ಬೆಂಗಳೂರು : ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಕ್ ಔಟ್ ರೆಸ್ಟೋರೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ. ಇಂದು ನಸುಕಿನಲ್ಲಿ ರೆಸ್ಟೋರೆಂಟ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಅಗ್ನಿ ವ್ಯಾಪಿಸಿದೆ. ಇದರ ಪರಿಣಾಮ ರೆಸ್ಟೋರೆಂಟ್ನಲ್ಲಿದ್ದ 25 ಲಕ್ಷ ಮೌಲ್ಯದ ಪೀಠೋಪಕರಣಗಳು ಧ್ವಂಸವಾಗಿವೆ.
ಓದಿ: ಮನೆಗಳ್ಳನ ಬಂಧನ : ಚಿನ್ನಾಭರಣ ವಶ
ಸುದ್ದಿ ತಿಳಿದು ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಬಂದಿದ್ದು, ಕೂಡಲೇ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.