ETV Bharat / state

ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ: ಸಚಿವ ಅಶ್ವತ್ಥನಾರಾಯಣ

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮತ್ತಷ್ಟು ವಿಸ್ತರಿಸುವ ಆಲೋಚನೆ ಸರ್ಕಾರಕ್ಕಿದೆಯೇ ಹೊರತು ಮುಚ್ಚುವ ಪ್ರಶ್ನೆಯೇ ಇಲ್ಲ. ಸಮಕಾಲೀನ ಜಗತ್ತಿನಲ್ಲಿ ಮಹಿಳೆಯರ ಕುರಿತ ಅಧ್ಯಯನ ವಿಸ್ತೃತವಾಗಿ ನಡೆಯಬೇಕಾಗಿದೆ. ಇದಕ್ಕೆ ತಕ್ಕಂತೆ ಮಹಿಳಾ ವಿ.ವಿ.ಯ ಚಟುವಟಿಕೆಗಳನ್ನು ಹೇಗೆ ವಿಸ್ತರಿಸಬೇಕು ಎನ್ನುವ ಕುರಿತು ಸಮಾಲೋಚಿಸಲಾಗುತ್ತಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಚಿವ ಅಶ್ವತ್ಥನಾರಾಯಣ
ಸಚಿವ ಅಶ್ವತ್ಥನಾರಾಯಣ
author img

By

Published : Jan 24, 2022, 5:44 PM IST

ಬೆಂಗಳೂರು: ವಿಜಯಪುರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮತ್ತಷ್ಟು ವಿಸ್ತರಿಸುವ ಆಲೋಚನೆ ಸರ್ಕಾರಕ್ಕಿದೆಯೇ ವಿನಾ ಅದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಇದರ ಜೊತೆಗೆ, ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ನೂತನ ಕ್ಯಾಂಪಸ್ ನಿರ್ಮಾಣ ಮಾಡುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಸಮಕಾಲೀನ ಜಗತ್ತಿನಲ್ಲಿ ಮಹಿಳೆಯರ ಕುರಿತ ಅಧ್ಯಯನ ವಿಸ್ತೃತವಾಗಿ ನಡೆಯಬೇಕಾಗಿದೆ. ಇದಕ್ಕೆ ತಕ್ಕಂತೆ ಮಹಿಳಾ ವಿ.ವಿ.ಯ ಚಟುವಟಿಕೆಗಳನ್ನು ಹೇಗೆ ವಿಸ್ತರಿಸಬೇಕು ಎನ್ನುವ ಕುರಿತು ಸಮಾಲೋಚಿಸಲಾಗುತ್ತಿದೆ. ಆದರೆ ಕೆಲವರು ವಿನಾ ಕಾರಣ ಗುಲ್ಲೆಬ್ಬಿಸುತ್ತಿರುವುದು ವಿಷಾದನೀಯ’ ಎಂದರು.

ಇದನ್ನೂ ಓದಿ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ಸಿಎಂ ಬೊಮ್ಮಾಯಿ ಆದೇಶ

ಸಂಸ್ಕೃತ ವಿವಿ ಕ್ಯಾಂಪಸ್ ನಿರ್ಮಾಣ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಈ ವಿವಿ 13 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಆದರೆ ಇದುವರೆಗೂ ಇದಕ್ಕೊಂದು ಸ್ವತಂತ್ರ ಮತ್ತು ಸುಸಜ್ಜಿತ ಕ್ಯಾಂಪಸ್ ಇರಲಿಲ್ಲ. ನಮ್ಮ ಸರ್ಕಾರ ಅದನ್ನು ಮಾಡುತ್ತಿದೆ ಅಷ್ಟೇ. ಮ್ಯಾಕ್ಸ್ ಮುಲ್ಲರ್ ಭವನಕ್ಕೆ ಹೋಗಿ ನೋಡಿದರೆ ಸಂಸ್ಕೃತ ಅಧ್ಯಯನವನ್ನು ನಾವು ಏಕೆ ಮಾಡಬೇಕೆನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಸ್ವಾಗತಿಸಲೂ ಇಲ್ಲ: ಕನ್ನಡಕ್ಕೆ ನಮ್ಮ ಸರ್ಕಾರ ಕೊಟ್ಟಿರುವಷ್ಟು ಆದ್ಯತೆಯನ್ನು ಯಾರೂ ಕೊಟ್ಟಿರಲಿಲ್ಲ. ಪದವಿಯಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದಾಗ ನಮ್ಮ ಕನ್ನಡ ಹೋರಾಟಗಾರರು ಕನಿಷ್ಠ ಪಕ್ಷ ಅದನ್ನು ಸ್ವಾಗತಿಸಲೂ ಇಲ್ಲ. ಈಗ ಹೈಕೋರ್ಟ್ ಇದಕ್ಕೆ ತಡೆ ನೀಡಿದ್ದು, ಮಧ್ಯಂತರ ಆಜ್ಞೆ ನೀಡಿದೆ. ಅದನ್ನು ಪುರಸ್ಕರಿಸಿ ನಾವು ಕನ್ನಡ ಕಲಿಕೆಯನ್ನು ಸದ್ಯಕ್ಕೆ ತಡೆ ಹಿಡಿದಿದ್ದೇವಷ್ಟೇ ಎಂದು ಸಚಿವರು ತಿಳಿಸಿದರು.

ಹಂಪಿ ಕನ್ನಡ ವಿ.ವಿ.ಯಲ್ಲಿ ಕೋವಿಡ್ ಸಮಸ್ಯೆ ಹಿನ್ನೆಲೆ ಪ್ರಸಾರಾಂಗ ಸ್ಥಗಿತವಾಗಿದೆ. ಇದರಿಂದಾಗಿ, ಅವರಿಗೆ ವರ್ಷಕ್ಕೆ ಬರುತ್ತಿದ್ದ 4 ಕೋಟಿ ರೂ.ಗಳಷ್ಟು ಆದಾಯ ನಿಂತು ಹೋಗಿದೆ. ಆ ವಿ.ವಿ.ಗೆ ಅನುದಾನ ಕೊಡುವುದಿಲ್ಲ ಎಂದು ಎಲ್ಲೂ ಹೇಳಿಲ್ಲ. ಏನನ್ನೇ ಮಾಡುವುದಕ್ಕೂ ಮೊದಲು ಆರ್ಥಿಕ ಪರಿಸ್ಥಿತಿಯನ್ನೂ ಅವಲೋಕಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಅತಿಥಿ ಉಪನ್ಯಾಸಕರ ನೇಮಕಾತಿ ಚುರುಕು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 60 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಪ್ರಕ್ರಿಯೆಯ ಮುಂದಿನ ಹೆಜ್ಜೆಗಳನ್ನು ಇನ್ನು ಎರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಸಚಿವರು ವಿವರಿಸಿದರು.

ಸರ್ಕಾರವು ಅತಿಥಿ ಉಪನ್ಯಾಸಕರ ವೇತನವನ್ನು ಎರಡೂವರೆ ಪಟ್ಟಿಗಿಂತಲೂ ಹೆಚ್ಚಿಸಿದೆ. ಈ ಹಂತದಲ್ಲಿ ಅವರ ಸಂಘಟನೆಗಳು ಮತ್ತು ವಿಧಾನಪರಿಷತ್ತಿನ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿತ್ತು. ಆದರೂ ಅತಿಥಿ ಉಪನ್ಯಾಸಕರು ಮುಷ್ಕರ ಮುಂದುವರಿಸುತ್ತಿರುವುದು ಸರಿಯಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.