ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನು ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿವೆ. ಆ ಹೆಸರುಗಳನ್ನು ಈಗ ಬಹಿರಂಗಪಡಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಬಿಜೆಪಿ ಮಾಜಿ ಶಾಸಕ ಶಿರಹಟ್ಟಿಯ ರಾಮಪ್ಪ ಲಮಾಣಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ನಾಯಕರುಗಳ ಜತೆ ಚರ್ಚಿಸಿ, ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ ಎಂದರು.
ಕೆಲವರು 2024ರಲ್ಲಿ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿ, ನಾವು ʼಇಂಡಿಯಾʼದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ. ಬೀದರ್ನಿಂದ ಚಾಮರಾಜನಗರದ ತನಕ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ ಎಂದು ತಿಳಿಸಿದರು.
-
ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar ಅವರ ಸಮ್ಮುಖದಲ್ಲಿ ಬಿಜೆಪಿ ಮುಖಂಡರಾದ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @ChandrappaBn, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ @HKPatilINC, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ… pic.twitter.com/dpaNgSfhjH
— Karnataka Congress (@INCKarnataka) October 12, 2023 " class="align-text-top noRightClick twitterSection" data="
">ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar ಅವರ ಸಮ್ಮುಖದಲ್ಲಿ ಬಿಜೆಪಿ ಮುಖಂಡರಾದ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @ChandrappaBn, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ @HKPatilINC, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ… pic.twitter.com/dpaNgSfhjH
— Karnataka Congress (@INCKarnataka) October 12, 2023ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ @DKShivakumar ಅವರ ಸಮ್ಮುಖದಲ್ಲಿ ಬಿಜೆಪಿ ಮುಖಂಡರಾದ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ @SaleemAhmadINC, @ChandrappaBn, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ @HKPatilINC, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ… pic.twitter.com/dpaNgSfhjH
— Karnataka Congress (@INCKarnataka) October 12, 2023
ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ. ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಗುಟ್ಟು ಬಿಟ್ಟುಕೊಡುವುದಿಲ್ಲ ಎಂದರು.
ಯಾವುದೇ ಷರತ್ತಿಲ್ಲದೇ ನಾನು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ನಮಗೆ ಬಿಜೆಪಿಯಲ್ಲಿ ಆಗಿರುವ ನೋವಿನಿಂದ ನಾವು ಆ ಪಕ್ಷ ತೊರೆದಿದ್ದೇವೆ. ಕಾಂಗ್ರೆಸ್ ನಾಯಕರು ಸೇರಿ ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ರಾಮಪ್ಪ ಲಮಾಣಿ ತಿಳಿಸಿದರು.
ಜಗದೀಶ್ ಶೆಟ್ಟರ್ ಹಾಗೂ ಡಿ.ಕೆ.ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1500 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜನರಿಗೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಜನರು ಕೂಡ ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರೂ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುವುದಾಗಿ ಮಾತು ನೀಡಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಕಾರ್ಯಕ್ರಮ ಮಾಡುತ್ತೇವೆ. ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡ ಎಲ್ಲಾ ನಾಯಕರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇದನ್ನೂಓದಿ : ನಮ್ಮವರು ಪಕ್ಷ ಬಿಡುತ್ತಿರುವುದು ನಿಜ, ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲ: ಸದಾನಂದ ಗೌಡ