ETV Bharat / state

ಚುನಾವಣೆ ವೇಳೆ ಈ ರೀತಿಯ ಗಿಮಿಕ್ ಮಾಡುವುದು ಕಾಂಗ್ರೆಸ್​ಗೆ ರಕ್ತಗತ: ಸಚಿವ ಆರ್.ಅಶೋಕ್ - ಸ್ವಪಕ್ಷೀಯರೇ ದಾಖಲೆ ಕೊಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಅರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್​

ಚುನಾವಣಾ ಗಿಮಿಕ್ ಮಾಡಲು ಅವರಿಗೆ ಇನ್ನೂ ಸಮಯ ಇದೆ. ನಿಮ್ಮ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿರುವಾಗ ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಅಂತಾ ಹೇಳಲು ಬರಬೇಡಿ. ಡಬಲ್ ಇಂಜಿನ್ ಭಯದಿಂದ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಚುನಾವಣೆ ವೇಳೆ ಈ ರೀತಿಯ ಗಿಮಿಕ್ ಮಾಡುವುದು ಕಾಂಗ್ರೆಸ್​ಗೆ ರಕ್ತಗತವಾಗಿದೆ ಎಂದು ಕಂದಾಯ ಸಚಿವ ಆರ್​.ಅಶೋಕ್​ ಹೇಳಿದ್ದಾರೆ.

Minister R. Ashok
ಕಂದಾಯ ಸಚಿವ ಆರ್​.ಅಶೋಕ್​
author img

By

Published : May 5, 2022, 3:54 PM IST

ಬೆಂಗಳೂರು: ಚುನಾವಣೆ ವೇಳೆ ಈ ರೀತಿಯ ಗಿಮಿಕ್ ಮಾಡುವುದು ಕಾಂಗ್ರೆಸ್​ಗೆ ರಕ್ತಗತವಾಗಿದೆ. ಪಿಎಸ್​ಐ ಹಗರಣ ಕಂಡು ಹಿಡಿದಿದ್ದೇ ಗೃಹ ಸಚಿವರು. ಕಾಂಗ್ರೆಸ್ ಗೃಹಸಚಿವರನ್ನು ಅಭಿನಂದಿಸಬೇಕಿತ್ತು. ಆದರೆ ಉತ್ತರ ಕರ್ನಾಟಕದಲ್ಲಿ ಓಡಾಡ್ತಿದ್ದುದನ್ನು ಬೆಂಗಳೂರಿಗೆ ತಂದು ಅಶ್ವತ್ಥನಾರಾಯಣ್ ಮೇಲೆ ಆರೋಪ ಮಾಡಿದ್ದಾರೆ.

ಯಾವುದೇ ದಾಖಲೆ ಇಲ್ಲದೇ ಸುಳ್ಳು ಆರೋಪ ಮಾಡಿದ್ದಾರೆ. ಹಿಂದೆ ಬಿಟ್ ಕಾಯಿನ್​ನಲ್ಲೂ ಹೀಗೆ ಆರೋಪ ಮಾಡಿ ಝೀರೋ ಆಗಿದ್ರು. ಕಾಂಗ್ರೆಸ್ ಸಂತೆ ಭಾಷಣ ಬಿಟ್ಟು ದಾಖಲೆ ಇದ್ದರೆ ಕೊಡಲಿ ಎಂದು ಕಂದಾಯ ಸಚಿವ ಆರ್​.ಅಶೋಕ್​ ಹೇಳಿದ್ದಾರೆ.

ಕಂದಾಯ ಸಚಿವ ಆರ್​.ಅಶೋಕ್​

ಚುನಾವಣಾ ಗಿಮಿಕ್ ಮಾಡಲು ಅವರಿಗೆ ಇನ್ನೂ ಸಮಯ ಇದೆ. ನಿಮ್ಮ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿರುವಾಗ ಬಿಜೆಪಿ ತಟ್ಟೆಯಲ್ಲಿ ನೊಣ ಬಿದ್ದಿದೆ ಅಂತಾ ಹೇಳಲು ಬರಬೇಡಿ. ಡಬಲ್ ಇಂಜಿನ್ ಭಯದಿಂದ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ.

ಅಶ್ವತ್ಥನಾರಾಯಣ ಎಲ್ಲೂ ನಾನು ಸಿಎಂ ಆಗ್ತೀನಿ ಅಂತ ಹೇಳಿಲ್ಲ. ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅಶ್ವತ್ಥನಾರಾಯಣ ಉಲ್ಲೇಖ ಮಾಡಿದ್ದಾರೆ. ಎಲ್ಲವೂ ಹೊರಗೆ ಬರಲಿ. ಗೃಹ ಸಚಿವರ ಪಾತ್ರ ಪ್ರಕರಣದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸ್ವಪಕ್ಷೀಯರೇ ದಾಖಲೆ ಕೊಟ್ಟಿದ್ದಾರೆ ಎಂಬ ಕುಮಾರಸ್ವಾಮಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಕಾಂಗ್ರೆಸ್​ಗಿಂತ ಸ್ವಲ್ಪ ಮುಂದೆ ಹೋಗಿ ಟೀಕೆ ಮಾಡ್ತಿದ್ದಾರೆ. ಸ್ವಲ್ಪ ಅವರ ಪಕ್ಷದಲ್ಲಿ ಏನು ಆಗ್ತಿದೆ ಅಂತಾ ನೋಡಿಕೊಳ್ಳಲಿ. ನಮ್ಮ ಪಕ್ಷದ ವಿಚಾರ ನೋಡಿಕೊಳ್ಳಲು ಬಲಾಢ್ಯ ಕೇಂದ್ರದ ನಾಯಕತ್ವ ಇದೆ.‌

ಜೆಡಿಎಸ್, ಕಾಂಗ್ರೆಸ್​ನಲ್ಲಿ ವಂಶದ ನಾಯಕತ್ವ ಇದೆ. ವಂಶದ ನಾಯಕತ್ವದಿಂದ ಬಿಜೆಪಿ ಕಲಿಯಬೇಕಾಗಿಲ್ಲ. ವೈಯಕ್ತಿಕ ದ್ವೇಷಗಳು ರಾಜಕೀಯವಾಗಿ ಒಳ್ಳೆಯದಲ್ಲ. ಸೈದ್ದಾಂತಿಕವಾಗಿ ಹೋರಾಟ ಮಾಡಬೇಕು‌ ಎಂದರು.

ಇದನ್ನೂ ಓದಿ: ಸಚಿವ ಅಶ್ವತ್ಥ್ ನಾರಾಯಣ್ ಭ್ರಷ್ಟಾಚಾರದ ವಿಶ್ವಮಾನವ: ಡಿಕೆಶಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.