ETV Bharat / state

ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ: ಉಸ್ತುವಾರಿಗಳ ತಂಡ ರಚಿಸಿದ ಬಿಜೆಪಿ - Three constituency by-election lastest news

ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇರುವ ಹಿನ್ನೆಲೆ ಮೂರೂ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ತಂಡ ರಚಿಸಿದೆ.

ಬಿಜೆಪಿ
ಬಿಜೆಪಿ
author img

By

Published : Feb 4, 2021, 9:05 PM IST

ಬೆಂಗಳೂರು: ಸದ್ಯದ್ರಲ್ಲೇ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆ ಮೂರೂ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ತಂಡ ರಚಿಸಿದೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಂಸದ ಭಗವಂತ ಖೂಬಾ, ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕರ್, ಈಶ್ವರ ಸಿಂಗ್ ಠಾಕೂರ್, ಅಮರನಾಥ ಪಾಟೀಲ್ ಉಸ್ತುವಾರಿಗಳಾಗಿದ್ದಾರೆ.

ಓದಿ:ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ

ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಶ್ರೀರಾಮುಲು, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ನೇಮಿರಾಜ್ ನಾಯಕ್, ರಾಜುಗೌಡ, ಡಾ. ಶಿವರಾಜ್ ಪಾಟೀಲ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ಸಚಿವರಾದ ರಮೇಶ್ ಜಾರಕಿಹೊಳಿ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ ಮತ್ತು ಬಸವರಾಜ್ ಯಂಕಂಚಿ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.