ETV Bharat / state

ಮುಷ್ಕರ ನಿರತ ಸಾರಿಗೆ ನೌಕರರ ಜೊತೆ ಯಾವುದೇ ಸಂಧಾನ ನಡೆದಿಲ್ಲ: ಸಚಿವ ಸವದಿ ಸ್ಪಷ್ಟನೆ - bangalore recent news

ಪ್ರಸ್ತುತ ಇಡೀ ಮನುಕುಲವನ್ನೇ ಬೆಚ್ಚಿಬೀಳಿಸಿರುವ ಕೋವಿಡ್ 2ನೇ ಅಲೆಯ ತೀವ್ರ ಅಪಾಯದ ನಡುವೆಯೂ ನಮ್ಮ ಸಾರಿಗೆ ನೌಕರ ಮಿತ್ರರು ಸಾರಿಗೆ ಬಸ್​​ಗಳ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಮತ್ತು ನೌಕರರ ಹಿತದೃಷ್ಟಿಯಿಂದಲೂ ಸೂಕ್ತವಲ್ಲ ಎಂದು ಸವದಿ ತಿಳಿಸಿದ್ದಾರೆ.

There have been no talks with the transport workers: DCM Lakshmana Sawadi
ಡಿಸಿಎಂ ಲಕ್ಷ್ಮಣ ಸವದಿ
author img

By

Published : Apr 19, 2021, 8:47 PM IST

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದು,ಸಂಧಾನ ಸಭೆ ನಡೆದಿದೆ ಎನ್ನುವ ಮಾಧ್ಯಮ ವರದಿಯನ್ನು ತಳ್ಳಿಹಾಕಿದ್ದಾರೆ‌

ಸಾರಿಗೆ ನೌಕರರ ಮುಷ್ಕರದ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ. ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು ಮಾಡಿದ್ದರೂ ಕೆಲವು ಮುಖಂಡರು ತಾವು ಮುಷ್ಕರ ನಿರತರ ಪರವಾಗಿ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ತಿಳಿಸಿದ್ದಾರೆ. ಅದನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಆದರೆ, ನಾನು ಬೊಮ್ಮಾಯಿ ಅವರನ್ನು ಈ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿಗಳ ಮಾತನ್ನು ಮೀರಿ ಈಗ ಸಂಧಾನದ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿಗಳು ತಿಳಿಸಿದಂತೆ ಮೊದಲು ಅವರು ಕರ್ತವ್ಯಕ್ಕೆ ಹಾಜರಾಗಲಿ” ಎಂದು ಅವರು ತಿಳಿಸಿದ್ದಾರೆ.

ಆದರೆ, ಇದನ್ನು ತಿರುಚಿ ಮುಷ್ಕರ ನಿರತ ಸಾರಿಗೆ ನೌಕರರ ಮುಖಂಡರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಿರುವುದು ಸರಿಯಲ್ಲ. ಆದ್ದರಿಂದ, ಇನ್ನೂ ಕಾಲ ಮಿಂಚಿಲ್ಲ ಎಲ್ಲ ಸಾರಿಗೆ ನೌಕರ ಬಂಧುಗಳೂ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮತ್ತೊಮ್ಮೆ ಮನವಿ ಮಾಡುವುದಾಗಿ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಇದು ಕೋವಿಡ್ ಸಂಕಷ್ಟದ ಕಾಲ, ಮುಷ್ಕರದ ಕಾಲವಲ್ಲ:

ಪ್ರಸ್ತುತ ಇಡೀ ಮನುಕುಲವನ್ನೇ ಬೆಚ್ಚಿಬೀಳಿಸಿರುವ ಕೋವಿಡ್ 2ನೇ ಅಲೆಯ ತೀವ್ರ ಅಪಾಯದ ನಡುವೆಯೂ ನಮ್ಮ ಸಾರಿಗೆ ನೌಕರ ಮಿತ್ರರು ಸಾರಿಗೆ ಬಸ್​​​​ಗಳ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದು ಸಾರ್ವಜನಿಕರ ಹಿತದೃಷ್ಟಿಯಿಂದಲೂ ಒಳ್ಳೆಯದಲ್ಲ ಮತ್ತು ನೌಕರರ ಹಿತದೃಷ್ಟಿಯಿಂದಲೂ ಸೂಕ್ತವಲ್ಲ ಎಂದು ಸವದಿ ತಿಳಿಸಿದ್ದಾರೆ.

ಕಳೆದ ವರ್ಷ ಕೋವಿಡ್ ಸಮಸ್ಯೆ ಉಲ್ಬಣವಾದಾಗ ನಮ್ಮ ಸಾರಿಗೆ ನೌಕರರೂ ಸಹ ಕೊರೊನಾ ವಾರಿಯರ್ಸ್‍ಗಳಾಗಿ ಹಗಲಿರುಳೂ ಕೆಲಸ ಮಾಡಿದ್ದನ್ನು ಯಾರೂ ಮರೆತಿಲ್ಲ. ಸರ್ಕಾರವೂ ಈ ಸೇವೆಯನ್ನು ಗೌರವಿಸಿ ಸಾರಿಗೆ ನೌಕರರ ಸಂಕಷ್ಟಗಳಿಗೆ ಸ್ಪಂದಿಸಿತ್ತು. ಆದರೆ, ಈಗ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತೆ ಅದೇ ರೀತಿ ಕೊರೊನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದರೂ ಮುಷ್ಕರದ ಕಾರಣದಿಂದ ಇದೇ ಸಾರಿಗೆ ನೌಕರರಿಗೆ ಕೆಟ್ಟ ಹೆಸರು ಬರುವಂತಾಗಿ ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ. ಆದ್ದರಿಂದ ಯಾವುದೇ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರಕ್ಕೆ ಬಲಿಯಾಗದೇ ಬಸ್​​​​ಗಳ ಸುಗಮ ಸಂಚಾರಕ್ಕೆ ಕೈಜೊಡಿಸುವ ಮೂಲಕ ಮತ್ತೊಮ್ಮೆ ತಾವು ಸಾರ್ವಜನಿಕ ಸ್ನೇಹಿ ನೌಕರರು ಎಂಬುದನ್ನು ಸಾಬೀತುಪಡಿಸುವುದಕ್ಕೆ ಇದು ಸೂಕ್ತ ಸಂದರ್ಭವಾಗಿದೆ. ಆದ್ದರಿಂದ ಕೂಡಲೇ ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಬೇಕೆಂದು ಮನವಿ ಮಾಡಿದರು.

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಲಾಗಿದ್ದು, ಇನ್ನುಳಿದ ಒಂದು ಬೇಡಿಕೆಯಾದ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಪ್ರಸ್ತುತ ಮೇ-04 ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ವೇತನ ಹೆಚ್ಚಳದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಚುನಾವಣಾ ನೀತಿ ಸಂಹಿತೆಯು ಮುಗಿದ ನಂತರ ವೇತನ ಹೆಚ್ಚಳದ ಬಗ್ಗೆ ಕ್ರಮ ಕೈಗೊಳ್ಳಲಾಗುವುದೆಂದು ಮತ್ತೊಮ್ಮೆ ಭರವಸೆ ನೀಡಿದರು ‌

ಹಿಂಸಾಕೃತ್ಯಗಳಿಂದ ಬೇಡಿಕೆ ಈಡೇರುವುದಿಲ್ಲ:

ಈ ಮುಷ್ಕರದ ನೆಪದಲ್ಲಿ ಈಗಾಗಲೇ ಒಟ್ಟು 110ಕ್ಕೂ ಹೆಚ್ಚು ಬಸ್​​​ಗಳ ಮೇಲೆ ಕಲ್ಲು ತೂರಾಟ ನಡೆಸಿ ಸಾರಿಗೆ ನಿಗಮಗಳಿಗೆ ಅಪಾರ ಹಾನಿ ಉಂಟು ಮಾಡಲಾಗಿದೆ. ಇಂದು ಕೂಡ ಕೆ.ಎಸ್.ಆರ್.ಟಿ.ಸಿ.ಯ 3 ಬಸ್​​​ಗಳಿಗೆ ಕನಕಪುರ-ಹಾರೋಹಳ್ಳಿ ಮಾರ್ಗದಲ್ಲಿ ಕಲ್ಲು ಹೊಡೆದು, ಕರ್ತವ್ಯಕ್ಕೆ ಬರುತ್ತಿದ್ದ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ತೀವ್ರ ಖಂಡನೀಯವಾಗಿದೆ. ಈ ರೀತಿಯ ಗೂಂಡಾಗಿರಿಯನ್ನು ನಮ್ಮ ಸರ್ಕಾರ ಎಂದಿಗೂ ಸಹಿಸುವುದಿಲ್ಲ ಎಂಬುದನ್ನು ಈ ದುಷ್ಕರ್ಮಿಗಳು ಅರ್ಥಮಾಡಿಕೊಳ್ಳಬೇಕು. ಮುಷ್ಕರದ ನೆಪದಲ್ಲಿ ಕೆಲವರು ನೌಕರ ವರ್ಗದವರಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಸಿ ಸರ್ಕಾರದ ವಿರುದ್ಧ ಹಾಗೂ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ ನಮ್ಮ ಸಾರಿಗೆ ನೌಕರರ ವಿರುದ್ಧ ಪ್ರಚೋದಿಸುತ್ತಿದ್ದಾರೆ. ಈ ರೀತಿಯ ಕಾನೂನುಬಾಹಿರ ಕೃತ್ಯಗಳಿಗೆ ಮುಂದಾಗುವವರು ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕರ ಅಮೂಲ್ಯ ಆಸ್ತಿಯಾಗಿರುವ ಈ ಬಸ್ಗ​​ಳನ್ನು ಧ್ವಂಸಗೊಳಿಸಲು ಯಾರಿಗೂ ಹಕ್ಕಿಲ್ಲ. ಅಷ್ಟೇ ಅಲ್ಲದೆ ನಮ್ಮ ಸಾರಿಗೆ ನೌಕರರ ಮಕ್ಕಳು ಮತ್ತು ಕುಟುಂಬದವರನ್ನು ಬೀದಿಗೆ ತಂದು ಭಿಕ್ಷಾಟನೆಗೆ ತಳ್ಳಿದ್ದು, ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು. ಒಂದೆಡೆ ಮುಷ್ಕರ ನಿರತರು ಶಾಂತಿಯುತ ಹೋರಾಟ ನಡೆಸುತ್ತೇವೆ ಎಂದು ಹೇಳುತ್ತಲೇ ಮತ್ತೊಂದೆಡೆ ಸಹೋದ್ಯೋಗಿಗಳ ಮೇಲೆ ಹಲ್ಲೆ ನಡೆಸುವುದು ಹಾಗೂ ಬಸ್​​​ಗಳ ಮೇಲೆ ಕಲ್ಲು ತೂರಾಟಗಳಂತಹ ಹಿಂಸಾಕೃತ್ಯಗಳನ್ನು ನಡೆಸುವುದು ನಿಜಕ್ಕೂ ನಿಜಕ್ಕೂ ಜನವಿರೋಧಿ ಬೆಳವಣಿಗೆಯಾಗಿದೆ. ಈ ಸಂಬಂಧ ಈಗಾಗಲೇ ಹಲವು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ ಕಠಿಣ ಕ್ರಮ ಜರುಗಿಸುತ್ತಿದ್ದಾರೆ ಎಂದರು.

ಪ್ರಸ್ತುತ ಸಾರಿಗೆ ವ್ಯವಸ್ಥೆಯಲ್ಲಿ ಸರ್ಕಾರ ಕೈಗೊಂಡಿರುವ ಪರ್ಯಾಯ ವ್ಯವಸ್ಥೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಹತಾಶಗೊಂಡಿರುವ ಕೆಲವು ಮುಷ್ಕರ ನಿರತರು ಸರ್ಕಾರದ ಪ್ರಾಮಾಣಿಕ ಸ್ಪಂದನೆಯ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ. ಕೆಲವು ಪಟ್ಟಭದ್ರರು ಸರ್ಕಾರದ ವಿರುದ್ಧ ನೌಕರರನ್ನು ಎತ್ತಿಕಟ್ಟಿ ನೌಕರರಿಗೇ ಗಂಡಾಂತರ ತಂದೊಡ್ಡಲು ಹವಣಿಸುತ್ತಿದ್ದಾರೆ. ಆದರೆ ಇವರ ದಾಳಕ್ಕೆ ಯಾರೂ ಬಲಿಯಾಗಬಾರದು ಎಂದು ನಾನು ಕಿವಿಮಾತು ಹೇಳಿದ್ದಾರೆ.

ಸಾರಿಗೆ ನೌಕರರನ್ನೂ ಒಳಗೊಂಡಂತೆ ನಮ್ಮೆಲ್ಲರ ಮೇಲೂ ಕೋವಿಡ್ ತಡೆಗಟ್ಟುವ ಸಾಮಾಜಿಕ ಜವಾಬ್ದಾರಿಯಿದೆ. ಹೀಗಿರುವಾಗ ನಾವು ನಮ್ಮ ಕರ್ತವ್ಯಕ್ಕೆ ಚ್ಯುತಿ ತರಬಾರದು. ನಮ್ಮ ಸಾರಿಗೆ ನೌಕರರು ಮತ್ತೆ ಮೊದಲಿನಂತೆ ಉತ್ಸಾಹದಿಂದ ಕರ್ತವ್ಯಕ್ಕೆ ಮರಳಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿ ಈ ಸೂಕ್ಷ್ಮ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಎಂದು ಸಾರ್ವಜನಿಕರಿಂದ ಮತ್ತೊಮ್ಮೆ ಪ್ರಶಂಸೆಗೆ ಪಾತ್ರರಾಗಲಿ ಎಂದು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.