ್ರಕಾರ ಅಪರಾಧ. ಈ ನೊಟೀಸ್ ತಲುಪಿದ ತಕ್ಷಣ ತಮ್ಮ ಸ್ವಾಧೀನದಲ್ಲಿರುವ ವನ್ಯಜೀವಿ ಅಂಗ ಎಂದು ಹೇಳಲಾದ ವಸ್ತುವನ್ನು ತಪಾಸಣೆಗೆ ಒಳಪಡಿಸಲು ಈ ಮೂಲಕ ತಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ, ನಿಮ್ಮ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ, ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರಾಕ್‌ಲೈನ್ ವೆಂಕಟೇಶ್ ಅವರಿ​ಗೆ ನೀಡಿದ ನೊಟೀಸ್‌ನಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: 8.5 ಕೋಟಿ ರೂ. ತೆರಿಗೆ ವಂಚನೆ ಆರೋಪ: ರಾಕ್​ಲೈನ್ ವೆಂಕಟೇಶ್ ವಿರುದ್ಧ ದೂರು

Last Updated : Oct 30, 2023, 7:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.