ETV Bharat / state

ಸಚಿವ ಸ್ಥಾನ ಹಂಚಿಕೆ: ಯಾವುದೇ ರೀತಿಯ ಅಸಮಾಧಾನ ಇಲ್ಲವೆಂದ ಶಾಸಕ

ರಾಜ್ಯ ಸಚಿವ ಸ್ಥಾನ ಹಂಚಿಕೆ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ರಾಷ್ಟ್ರ, ರಾಜ್ಯ ನಾಯಕರ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದು ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ.

ಶಾಸಕ ತಿಪ್ಪಾರೆಡ್ಡಿ
author img

By

Published : Aug 23, 2019, 4:25 PM IST

ಬೆಂಗಳೂರು: ಸಚಿವ ಸ್ಥಾನ ಹಂಚಿಕೆಯಲ್ಲಿ ನನಗೆ ಯಾವುದೇ ರೀತಿಯ ಅತೃಪ್ತಿ ಇಲ್ಲ. ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ತೀರ್ಮಾನಗಳಿಗೆ ನಾವು ಬದ್ಧರಾಗಿದ್ದೇವೆ ಎಂದು ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಶಾಸಕ ತಿಪ್ಪಾರೆಡ್ಡಿ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​​ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಸಂಭವಿಸಿದ ನೆರೆ ಹಾವಳಿ ಬಗ್ಗೆ ಸೂಕ್ತ ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದರು.

ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ಸ್ಥಾನಮಾನ‌ ನೀಡಲಿ, ಬಿಡಲಿ ನಾವು ಕೆಲಸ‌ ಮಾಡುತ್ತೇವೆ. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ಪ್ರಧಾನಿ ಮೋದಿ, ಗೃಹ ಸಚಿವ ಶಾ ಅವರ ಯೋಜನೆಗಳಂತೆ ಎಲ್ಲ ನಾಯಕರು, ಕಾರ್ಯಕರ್ತರು ನಡೆದುಕೊಳ್ಳುತ್ತಿದ್ದೇವೆ ಎಂದು ಶಾಸಕ ತಿಪ್ಪಾರೆಡ್ಡಿ ತಿಳಿಸಿದರು.

Intro:GggBody:KN_BNG_02_THIPPAREDDY_BYTE_SCRIPT_7201951

ನನಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ: ಶಾಸಕ ತಿಪ್ಪಾರೆಡ್ಡಿ

ಬೆಂಗಳೂರು: ನನಗೆ ಯಾವುದೇ ರೀತಿಯ ಅತೃಪ್ತಿ ಇಲ್ಲ ಎಂದು ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾವು ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ. ನಮ್ಮ ನಾಯಕ ಯಡಿಯೂರಪ್ಪರ ಜತೆಗಿದ್ದೇವೆ. ನಾವು ಪಕ್ಷದ ಚೌಕಟ್ಟಿನಲ್ಲಿ ಎಲ್ಲವನ್ನು ಚರ್ಚೆ ಮಾಡುತ್ತೇವೆ. ಕೇಂದ್ರದಲ್ಲಿ ಮೋದಿ ಮತ್ತು ಶಾ ಅವರ ನೇತೃತ್ವ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನಾಯಕತ್ವದಡಿ ನಾವು ಕೆಲಸ ಮಾಡುತ್ತೇವೆ. ಅವರಿಗೆ ನಮ್ಮ‌ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ.‌ ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ. ರಾಜ್ಯ ಅಭಿವೃದ್ಧಿ, ನೆರೆ ಸಂತ್ರಸ್ತರಿಗೆ ನೆರವು ನೀಡುವುದು ನಮ್ಮ ಆದ್ಯತೆ. ಮುಂದೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ನಿರ್ಧಾರ ಮಾಡುತ್ತದೆ. ಸ್ಥಾನಮಾನ‌ ನೀಡಲಿ ನೀಡದಿರಲಿ ನಾನು ಕೆಲಸ‌ ಮಾಡುತ್ತೇನೆ ಎಂದು ತಿಳಿಸಿದರು.

ಸಚಿವ ಸ್ಥಾನದ ಬಗ್ಗೆ ಯಡಿಯೂರಪ್ಪ ಜತೆ ಮಾತುಕತೆ ನಡೆಸಿಲ್ಲ. ಬೆಳಗಾವಿ ಶಾಸಕರೆಲ್ಲರೂ ಒಟ್ಟಾಗಿ ಇದ್ದಾರೆ. ಯಾವುದೇ ವಿರೋಧ, ಅಸಮಾಧಾನ ಇಲ್ಲ ಎಂದು ಇದೇ ವೇಳೆ ತಿಳಿಸಿದರು.

ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅದು ಪಕ್ಷದ ಹೈಕಮಾಂಡ್ ತೀರ್ಮಾನ‌. ಅದನ್ನು ಎಲ್ಲರೂ ಒಪ್ಪುತ್ತಾರೆ. ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಿದ್ದೇವೆ. ನಾವೆಲ್ಲರೂ ಒಗ್ಗಟ್ಟಾಗಿ ಇದ್ದೇವೆ. ಎಲ್ಲರೂ ನಮ್ಮವರೇ‌, ಎಲ್ಲವನ್ನು ನೋಡಿ ಹೈ ಕಮಾಂಡ್ ನಿರ್ಧಾರ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.Conclusion:Ggg
ETV Bharat Logo

Copyright © 2024 Ushodaya Enterprises Pvt. Ltd., All Rights Reserved.