ETV Bharat / state

ಈ ಬಾರಿ ಕೂಡ ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ; ಬಿಸಿ ನಾಗೇಶ್​ ಸ್ಪಷ್ಟನೆ - ಪಿಯುಸಿ ಪರೀಕ್ಷೆ

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಗೆ ಆಗಮಿಸಲಿರುವ ವಿದ್ಯಾರ್ಥಿನಿಯರು ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟು ನಿಟ್ಟಾಗಿ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎಂದು ಬಿ.ಸಿ ನಾಗೇಶ್​ ತಿಳಿಸಿದರು.

ಬಿ ಸಿ ನಾಗೇಶ್​
ಬಿ ಸಿ ನಾಗೇಶ್​
author img

By

Published : Mar 3, 2023, 4:05 PM IST

Updated : Mar 3, 2023, 10:25 PM IST

ಬೆಂಗಳೂರು: ಹೈಕೋರ್ಟ್ ಆದೇಶ ಪಾಲನೆ ಹಾಗೂ ಕಳೆದ ವರ್ಷ ಕೈಗೊಂಡಿರುವ ನಿರ್ಧಾರಕ್ಕೆ ಬದ್ಧವಾಗಿರಲು ತೀರ್ಮಾನಿಸಿರುವ ರಾಜ್ಯ ಸರ್ಕಾರ ಈ ಸಾರಿ ಎಸ್ಎಸ್ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆ ಸೇರಿದಂತೆ ಯಾವುದೇ ಪರೀಕ್ಷೆಗೆ ಬರುವವರಿಗೆ ವಸ್ತ್ರ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಿದೆ. ತನ್ಮೂಲಕ ಈ ಸಾರಿ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಕೊಠಡಿಯೊಳಗೆ ಬರುವಂತಿಲ್ಲ ಎನ್ನುವುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ಸ್ವತಃ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಧ್ಯಮಗಳ ಮೂಲಕ ಸ್ಪಷ್ಟೀಕರಣ ನೀಡಿದ್ದು, ಕಳೆದ ವರ್ಷ ಸರ್ಕಾರ ಕೈಗೊಂಡ ನಿರ್ಧಾರಕ್ಕೆ ಈ ವರ್ಷವೂ ಬದ್ಧವಾಗಿದೆ. ಅಲ್ಲದೇ ವಸ್ತ್ರ ಸಂಹಿತೆ ವಿಚಾರದಲ್ಲಿ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು ಅದರ ಪಾಲನೆ ಮಾಡಲಿದ್ದೇವೆ ಎಂದಿದ್ದಾರೆ.

ಇಂದು ಶಾಲೆಗಳ ಆರಂಭಕ್ಕೆ ಅರ್ಜಿ ಸಲ್ಲಿಕೆ, ಮಾನ್ಯತೆ ನವೀಕರಣ, ನಿರಾಕ್ಷೇಪಣಾ ಪತ್ರ ನೀಡಿಕೆ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಸೇವೆಗಳಲ್ಲಿ ಸುಧಾರಣೆ, ಸರಳೀಕರಣಕ್ಕಾಗಿ ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಸಾಫ್ಟ್‌ವೇರ್‌ ಅನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿಸಿ ನಾಗೇಶ್, ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಎಸ್​ಎಸ್​ಎಲ್​​ಸಿ ಮತ್ತು ಪಿಯುಸಿ ಪರೀಕ್ಷೆ ಸಮಯದಲ್ಲಿ​ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ. ಈ ಬಾರಿ ಕೂಡ ಹಿಜಾಬ್​ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹಿಜಾಬ್ ಧರಿಸಿಲು ಹೈಕೋರ್ಟ್​ ಅನುಮತಿ ನೀಡಿಲ್ಲ: ಮಾ.9ರಿಂದ ದ್ವಿತೀಯ ಪಿಯು ಪರೀಕ್ಷೆ ರಾಜ್ಯದಲ್ಲಿ ಆರಂಭವಾಗಲಿದೆ. ರಾಜ್ಯದ ವಿವಿಧ ಜಿಲ್ಲೆಯ ಮುಸಲ್ಮಾನ್ ಸಮುದಾಯದ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಕೋರಿದ್ದಾರೆ. ಈ ವಿದ್ಯಾರ್ಥಿನಿಯರ ಮನವಿಯನ್ನು ಪರಿಗಣಿಸದಂತೆ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸ್ಪಷ್ಟ ಸೂಚನೆ ರವಾನಿಸಿದೆ.

ಮಾ.9 ರಿಂದ ಆರಂಭವಾಗುವ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅನುಮತಿ ನೀಡುವಂತೆ ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಆದರೆ, ಪರೀಕ್ಷಾ ಕೇಂದ್ರದ ಒಳಗೆ ಹಿಜಾಬ್ ಧರಿಸಿ ಬರುವುದನ್ನು ಹೈಕೋರ್ಟ್ ಅನುಮತಿಸಿಲ್ಲ. ಅಲ್ಲದೇ ಈ ವಿಚಾರ ಸುಪ್ರೀಂ ಕೋರ್ಟ್​​ನಲ್ಲಿ ವಿಚಾರಣೆಯಲ್ಲಿದೆ.

ಪಾಲಕರು ತಮ್ಮ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಬೇಕು: ಕಾನೂನು ವ್ಯಾಪ್ತಿಯಲ್ಲಿ ವಿಚಾರ ಇರುವಾಗ ಸರ್ಕಾರ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ. ಅಲ್ಲದೇ ತೀರ್ಪು ಬರುವವರೆಗೆ ಹಿಂದಿನ ಆದೇಶ ಪಾಲನೆಯಲ್ಲಿ ಇರಲಿದೆ ಎಂದು ಸ್ವತಃ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರೇ ತಿಳಿಸಿದ್ದಾರೆ. ಅಂದ ಹಾಗೆ ಈ ವಿಚಾರ ಇಟ್ಟು ಕೊಂಡು ಭವಿಷ್ಯ ನಿರ್ಧರಿಸುವ ಪರೀಕ್ಷೆಯಿಂದ ವಿದ್ಯಾರ್ಥಿಯರು ದೂರ ಉಳಿಯುವುದಿಲ್ಲ. ಪರೀಕ್ಷೆಗೆ ಹಾಜರಾಗದೇ ಉಳಿಯುವುದಿಲ್ಲ ಎಂಬ ನಂಬಿಕೆ ಇದೆ. ಪಾಲಕರು ಸಹ ತಮ್ಮ ಮಕ್ಕಳನ್ನು ಪರೀಕ್ಷೆ ಕಳುಹಿಸುವ ಕಾರ್ಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯ ಭಾಗ ಅಲ್ಲ ಎಂದು ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್ ಮಹತ್ವದ ಮಾಹಿತಿ ನೀಡಿತ್ತು. ವಿದ್ಯಾರ್ಥಿಗಳು ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಬೇಕು ಎಂಬ 2022 ಫೆ.5ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಹಂತದಲ್ಲಿದೆ.

ಸಮವಸ್ತ್ರ ಧರಿಸಿ ಬನ್ನಿ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಧ್ಯಮಗಳ ಜತೆ ಮಾತನಾಡಿದ ಸಂದರ್ಭ, ಶಾಲೆಗೆ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬನ್ನಿ, ಯಾವುದೆ ಒತ್ತಡದಲ್ಲಿ ಪರೀಕ್ಷಾ ಕೇಂದ್ರಕ್ಕೆ ಬರಬೇಡಿ. ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಪಿಯು ಪರೀಕ್ಷೆ ಯಶಸ್ವಿಯಾಗಿ ನಡೆಸುತ್ತೇವೆ. ಮಕ್ಕಳು ಅರ್ಧ ಗಂಟೆ ಮುನ್ನವೇ ಪರೀಕ್ಷಾ ಕೇಂದ್ರಕ್ಕೆ ಬರುವುದು ಉತ್ತಮ ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್​ ಪ್ರಕರಣದ​ ವಿಚಾರಣೆಗೆ ಸುಪ್ರೀಂ ಕೋರ್ಟ್​ ಒಪ್ಪಿಗೆ: ಶೀಘ್ರವೇ ದಿನಾಂಕ ನಿಗದಿ

ನಿಯಮದ ಪ್ರಕಾರ ಗ್ರೇಸ್ ಮಾರ್ಕ್ಸ್: 10 ಮತ್ತು 12 ನೇ ತರಗತಿಗೆ ಪರೀಕ್ಷೆ ಮುಂಚೆ ಗ್ರೇಸ್ ಮಾರ್ಕ್ಸ್ ಕೊಡುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಹಿಂದೆ ಇದ್ದ ನಿಯಮದ ಪ್ರಕಾರವೇ ಗ್ರೇಸ್ ಮಾರ್ಕ್ಸ್ ಬಗ್ಗೆ ತೀರ್ಮಾನ ಆಗುತ್ತದೆ. ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನು ನೀಡಲಾಗುತ್ತಿದೆ ಎಂದರು.

ಎನ್.ಓ.ಸಿ ವಿಧಾನ ಸರಳೀಕರಣ: ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಶಾಲೆಗಳನ್ನು ತೆರೆಯಲು ಮತ್ತು ನವೀಕರಣಕ್ಕೆ ಸರ್ಕಾರದಿಂದ ಎನ್‌ಒಸಿ ಕಡ್ಡಾಯವಾಗಿ ಪಡೆಯಬೇಕು. ಸರ್ಕಾರದ ಪೋರ್ಟಲ್ ವ್ಯವಸ್ಥೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನವನ್ನು ಸರಳಗೊಳಿಸಿ ಪಾರದರ್ಶಕವಾಗಿಸಲಾಗಿದೆ ಎಂದು ತಿಳಿಸಿದರು. ಎನ್‌ಒಸಿ ಪಡೆಯಲು ಸಚಿವರು, ಕಮಿಷನರ್, ಕಾರ್ಯದರ್ಶಿಗಳ ಬಳಿ ಬರಬೇಕಾಗಿಲ್ಲ. ಎನ್‌ಒಸಿ ತಕ್ಷಣವೇ ಸಿಗುವಂತೆ ಮಾಡಲಾಗಿದೆ. ಪ್ರತಿಯೊಂದು ಪ್ರಕ್ರಿಯೆ ಮೊದಲು 8 ಹಂತದಲ್ಲಿ ಇತ್ತು. ಈಗ 4 ಹಂತಕ್ಕೆ ಇಳಿಸಿದ್ದೇವೆ. ಮೊದಲು 27 ದಿನ ಸಮಯ ಆಗುತ್ತಿತ್ತು, ಈಗ 17 ದಿನಕ್ಕೆ ಪ್ರಕ್ರಿಯೆ ಮುಗಿಸುತ್ತಿದ್ದೇವೆ ಎಂದು ತಿಳಿಸಿದರು.

Last Updated : Mar 3, 2023, 10:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.