ETV Bharat / state

ನಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ: ಸಚಿವ ಈಶ್ವರ್ ಖಂಡ್ರೆ - ಈಟಿವಿ ಭಾರತ್​ ಕನ್ನಡ ನ್ಯೂಸ್

ವರ್ಗಾವಣೆ ದಂಧೆ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ವಿಕಾಸೌಧದಲ್ಲಿ ಮಾತನಾಡಿದರು.

Etv Bharat
Etv Bharat
author img

By

Published : Jul 27, 2023, 10:31 PM IST

ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ನಮ್ಮ‌ಇಲಾಖೆಯಲ್ಲಿ ಟ್ರಾನ್ಸಫರ್ ದಂಧೆ ನಡೆದಿಲ್ಲ, ನಡೆಯುವುದಿಲ್ಲ. ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಎಲ್ಲರ ಸಮ್ಮುಖದಲ್ಲಿ ನಾನು ಮಂತ್ರಿಯಾಗಿ ಚುರುಕು ಮುಟ್ಟಿಸುವಂತ ಕೆಲಸ ಮಾಡುತ್ತಿದ್ದೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ವಿಕಾಸೌಧದಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗೆ ಸಂಬಂಧಿಸಿದ ಶಾಸಕರಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿ.ಆರ್. ಪಾಟೀಲ್ ಪತ್ರ ಬರೆದಿದ್ದಾರೆ ಎನ್ನಲಾದ ಬಗ್ಗೆ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಆ ಪತ್ರವನ್ನು ಬಿಜೆಪಿಯವರು ತಿರುಚಿ ಕಟ್ ಅಂಡ್ ಪೇಸ್ಟ್ ಮಾಡಿ ಆ್ಯಡ್ ಮಾಡಿದ್ದಾರೆ ಎಂದು ಕಾನೂನು ಕ್ರಮ ತೆಗೆದುಕೊಳ್ಳಲು ದೂರು ಕೊಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಸಭೆ ಕೂಡಾ ಕರೆಯಲಾಗಿದೆ. ನಮ್ಮ‌ ಸರ್ಕಾರ 2,000 ಕೋಟಿ ರೂ. ಜೊತೆಗೆ 3,000 ಕೋಟಿ ರೂ. ಅನುದಾನ‌ ಕೊಟ್ಟಿದೆ. ಒಟ್ಟು 5,000 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು. ಬಳಿಕ ಉಡುಪಿ ಕಾಲೇಜು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ರೀತಿಯಲ್ಲಿ ಏನು ಕ್ರಮ ಆಗಬೇಕೋ ಆಗುತ್ತೆ. ಇಂತಹ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದಕ್ಕೆ ಆಗುವುದಿಲ್ಲ. ಹಾಗೆಯೇ ಯಾರನ್ನೂ ಓಲೈಕೆ ಮಾಡುವ ಕೆಲಸ ನಡೆಯಲ್ಲ. ಸರ್ಕಾರ ಈ ವಿಚಾರದಲ್ಲಿ ಆಲಸ್ಯ ಮಾಡುವುದಿಲ್ಲ. ಯಾವುದೇ ವಿಷಯ ಬೆಳಕಿಗೆ ಬಂದ ತಕ್ಷಣ ಕ್ರಮ ಆಗುತ್ತೆ ಎಂದರು.

ಶಾಸಕರಿಗೆ ಸ್ಪಂದನೆ ಮಾಡುತ್ತಿದ್ದಾರೆ : ಇದೇ ವೇಳೆ ಸಚಿವ ರಹೀಂ ಖಾನ್, ಶಾಸಕರ ಅಸಮಾಧಾನ ವಿಚಾರವಾಗಿ ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳಷ್ಟೇ ಆಗಿದೆ. ಜೊತೆಗೆ ಈಗಷ್ಟೇ ಬಜೆಟ್ ಮುಗಿದಿದ್ದು, ಈ ತಿಂಗಳು ಅಥವಾ ಮುಂದಿನ ತಿಂಗಳು ಯಾವ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಬೇಕು ಎಂಬುದನ್ನು ಡಿಸೈಡ್ ಮಾಡುತ್ತಾರೆ. ಸಚಿವರು ಎಲ್ಲಾ ಶಾಸಕರಿಗೂ ಸ್ಪಂದನೆ ಮಾಡುತ್ತಿದ್ದಾರೆ. ನಮಗೂ ಇದರ ಬಗ್ಗೆ ಅನುಭವ ಇದೆ. ನನ್ನಿಂದ ಏನು ಸಹಾಯ ಬೇಕು ಅದನ್ನು ಮಾಡುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಚಂದ್ರು ಆರೋಪ : ನಿನ್ನೆ ರಾಜ್ಯ ಸರ್ಕಾರವು ವರ್ಗಾವಣೆ ದಂಧೆಯಲ್ಲಿ ಮುಳುಗಿರುವ ಅನುಮಾನ ಇದೆ ಎಂದು ಆಮ್​ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ವರ್ಗಾವಣೆ ದಂಧೆ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಸರ್ಕಾರದ ಮಂತ್ರಿ ಮಹೋದಯರು ವರ್ಗಾವಣೆ ದಂಧೆ ನಿಜ ಎಂಬುದು ಅವರದೇ ಪಕ್ಷದ ಹಿರಿಯ ಶಾಸಕ ಬಿ. ಆರ್. ಪಾಟೀಲರ ಪತ್ರದಿಂದ ಸಾಬೀತಾಗುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ : ನಂದಿನಿ ಹಾಲು ದರ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ: ಶಾಸಕರ ಅಸಮಾಧಾನದ ಬಗ್ಗೆಯೂ ಚರ್ಚೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.