ETV Bharat / state

'ಕೆಂಪೇಗೌಡರ ಪ್ರತಿಮೆ ವೀಕ್ಷಣೆಗೆ ಯಾವುದೇ ಶುಲ್ಕ ಇಲ್ಲ, ಶೀಘ್ರದಲ್ಲೇ ಮತ್ತಷ್ಟು ಸೌಲಭ್ಯ' - ಕೆಂಪೇಗೌಡರ ಕಂಚಿನ ಪ್ರತಿಮೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರತಿಮೆ ವೀಕ್ಷಣೆಗೆ ವ್ಯವಸ್ಥಿತ ಸೌಲಭ್ಯ ಮಾಡಲಾಗುವುದು. ಅಲ್ಲಿಯವರೆಗೆ ಇದು ತಾತ್ಕಾಲಿಕ ವ್ಯವಸ್ಥೆ ಆಗಿರುತ್ತದೆ. ಪ್ರತಿಮೆ ವೀಕ್ಷಣೆಗೆ ಯಾವುದೇ ಶುಲ್ಕ ಇರುವುದಿಲ್ಲ- ಸಚಿವ ಅಶ್ವತ್ಥ ನಾರಾಯಣ ಸ್ಪಷ್ಟನೆ.

Minister Ashwath Narayan
ಪ್ರವಾಸಿ ತಾಣವಾಗಿ ಕೆಂಪೇಗೌಡರ ಪ್ರತಿಮೆ
author img

By

Published : Nov 15, 2022, 7:08 AM IST

ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ರೂಪುಗೊಂಡಿರುವ ಮತ್ತು ಆಕರ್ಷಕ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆಯನ್ನು ವೀಕ್ಷಿಸಲು ಹೆಚ್ಚಿನ ಜನರು ಆಗಮಿಸುತ್ತಿದ್ದಾರೆ. ಅವರಿಗೆ ಸೂಕ್ತ‌ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರವ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರು ಖುದ್ದು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸದ್ಯಕ್ಕೆ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಐಒಸಿ ಪೆಟ್ರೋಲ್ ಬಂಕ್ ಕಡೆಯಿಂದ ಪ್ರವಾಸಿಗರು ಪ್ರತಿಮೆಯನ್ನು ತಲುಪಿ ವೀಕ್ಷಿಸಲು ಅನುಕೂಲ ಮಾಡಿಕೊಡಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಇದರ ಜತೆಗೆ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಗರಿಷ್ಠ 80 ವಾಹನಗಳಿಗೆ ಪಾರ್ಕಿಂಗ್ ಅವಕಾಶ ಕಲ್ಪಿಸಲಾಗುವುದು. ಈ ಅನುಕೂಲ ಒಂದು ವಾರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಪ್ರತಿಮೆ ವೀಕ್ಷಣೆಗೆ ಬರುವ ಪ್ರವಾಸಿಗರ ವಾಹನಗಳು ಗರಿಷ್ಠ ಅರ್ಧ ಗಂಟೆ ಕಾಲ ನಿಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

ಕಳೆದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ 108 ಅಡಿ ಎತ್ತರದ ಈ ಕಂಚಿನ ಪ್ರತಿಮೆ ಉದ್ಘಾಟಿಸಿದ ನಂತರ ಮಧ್ಯರಾತ್ರಿ ಒಂದು ಗಂಟೆಯಾದರೂ ಸಹಸ್ರಾರು ಜನರು ತಂಡೋಪತಂಡವಾಗಿ ಆಗಮಿಸುತ್ತಲೇ ಇದ್ದಾರೆ. ಬಂದವರಿಗೆ ನಿರಾಸೆ ಆಗಬಾರದೆನ್ನುವುದು ಸರ್ಕಾರದ ಬಯಕೆ. ಪ್ರತಿಮೆ ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸುವಂತೆ ಮಾಡಲು ರಾತ್ರಿ ವೇಳೆ ಬೆಳಕಿನ ಅಲಂಕಾರಕ್ಕೂ ವ್ಯವಸ್ಥೆ ಮಾಡಲಾಗುವುದು. ಥೀಮ್ ಪಾರ್ಕ್ ಕಾಮಗಾರಿ ಮುಗಿದ ಮೇಲೆ ಪ್ರತಿಮೆ ವೀಕ್ಷಣೆಗೆ ಮತ್ತಷ್ಟು ವ್ಯವಸ್ಥಿತ ಸೌಲಭ್ಯ ಮಾಡಲಾಗುವುದು. ಅಲ್ಲಿಯವರೆಗೆ ಇದು ತಾತ್ಕಾಲಿಕ ವ್ಯವಸ್ಥೆ ಆಗಿರುತ್ತದೆ. ಪ್ರತಿಮೆ ವೀಕ್ಷಣೆಗೆ ಯಾವುದೇ ಶುಲ್ಕ ಇಲ್ಲ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧಿಕಾರಿಗಳು ಮತ್ತು ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್ ದೀಪ್ ಇದ್ದರು.

ಇದನ್ನೂ ಓದಿ: ಖಡ್ಗದ ತೂಕವೇ 4 ಸಾವಿರ ಕೆಜಿ! ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ವಿಶೇಷತೆಗಳೇನು?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.