ETV Bharat / state

ಲಾಕ್​ಡೌನ್​ಗೆ ಸಂಬಂಧಿಸಿದಂತೆ ಇನ್ನೆರಡು ದಿನ ಯಾವುದೇ ಸಭೆ ನಡೆಯಲ್ಲ: ವದಂತಿಗಳಿಗೆ ಸಿಎಂ ತೆರೆ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡಲಾಗುತ್ತಾ ಎನ್ನುವ ಚರ್ಚೆ ನಡೆಯುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಇನ್ನೂ ಎರಡು ದಿನಗಳ ಕಾಲ ಇದಕ್ಕೆ ಸಂಬಂಧಿಸಿ ಯಾವುದೇ ಸಭೆಗಳನ್ನು ನಡೆಸುವುದಿಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
author img

By

Published : Jul 3, 2020, 4:49 PM IST

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ಮಾಡುವ ಸಂಬಂಧ ಇನ್ನೂ ಎರಡು ದಿನಗಳ ಕಾಲ ಯಾವುದೇ ಸಭೆಗಳನ್ನು ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಲ್ಲದೇ ಎಸ್ಎಸ್ಎಲ್‌ಸಿ ಪರೀಕ್ಷೆ ಮುಗಿಯುತ್ತಿದ್ದಂತೆ ಲಾಕ್​ಡೌನ್ ಮಾಡಲಾಗುತ್ತದೆ ಎನ್ನುವ ವದಂತಿಗೆ ತೆರೆ ಎಳೆದಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡಲಾಗುತ್ತಾ ಎನ್ನುವ ಚರ್ಚೆ ನಡೆಯುತ್ತಿದೆ. ಈ ನಡುವೆ ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್ ಒಂದೇ ಪರಿಹಾರ ಎಂದು ತಜ್ಞರ ಸಮಿತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಸಲಹೆ ನೀಡಿತ್ತು. ತಜ್ಞರ ಸಮಿತಿಯ ಸಲಹೆಯಂತೆ ಲಾಕ್​​ಡೌನ್ ಜಾರಿ ಸಂಬಂಧ ಸಿಎಂ ಸಭೆ ನಡೆಸಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿನ್ನೆ ಮತ್ತು ಇಂದು ಲಾಕ್​ಡೌನ್ ಬಗ್ಗೆ ಯಾವುದೇ ಚರ್ಚೆ ಹಾಗೂ ಸಭೆ ನಡೆಸಿಲ್ಲ. ಇಂದು ಸಂಜೆ ಅಥವಾ ರಾತ್ರಿಯೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಇಂದು ಮಾತ್ರವಲ್ಲ ನಾಳೆ ಮತ್ತು ನಾಡಿದ್ದು ಎರಡು ದಿನ ಕೂಡ ಲಾಕ್​ಡೌನ್ ಜಾರಿಗೆ ಸಂಬಂಧಿಸಿದಂತೆ ಯಾವುದೇ ಸಭೆಗಳು ಇರುವುದಿಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.