ETV Bharat / state

ಮುಖ್ಯಮಂತ್ರಿ ಯಡಿಯೂರಪ್ಪ ಮೂರು ದಿನ ಟೆಂಪಲ್​ ರನ್

ಸಿಎಂ ಬಿ.ಎಸ್.​ ಯಡಿಯೂರಪ್ಪ ಅವರು ಮೂರು ದಿನಗಳ ಕಾಲ ಮೈಸೂರು, ದಾವಣಗೆರೆ, ಶಿಕಾರಿಪುರ ಸೇರಿದಂತೆ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಬಿಎಸ್​ವೈ
author img

By

Published : Sep 27, 2019, 3:22 PM IST

ಬೆಂಗಳೂರು: ಸಿಎಂ ಬಿ.ಎಸ್.​ ಯಡಿಯೂರಪ್ಪ ಅವರು 3 ದಿನಗಳ ಕಾಲ ಟೆಂಪಲ್ ರನ್ ಮಾಡಲಿದ್ದಾರೆ. ಈ ಅವಧಿಯಲ್ಲಿ ಮೈಸೂರಿನಿಂದ ದಾವಣಗೆರೆ ಮತ್ತು ಶಿಕಾರಿಪುರದಿಂದ ಬೆಂಗಳೂರಿಗೆ ಮಾತ್ರ ಹೆಲಿಕಾಪ್ಟರ್ ಬಳಕೆ ಮಾಡಲಿದ್ದು, ಉಳಿದ ಕಡೆ ರಸ್ತೆಯ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.

Three day tour of chief ministers BSY
ಮುಖ್ಯಮಂತ್ರಿಗಳ ಮೂರು ದಿನಗಳ ಪ್ರವಾಸ

ಸೆಪ್ಟಂಬರ್ 28ರಂದು ಬೆಳಗ್ಗೆ 10.30ಕ್ಕೆ ಡಾಲರ್ಸ್ ಕಾಲೋನಿ ನಿವಾಸದಿಂದ ಹೊರಡಲಿರುವ ಸಿಎಂ, ಮಧ್ಯಾಹ್ನ 1ಗಂಟೆಗೆ ತಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿಗೆ ತೆರಳಲಿದ್ದಾರೆ. ಅಲ್ಲಿ ಹೊನ್ನಾಂಭಿಕೆ ದೇವಸ್ಥಾನಕ್ಕೆ ಭೇಟಿ ನೀಡಿ, 2 ಗಂಟೆಗೆ ಹೊನ್ನವಳ್ಳಿಯಿಂದ ತೆರಳಿ 3 ಗಂಟೆಗೆ ಯಡಿಯೂರು ತಲುಪಲಿದ್ದಾರೆ. ನಂತರ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಸಂಜೆ 4.30ಕ್ಕೆ ಯಡಿಯೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಲಿದ್ದು, ಸಂಜೆ 6.30ಕ್ಕೆ ಈ ಬಾರಿಯ ದಸರಾ ಉದ್ಘಾಟಕರಾದ ಡಾ.ಎಸ್.ಎಲ್. ಭೈರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಲಿದ್ದಾರೆ. ಮೈಸೂರಿನಲ್ಲಿಯೇ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.

ಸೆಪ್ಟಂಬರ್ 29ರಂದು ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನದ ಜತೆಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ನಾಡಹಬ್ಬ ಮೈಸೂರು ದಸರಾ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮೈಸೂರು ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಂಜೆ 6ಕ್ಕೆ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಲಿದ್ದಾರೆ. ದಾವಣಗೆರೆಯಲ್ಲಿ ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಉದ್ಘಾಟಿಸಿ, ರಾತ್ರಿ ರಸ್ತೆ ಮೂಲಕ ಸ್ವಕ್ಷೇತ್ರ ಶಿಕಾರಿಪುರಕ್ಕೆ ತೆರಳಲಿದ್ದಾರೆ.

ಸೆಪ್ಟಂಬರ್ 30ರಂದು ಬೆಳಗ್ಗೆ ಶಿಕಾರಿಪುರದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಮಧ್ಯಾಹ್ನ 3 ಗಂಟೆಗೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಂದು ಸಂಜೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಮಾರಂಭದಲ್ಲಿ ನೆರವೇರಿಸಿ, ರಾತ್ರಿ ಶಿಕಾರಿಪುರಕ್ಕೆ ಹಿಂದಿರುಗಲಿದ್ದಾರೆ.

ಅಕ್ಟೋಬರ್ 1ರ ಮಂಗಳವಾರ ಬೆಳಗ್ಗೆ ಶಿಕಾರಿಪುರದ ತಮ್ಮ ನಿವಾಸದ ಬಳಿ ಇರುವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

Intro:

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂರು ದಿನಗಳ ಕಾಲ ಬೆಂಗಳೂರಿನಿಂದ ದೂರ ಉಳಿಯುತ್ತಿದ್ದು ಟೆಂಪಲ್ ರನ್ ಮಾಡುತ್ತಿದ್ದಾರೆ. ಈ ಅವದಿಯಲ್ಲಿ ಮೈಸೂರಿನಿಂದ ದಾವಣಗೆರೆ ಮತ್ತು ಶಿಕಾರಿಪುರದಿಂದ ಬೆಂಗಳೂರಿಗೆ ಮಾತ್ರ ಹೆಲಿಕ್ಯಾಪ್ಟರ್ ಬಳಿಕೆ ಮಾಡು ಉಳಿದಂತೆ ರಸ್ತೆ ಪ್ರಯಾಣದ ಮೂಲಕ ಪ್ರವಾಸ ಮಾಡಲಿದ್ದಾರೆ.

ನಾಳೆ ಬೆಳಗ್ಗೆ 10.30ಕ್ಕೆ ಡಾಲರ್ಸ್ ಕಾಲೋನಿ ನಿವಾಸದಿಂದ ಹೊರಡಲಿರುವ ಸಿಎಂ ಮಧ್ಯಾಹ್ನ 1 ಕ್ಕೆ ತಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿಗೆ ತೆರಳಲಿದ್ದು ಹೊನ್ನಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 2 ಗಂಟೆಗೆ ಹೊನ್ನವಳ್ಳಿಯಿಂದ ಹೊರಟು 3 ಗಂಟೆಗೆ ಯಡಿಯೂರು ತಲುಪಲಿದ್ದು ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.

ಸಂಜೆ 4.30ಕ್ಕೆ ಯಡಿಯೂರಿನಿಂದ ಹೊರಟು ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಲಿದ್ದಾರೆ. ಸಂಜೆ 6.30ಕ್ಕೆ ಈ ಬಾರಿಯ ದಸರಾ ಉದ್ಘಾಟಕರಾದ ಡಾ.ಎಸ್.ಎಲ್ ಭೈರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಲಿದ್ದು ರಾತ್ರಿ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

29 ರಂದು ಭಾನುವಾರ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ ನಾಡದೇವತೆ ಚಾಮುಂಡೇಶ್ವರಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ನಂತರ ನಾಡ ಹಬ್ಬ ಮೈಸೂರು ದಸರಾ ಉತ್ಸವವನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮೈಸೂರು ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ 6ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆಗೆ ತೆರಳಲಿದ್ದು ಸಂಜೆ 6.30ಕ್ಕೆ ದಾವಣಗೆರೆಯಲ್ಲಿ ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಶರನ್ನವರಾತ್ರಿ ದಸರಅ ಧರ್ಮ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ ರಸ್ತೆ ಮೂಲಕ ಸ್ವಕ್ಷೇತ್ರ ಶಿಕಾರಿಪುರಕ್ಕೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

30ರ ಸೋಮವಾರದಂದು ಬೆಳಗ್ಗೆ ಶಿಕಾರಿಪುರದ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಧ್ಯಾಹ್ನ 3 ಗಂಟೆಗೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ತೆರಳಲಿದ್ದಾರೆ.ಅಂದು ಸಂಜೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ ಶಿಕಾರಿಪುರಕ್ಕೆ ಹಿಂದಿರುಗಿ ವಾಸ್ತವ್ಯ ಹೂಡಲಿದ್ದಾರೆ.

ಅಕ್ಟೋಬರ್ 1 ರ ಮಂಗಳವಾರ ಬೆಳಗ್ಗೆ ಶಿಕಾರಿಪುರದ ತಮ್ಮ ನಿವಾಸದ ಬಳಿ ಇರುವ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.