ETV Bharat / state

ಬಿತ್ತನೆ ಬೀಜ- ರಸಗೊಬ್ಬರ ಕೊರತೆ ಇಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ - Agriculture Minister Chaluvarayaswamy

ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಬರುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ರಾಜೇಶ್ ನಾಯಕ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

Agriculture Minister Chaluvarayaswamy
Agriculture Minister Chaluvarayaswamy
author img

By

Published : Jul 5, 2023, 8:06 PM IST

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾದರೂ ಕಳೆದ ಒಂದುವಾರದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ರಾಜೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದ್ದು, ರೈತ ಸಂಪರ್ಕ ಕೇಂದ್ರಗಳಿಗೆ ಪೂರೈಕೆ ಮಾಡಲಾಗುತ್ತಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು. 2023-24 ನೇ ಸಾಲಿನ ಕಾರ್ಯಕ್ರಮಗಳ ಕ್ರಿಯಾ ಯೋಜನೆ, ಮಾರ್ಗಸೂಚಿ ಹಾಗೂ ಕೃಷಿ ಪರಿಕರಗಳ ದರ ಕರಾರಿನ ಅನ್ವಯ ಕೃಷಿ ಪರಿಕರಗಳನ್ನು ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ ಎಂದು ಇದೇ ವೇಳೆ ಸಚಿವರು ಹೇಳಿದರು.

ಅಂಬೇಡ್ಕರ್ ಭವನಗಳ ಉಪಯುಕ್ತತೆ ಕುರಿತಂತೆ ಸಮಗ್ರ ವರದಿ: ರಾಜ್ಯದಲ್ಲಿ ನಿರ್ಮಾಣಗೊಂಡಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನಗಳ ಉಪಯುಕ್ತತೆ ಕುರಿತಂತೆ ಸಮಗ್ರ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಮಾಜಕಲ್ಯಾಣ ಸಚಿವ. ಡಾ. ಎಚ್.ಸಿ.ಮಹದೇವಪ್ಪ ಅವರು, ಆಡಳಿತ ಪಕ್ಷದ ಸದಸ್ಯ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.

ಈಗಾಗಲೇ 7680 ಅಂಬೇಡ್ಕರ್ ಭವನಗಳನ್ನು ರಾಜ್ಯದ ವಿವಿಧ ಕಡೆಗಳಲ್ಲಿ 1745 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಅವೆಲ್ಲಾ ಸಮರ್ಪಕವಾಗಿ ಬಳಕೆಯಾಗುತ್ತಿವೆಯೇ, ಇಲ್ಲವೇ? ಎಂಬುದರ ಬಗ್ಗೆ ವರದಿ ಕೇಳಲಾಗಿದೆ. ವಿವಿದ್ದೋದ್ದೇಶಗಳಿಗೆ ಬಳಕೆ ಮಾಡಿಕೊಂಡಲ್ಲಿ ಭವನಗಳ ನಿರ್ಮಾಣದ ಉದ್ದೇಶ ಸಾರ್ಥಕವಾಗಲಿದ್ದು, ಗ್ರಂಥಾಲಯ, ವಿವಿಧ ತರಬೇತಿ ಸೌಲಭ್ಯ ಸೇರಿದಂತೆ ಸಾಮಾಜಿಕ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ವರದಿ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಗ್ರಾಮ, ಹೋಬಳಿ, ತಾಲೂಕು ಮಟ್ಟದಲ್ಲಿ ಅಂಬೇಡ್ಕರ್ ಭವನಗಳನ್ನು ನಿರ್ಮಿಸಲು ಕ್ರಮವಾಗಿ 20 ಲಕ್ಷ ರೂ, ಹೋಬಳಿಗೆ 75 ಲಕ್ಷ ರೂ., ತಾಲೂಕಿಗೆ 2 ಕೋಟಿ ರೂ., ಜಿಲ್ಲೆಗೆ 4 ಕೋಟಿ ರೂ. ನೀಡಲಾಗುತ್ತಿದೆ. ಈ ಪ್ರಮಾಣದಲ್ಲಿ ಖರ್ಚು ಮಾಡಿ ಭವನಗಳನ್ನು ನಿರ್ಮಿಸಿ ಅವು ಸದ್ಭಳಕೆ ಆಗಲಿಲ್ಲವೆಂದರೆ ಸಾರ್ವಜನಿಕರ ಹಣ ವ್ಯರ್ಥವಾಗಲಿದೆ. ಇದಕ್ಕೆ ಅವಕಾಶ ಕೊಡದೆ ಭವನಗಳನ್ನು ಸಾಮಾಜಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅವಕಾಶ ಮಾಡಿಕೊಡುವ ಚಿಂತನೆ ತಮ್ಮದಾಗಿದೆ. ಈ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಶಾಸಕ ಅಪ್ಪಾಜಿ ನಾಡಗೌಡ, ತಾಲೂಕಿಗೊಂದು ಅಥವಾ ದೊಡ್ಡ ಪಟ್ಟಣಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಿದರೆ ವಿವಿಧ ಸಮುದಾಯದವರು ಮದುವೆ ಮತ್ತಿತರ ಸಮಾರಂಭಗಳನ್ನು ನಡೆಸಲು ಬಡವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಶಾಸಕರಾದ ನಾರಾಯಣಸ್ವಾಮಿ ಸೇರಿದಂತೆ ಹಲವು ಶಾಸಕರು ಇದಕ್ಕೆ ಧ್ವನಿಗೂಡಿಸಿ, ಅಪೂರ್ಣಗೊಂಡಿರುವ ಅಂಬೇಡ್ಕರ್ ಭವನಗಳನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ: Legislative council Session: ಕಂದಾಯ ಭೂಮಿ ಒತ್ತುವರಿ ತೆರವಿಗೆ ಕ್ರಮ ಹಾಗು ಬಿಗಿ ವ್ಯವಸ್ಥೆ ಮಾಡಲಿದ್ದೇವೆ.. ಸಚಿವ ಕೃಷ್ಣ ಬೈರೇಗೌಡ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.