ETV Bharat / state

ಗರ್ಭಿಣಿ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಪೂರೈಸುವ ಬಗ್ಗೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ - ಶ್ವೇಶ್ವರ ಹೆಗಡೆ ಕಾಗೇರಿ

ಕೋವಿಡ್ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ಬರಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಅವರ ಮನೆ ಬಾಗಿಲಿಗೆ ಕಚ್ಚಾ ಆಹಾರ ಪದಾರ್ಥಗಳನ್ನು ವಿತರಿಸಿದ್ದೆವು ಎಂದು ಉತ್ತರಿಸಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ
author img

By

Published : Feb 3, 2021, 5:52 PM IST

ಬೆಂಗಳೂರು: ಗರ್ಭಿಣಿ ಮತ್ತು ಬಾಣಂತಿಯರಿಗೆ ರಾಜ್ಯಾದ್ಯಂತ ಮನೆ ಮನೆಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಸುವ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆ ಶಾಸಕ ಸಂಜೀವ್ ಮಠಂದೂರ್ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಮಡಿಕೇರಿ, ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಗರ್ಭಿಣಿ ಮತ್ತು ಬಾಣಂತಿಯರಿಗೆ ಮನೆ ಮನೆಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಇದು ರಾಜ್ಯಾದ್ಯಂತ ವಿಸ್ತರಣೆಯಾಗಬೇಕೆಂಬ ಬೇಡಿಕೆಯಿದೆ. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೋವಿಡ್ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ಬರಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಅವರ ಮನೆ ಬಾಗಿಲಿಗೆ ಕಚ್ಚಾ ಆಹಾರ ಪದಾರ್ಥಗಳನ್ನು ವಿತರಿಸಿದ್ದೆವು. ಅಂಗನವಾಡಿ ಕೇಂದ್ರಗಳು ತೆರೆದ ನಂತರ ಈ ಹಿಂದೆ ಇದ್ದಂತೆ ಕೇಂದ್ರಗಳಲ್ಲಿಯೇ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ ಎಂದು ಉತ್ತರಿಸಿದರು.

ಈ ವೇಳೆ, ಮಧ್ಯಪ್ರವೇಶ ಮಾಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮಲೆನಾಡು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಈ ಸಮಸ್ಯೆಯಿದೆ. ಇದನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಎಂದು ಸೂಚಿಸಿದರು.

ಅಂಗನವಾಡಿಗಳಲ್ಲಿ ಮಕ್ಕಳಿಗೆ ಕಾರ್ಯಕರ್ತೆಯರು ಮೊಟ್ಟೆಗಳನ್ನು ವಿತರಣೆ ಮಾಡಲಾಗುತ್ತಿದ್ದು, ಕೆಲವು ಸಂದರ್ಭದಲ್ಲಿ ದರದಲ್ಲಿ ಪರಿಷ್ಕೃತವಾದಾಗ ಅವರಿಗೆ ಹೊರೆಯಾಗುತ್ತಿರುವುದು ಕಂಡುಬಂದಿದೆ. ಮುಂದೆ ಈ ರೀತಿಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ನೀಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೂ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ನೀರು ಎಂದು ಸ್ಯಾನಿಟೈಸರ್​ ಕುಡಿದ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೊರೇಷನ್​ ಕಮೀಷನರ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.