ETV Bharat / state

ಇದು ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡುವ ಬಜೆಟ್‌: ಸಚಿವ ಜಗದೀಶ‌ ಶೆಟ್ಟರ್‌ - CM Yediyurappa's budget speech

ಕೈಗಾರಿಕೋದ್ಯಮಿಗಳ ಬಹುದಿನಗಳ ಬೇಡಿಕೆಯಾಗಿದ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗಾರಿಕೆಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ಸ್ಲಾಬ್‌ ನಿಗದಿಗೆ ಕ್ರಮ ಘೋಷಣೆಯಿಂದಾಗಿ ಕೈಗಾರಿಕಾ ಸ್ಥಾಪನೆಗೆ ಪ್ರೋತ್ಸಾಹ ದೊರಕಲಿದೆ ಎಂದಿದ್ದಾರೆ.

this-is-a-budget-that-encourages-women-entrepreneurs-says-jagdish-shetter
ಇದು ಮಹಿಳಾ ಉದ್ಯಮಿಗಳಿಗೆ ಉತ್ತೇಜನ ನೀಡುವ ಬಜೆಟ್‌
author img

By

Published : Mar 8, 2021, 5:22 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಇಂದು 8ನೇ ಬಾರಿಗೆ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯದ ಮಹಿಳಾ ಉದ್ಯಮಿಗಳು ಹಾಗೂ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸ್ಪಷ್ಟ ದೂರದರ್ಶಿತ್ವ ಮತ್ತು ಮಾರ್ಗದರ್ಶಿಗಳನ್ನು ನೀಡಿದ್ದಾರೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ.

ವಿಶ್ವ ಹೂಡಿಕೆದಾರರ ಸಮ್ಮೇಳನ ಆಯೋಜನೆ ಮತ್ತು ಕೃಷಿ ಭೂಮಿಯನ್ನು ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಭೂ ಕಂದಾಯ ಅಧಿನಿಯಮ ತಿದ್ದುಪಡಿಯ ಭರವಸೆ ನೀಡುವ ಮೂಲಕ ರಾಜ್ಯ ಕೈಗಾರಿಕಾಭಿವೃದ್ದಿಗೆ ಸಜ್ಜಾಗಿದೆ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಅವರು ಮಂಡಿಸಿರುವ ಬಜೆಟ್​​​ನಲ್ಲಿ ರಾಜ್ಯದ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ಸ್ಪಷ್ಟ ಮಾರ್ಗದರ್ಶನವನ್ನು ನೀಡಿದ್ದಾರೆ. ಸೇವಾ ವಲಯದ ಮಹಿಳಾ ಉದ್ಯಮಿಗಳಿಗೆ ಶೇ 4ರ ರಿಯಾಯಿತಿ ಬಡ್ಡಿದರದಲ್ಲಿ 2 ಕೋಟಿವರೆಗಿನ ಸಾಲ ಸೌಲಭ್ಯ. ಸಂಜೀವಿನಿ ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳಿಗೆ ಆರು ಸಾವಿರ ಸಣ್ಣ ಉದ್ಯಮ ಸ್ಥಾಪನೆಗೆ ಪಂಚಾಯತ್‌ ರಾಜ್ ಸಂಸ್ಥೆಗಳ ಮೂಲಕ ಬೆಂಬಲ ನೀಡುವ ಘೋಷಣೆ ಮೂಲಕ 60 ಸಾವಿರ ಮಹಿಳೆಯರಿಗೆ ಉದ್ಯೋಗ ದೊರೆಯುವ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಮಹಿಳೆಯರ ಸಣ್ಣ ಉದ್ಯಮಗಳಿಗೆ ತಾಂತ್ರಿಕ ನೆರವು, 2,260 ಕಿರು ಉದ್ದಿಮೆಗಳ ಮೂಲಕ 25 ಸಾವಿರ ಮಹಿಳೆಯರಿಗೆ ಉತ್ತೇಜನ ಹಾಗೂ ಮಹಿಳೆಯರು ಉದ್ಯೋಗ ಕೈಗೊಳ್ಳಲು ಪೂರಕ ವಾತಾವರಣ ನಿರ್ಮಾಣಕ್ಕಾಗಿ ವಿವಿಧ ನಿಯಮಾವಳಿಗಳ ಮರುಪರಿಶೀಲನೆ ಮಾಡುವ ಭರವಸೆಯಿಂದಾಗಿ ಮಹಿಳಾ ಉದ್ಯಮಗಳು ಹೆಚ್ಚಾಗಲಿವೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಬಲ್ಕ್‌ ಡ್ರಗ್‌ ಪಾರ್ಕ್, ಪ್ಲಾಸ್ಟಿಕ್‌ ಪಾರ್ಕ್ ನಿರ್ಮಾಣ

ಯಾದವಗಿರಿ ಜಿಲ್ಲೆಯ ಕಡೇಚೂರಿನಲ್ಲಿ 1,478 ಕೋಟಿ ವೆಚ್ಚದಲ್ಲಿ ಬಲ್ಕ್‌ ಡ್ರಗ್‌ ಪಾರ್ಕ್‌ ಹಾಗೂ ಮಂಗಳೂರಿನಲ್ಲಿ 66 ಕೋಟಿ ವೆಚ್ಚದಲ್ಲಿ 66 ಕೋಟಿ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣ ಮತ್ತು ಬೀದರ್​ನ ಕೃಷಿ ಉಪಕರಣಗಳ ತಯಾರಿಕಾ ಕ್ಲಸ್ಟರ್​​​ನಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್‌ ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ರಾಜ್ಯದ 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಒತ್ತು ನೀಡಿದೆ ಎಂದರು.

ಕೈಗಾರಿಕೋದ್ಯಮಿಗಳ ಬಹುದಿನಗಳ ಬೇಡಿಕೆಯಾಗಿದ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗಾರಿಕೆಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ಸ್ಲಾಬ್‌ ನಿಗದಿಗೆ ಕ್ರಮ ಘೋಷಣೆಯಿಂದಾಗಿ ಕೈಗಾರಿಕಾ ಸ್ಥಾಪನೆಗೆ ಪ್ರೋತ್ಸಾಹ ದೊರಕಲಿದೆ ಎಂದಿದ್ದಾರೆ.

ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು – ಮುಂಬೈ ಕಾರಿಡಾರ್​​​ನ ವ್ಯಾಪ್ತಿಯಲ್ಲಿ ಎರಡು ಕಡೆಗಳಲ್ಲಿ ತಲಾ ಕನಿಷ್ಠ 500 ಏಕರೆ ಜಾಗದಲ್ಲಿ ಮುಖ್ಯಮಂತ್ರಿಗಳ ಸಂಯೋಜಿತ ಕೈಗಾರಿಕಾ ಟೌನ್‌ ಶಿಪ್‌ಗಳ ಸ್ಥಾಪನೆಯ ಘೋಷಣೆಯಿಂದಾಗಿ, ಮುಂದಿನ 3 ವರ್ಷಗಳಲ್ಲಿ 10 ಸಾವಿರ ಕೋಟಿ ಬಂಡವಾಳ ಆಕರ್ಷಣೆ ಹಾಗೂ 5 ಲಕ್ಷ ಉದ್ಯೋಗಾವಕಾಶ ಸೃಷ್ಟಿಯ ನಿರೀಕ್ಷೆಯ ರಾಜ್ಯದ ಅಭಿವೃದ್ದಿಗೆ ಪ್ರಮುಖ ಕೊಡುಗೆಯನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೀಣ್ಯ ಕೈಗಾರಿಕಾ ಟೌನ್‌ ಶಿಪ್‌ ಸ್ಥಾಪನೆ ಹಾಗೂ ಮೂಲ ಸೌಕರ್ಯ ಅಭಿವೃದ್ದಿಗೆ 100 ಕೋಟಿ ರೂಪಾಯಿ ನೀಡಿರುವುದರಿಂದ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಪೀಣ್ಯ ಕೈಗಾರಿಕಾ ಪ್ರದೇಶದ ಅಭಿವೃದ್ಧಿಯಾಗಲಿದ್ದು, ಇನ್ನು ಹೆಚ್ಚಿನ ಕೈಗಾರಿಕೆಗಳ ಸ್ಥಾಪನೆಗೆ ಸಹಕಾರಿಯಾಗಲಿದೆ ಎಂದರು.

ಇದೇ ವೇಳೆ, ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿಗಳಿಗೆ ಹಾಲಿ ಜಾರಿಯಲ್ಲಿರುವ ಶೇ 4 ರಷ್ಟು ಬಡ್ಡಿ ಸಹಾಯಧನ ಯೋಜನೆ ಮಳಿಗೆ/ಡೀಲರ್‌ಶಿಫ್‌/ಫ್ರಾಂಚೈಸಿ ಮತ್ತು ಕೋಟೆಲ್‌ ಉದ್ಯಮಗಳನ್ನು ಪ್ರಾರಂಭಿಸಲು ವಿಸ್ತರಣೆ ಮಾಡಿದ್ದಾರೆ. TATA Technologies Limited ಸಹಯೋಗದೊಂದಿಗೆ 4,636 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ಕ್ರಮ ಘೋಷಣೆಯಾಗಿದೆ.

ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಹೊಸದಾಗಿ 23 ಅಲ್ಪಾವಧಿ ಹಾಗೂ 11 ಧೀರ್ಘಾವತಿ ವೃತ್ತಿಪರ ಕೋರ್ಸ್‌ ಪ್ರಾರಂಭದಿಂದ ಕೈಗಾರಿಕೆಗಳಿಗೆ ಬೇಕಾದಂತಹ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲ ಲಭ್ಯತೆಯು ಹೆಚ್ಚಾಗಲಿದೆ ಎಂದರು.

ಒಟ್ಟಾರೆಯಾಗಿ ರಾಜ್ಯವನ್ನು ಮತ್ತಷ್ಟು ಕೈಗಾರಿಕಾ, ಬಂಡವಾಳ ಸ್ನೇಹಿ ಮತ್ತು ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವಂತಹ ಅಂಶಗಳನ್ನು ಹೊಂದಿರುವ ಬಜೆಟ್‌ ಎಂದು ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಜೆಟ್​ 2021-22: ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಸ್ವ- ಉದ್ಯೋಗಕ್ಕೆ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.