ETV Bharat / state

ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಸಿದ್ದರಾಮಯ್ಯ - ಪರಿಸರ ಅನುಮತಿ ಪಡೆಯಲು ಬಿಜೆಪಿ ಸರ್ಕಾರಕ್ಕೆ ಆಗುತ್ತಿಲ್ಲ ಎಂದ ಸಿದ್ದು

ಪಾದಯಾತ್ರೆ ರಾಜಕೀಯಕ್ಕಾಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕುಡಿಯುವ ನೀರಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರವನ್ನು ಬಡಿದೆಬ್ಬಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲವೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah
ಸಿದ್ದರಾಮಯ್ಯ
author img

By

Published : Mar 1, 2022, 7:10 PM IST

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ. ಜನಹಿತಕ್ಕಾಗಿ ಜನ ಬೆಂಬಲದೊಂದಿಗೆ ನಡೆಯುತ್ತಿರುವ ಹೋರಾಟ ಇದಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪಾದಯಾತ್ರೆ ಮಾರ್ಗಮಧ್ಯೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಪಾದಯಾತ್ರೆ ರಾಜಕೀಯಕ್ಕಾಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕುಡಿಯುವ ನೀರಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರವನ್ನು ಬಡಿದೆಬ್ಬಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದೆ.‌ ಇನ್ನೂ ಮೇಕೆದಾಟು ಯೋಜನೆಗೆ ಪರಿಸರ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆದಿಲ್ಲ. ಇವರು ಬೆಂಗಳೂರು ಜನರಿಗೆ ದ್ರೋಹ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Siddaramaiah
ಕಾಂಗ್ರೆಸ್​ನಿಂದ ಮೇಕೆದಾಟು ಪಾದಯಾತ್ರೆ

ನೀವೆಲ್ಲಾ ಹಬ್ಬದ ದಿನದಂದು ಬಂದಿದ್ದೀರಿ: ಹಬ್ಬ ಬಿಟ್ಟು ಬಂದಿದ್ದಕ್ಕೆ ಕಾರ್ಯಕರ್ತರಿಗೆ ನಮೋ ನಮಃ. ದಿನೇ ದಿನೇ ಕಾರ್ಯಕರ್ತರಿಗೆ ಉತ್ಸಾಹ ಜಾಸ್ತಿಯಾಗುತ್ತಿದೆ.‌ ಇದು ನಿಜಕ್ಕೂ ನಮಗೆ ಉತ್ತೇಜನ ನೀಡುತ್ತಿದೆ. ನಮ್ಮ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಬೆಂಬಲ ನೀಡ್ತಿದ್ದಾರೆ. ನಮ್ಮ ಹೋರಾಟ ಯಶಸ್ವಿಯಾಗುತ್ತೆ. ರಾಜಕೀಯ ಹೋರಾಟ ಅನ್ನೋ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಸವರಾಜ ಬೊಮ್ಮಾಯಿ ಹೋರಾಟದ ಮೂಲಕ ಬಂದವರಲ್ಲ. ಪಾದಯಾತ್ರೆ ಅನ್ನೋ ಕಲ್ಪನೆ ಸಹ ಇವರಿಗಿಲ್ಲ. ಯಡಿಯೂರಪ್ಪ ಮೂಲಕ ಅಧಿಕಾರಕ್ಕೆ ಬಂದವರು ಎಂದು ಟಾಂಗ್​ ಕೊಟ್ಟರು.

Siddaramaiah
ಕಾಂಗ್ರೆಸ್​ನಿಂದ ಮೇಕೆದಾಟು ಪಾದಯಾತ್ರೆ

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬೊಮ್ಮಾಯಿ ಬಂದಿಲ್ಲ. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿದ್ದಕ್ಕೆ ಇವರು ಅಧಿಕಾರಕ್ಕೆ ಬಂದ್ರು. ಶಿವರಾತ್ರಿ ಹಬ್ಬ ಇದ್ರು ಜನ ನಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಬಜೆಟ್ ಅಧಿವೇಶನದಲ್ಲಿ ವಿಷಯ ಪ್ರಸ್ತಾಪ ಮಾಡ್ತೀವಿ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರ್ತಿವಿ. ಜನರ ಆಶೀರ್ವಾದ ನಮ್ಮ ಮೇಲಿದೆ. ನಮ್ಮ ಸರ್ಕಾರ ಮೇಕೆದಾಟು ಯೋಜನೆಗೆ 2017 ರಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಿ, ಕೇಂದ್ರ ಜಲಮಂಡಳಿಗೆ ನೀಡಿತ್ತು. ಅವರು ಕೆಲವು ಮಾಹಿತಿ ಕೇಳಿ ರಾಜ್ಯಕ್ಕೆ ವಾಪಸ್​​ ಕಳುಹಿಸಿದ್ದರು. ಆಗ ನಮ್ಮ ಸರ್ಕಾರ ಇರಲಿಲ್ಲ, ಸಮ್ಮಿಶ್ರ ಸರ್ಕಾರ ಇತ್ತು. ಈ ವೇಳೆ ಡಿ.ಕೆ ಶಿವಕುಮಾರ್ ಜಲ ಸಂಪನ್ಮೂಲ ಸಚಿವರಾಗಿದ್ದರು. ಅವರು ಕೇಂದ್ರ ಜಲಮಂಡಳಿ ಕೇಳಿದ್ದ ಹೆಚ್ಚಿನ ಮಾಹಿತಿಯನ್ನು ಒದಗಿಸಿದ್ದರು ಮತ್ತು ಪರಿಷ್ಕೃತ ಯೋಜನಾ ವರದಿ ಮಾಡಿ ಕಳಿಸಿದ್ದರು ಎಂದು ಹೇಳಿದರು.

ಇದನ್ನೂ ಓದಿ: ಉಕ್ರೇನ್​ನಲ್ಲಿ ಕನ್ನಡಿಗ ನವೀನ್​ ಸಾವು: ಸೋದರ ಸಂಬಂಧಿ ಹೇಳಿದ್ದಿಷ್ಟು

ಇನ್ನುಳಿದಿರೋದು ಪರಿಸರ ಅನುಮತಿ ಮಾತ್ರ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂತು, ಯಡಿಯೂರಪ್ಪ ಎರಡು ವರ್ಷ, ಬಸವರಾಜ ಬೊಮ್ಮಾಯಿ ಏಳು ತಿಂಗಳು ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಿದ್ದಾರೆ. ಇಷ್ಟು ಸಮಯದಲ್ಲಿ ಒಂದು ಪರಿಸರ ಅನುಮತಿ ಪಡೆಯಲು ಈ ಸರ್ಕಾರದಿಂದ ಸಾಧ್ಯವಾಗಿಲ್ಲ. ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ವ್ಯಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಎಫ್​​ಐಆರ್ ಮೂಲಕ ಹೆದರಿಸುತ್ತಿದ್ದಾರೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಜನಪರ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲವೆಂದು ಖಡಕ್ಕಾಗಿ ತಿಳಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.