ಬೆಂಗಳೂರು : ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಬಳಸಲಾಗುವ ಔಷಧಿಗೆ ಕೊರತೆ ಇಲ್ಲ. ಈಗಾಗಲೇ ಕೇಂದ್ರದಿಂದ 1,000 ವೈಲ್ಸ್ ಬಂದಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದರು.
ನಗರದ ಬಂಟರ ಸಂಘವು ಹೋಮ್ ಐಸೋಲೇಷನ್ ಆಗಿರುವ ಕೋವಿಡ್ ಸೋಂಕಿತರಿಗಾಗಿ ವ್ಯವಸ್ಥೆ ಮಾಡಿರುವ 20 ಆಮ್ಲಜನಕ ಸಾಂದ್ರಕಗಳಿಗೆ ಚಾಲನೆ ಕೊಟ್ಟು ಅವರು ಮಾತನಾಡಿದರು.
ಓದಿ : ಸಿ ಟಿ ರವಿಯವರೇ, ಸಾಕು ಮಾಡಿ ಈ ನಾಟಕ.. ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ..
ಬೌರಿಂಗ್ ಆಸ್ಪತ್ರೆ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಬ್ಲ್ಯಾಕ್ ಫಂಗಸ್‌ಗೆ ಉಚಿತ ಚಿಕಿತ್ಸೆ ಕೊಡಲಾಗುತ್ತಿದೆ. ಎಲ್ಲಿಯೂ ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಕೇಂದ್ರದಿಂದ ಇನ್ನೂ ಹೆಚ್ಚಿನ ಔಷಧಿ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಹೇಳಿದರು.