ETV Bharat / state

ಈ ಬಾರಿಯೂ ಬೆಂಗಳೂರಿನಲ್ಲೇ ಚಳಿಗಾಲದ ಅಧಿವೇಶನ - ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ

ಸುವರ್ಣಸೌಧ ಆರಂಭಗೊಂಡ ನಂತರ ಪ್ರತಿ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿಯೇ ನಡೆಸಲಾಗುತ್ತಿತ್ತು. ಅದ್ರೆ ಕಳೆದ ಬಾರಿ ಉ.ಕರ್ನಾಟಕದಲ್ಲಿ ಪ್ರವಾಹದಿಂದ ಅಪಾರ ಹಾನಿಯಾದ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಈ ಬಾರಿಯೂ ಬೆಂಗಳೂರಿನಲ್ಲೇ ನಡೆಸಲು ನಿರ್ಧರಿಸಲಾಗಿದೆ.

ಸುವರ್ಣಸೌಧ
ಸುವರ್ಣಸೌಧ
author img

By

Published : Nov 18, 2020, 10:28 PM IST

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಈ ಬಾರಿಯೂ ಚಳಿಗಾಲದ ಅಧಿವೇಶ ನಡೆಸುತ್ತಿಲ್ಲ. 2019ರಲ್ಲಿ ಬೆಳಗಾವಿಯಲ್ಲಿ ನಡೆಸಬೇಕಿದ್ದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲಾಯಿತು. ಸುವರ್ಣ ಸೌಧ ಆರಂಭಗೊಂಡ ನಂತರ ಪ್ರತಿ ಚಳಿಗಾಲದ ಅಧಿವೇಶನ ಅಲ್ಲೇ ನಡೆಸುತ್ತಾ ಬಂದಿರುವ ಸರ್ಕಾರ, ಕಳೆದ ಬಾರಿಯಿಂದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸುತ್ತಿದೆ.

ವಾಡಿಕೆಯಂತೆ ಪ್ರತಿ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಬೇಕಿತ್ತು. ಆದರೆ 2019ರಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಹಾಗಾಗಿ ಆಡಳಿತ ಯಂತ್ರ ಬೆಳಗಾವಿಗೆ ವರ್ಗಾವಣೆಗೊಂಡರೆ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗುವುದೆಂಬ ಕಾರಣಕ್ಕೆ ಅಧಿವೇಶನ ಬೆಂಗಳೂರಿನಲ್ಲೇ ನಡೆಸಲು ತೀರ್ಮಾನಿಸಲಾಗಿತ್ತು.

ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಾರಿಯೂ ಬೆಂಗಳೂರಿನಲ್ಲೇ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಕಳೆದ ಬಾರಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದರೆ, ಈ ಬಾರಿ ಮಹಾಮಾರಿ ಕೊರೊನಾ ದೊಡ್ಡ ಪೆಟ್ಟು ಕೊಟ್ಟಿದೆ. ಕೋವಿಡ್ ಹಿನ್ನೆಲೆಯಲ್ಲಿ ಆಡಳಿತ ಯಂತ್ರವನ್ನು ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರ ಮಾಡುವುದು ಕಷ್ಟ ಎಂದು ಅರಿತ ಸರ್ಕಾರ, ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ತೀರ್ಮಾನಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.