ETV Bharat / state

ಬೆಂಗಳೂರು: ಹೋಟೆಲ್​ನಲ್ಲಿ ಬಿಸಿ ನೀರಿ‌ನ ಬಾಯ್ಲರ್ ಸ್ಫೋಟಗೊಂಡು ಮೂವರಿಗೆ ಗಾಯ - ಈಟಿವಿ ಭಾರತ ಕರ್ನಾಟಕ

ಹೋಟೆಲ್​ವೊಂದರಲ್ಲಿನ ಇಡ್ಲಿ ತಯಾರಿಕೆಗೆ ಬಳಸುವ ಬಿಸಿ ನೀರಿ‌ನ ಬಾಯ್ಲರ್ ಸ್ಫೋಟಗೊಂಡು ಮೂವರು ಗಾಯಗೊಂಡಿದ್ದಾರೆ.

three-injured-in-hot-water-boiler-explosion-in-bengaluru
ಬೆಂಗಳೂರು: ಬಿಸಿ ನೀರಿ‌ನ ಬಾಯ್ಲರ್ ಸ್ಫೋಟಗೊಂಡು ಮೂವರಿಗೆ ಗಾಯ
author img

By

Published : Aug 12, 2023, 3:26 PM IST

ಬೆಂಗಳೂರು: ಇಡ್ಲಿ ತಯಾರಿಕೆಗೆ ಬಳಸುವ ಬಿಸಿ ನೀರಿ‌ನ ಬಾಯ್ಲರ್ ಸ್ಫೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲಿನಲ್ಲಿ ನಡೆದಿದೆ. ಕಿಚನ್ ನಲ್ಲಿ ಕೆಲಸ ಮಾಡುವ ಐಶ್ವರ್ಯ (19) ಬಸಿಕುಮಾರ್ (20) ಕ್ಯಾಶಿಯರ್ ಸಹೋದರ ಕಾರ್ತಿಕ್ (18) ಎಂಬುವರು ಗಾಯಗೊಂಡಿದ್ದಾರೆ‌.

ಏಕಾಏಕಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಮೂವರೂ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ‌. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಅಡುಗೆ ಮನೆಯಲ್ಲಿನ ಸಾಮಗ್ರಿಗಳು ಸಂಪೂರ್ಣ ಜಖಂ ಆಗಿವೆ. ಸ್ಥಳಕ್ಕೆ ಜ್ಞಾನಭಾರತಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮನೆ ಮುಂಭಾಗ ಕಾರು ಪಾರ್ಕ್​ ಮಾಡುತ್ತಿದ್ದ ವೇಳೆ ಸ್ಫೋಟಗೊಂಡು ಯುವಕ ಸಾವು

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ: ಮತ್ತೊಂದೆಡೆ, ಬಿಬಿಎಂಪಿ ಮುಖ್ಯ ಕಚೇರಿಯ ಆವರಣದಲ್ಲಿರುವ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಹಾಗೂ ಕಚೇರಿ ಕಟ್ಟಡದಲ್ಲಿ ನಿನ್ನೆ(ಶುಕ್ರವಾರ) ಬೆಂಕಿ ಅನಾಹುತ ಸಂಭವಿಸಿತ್ತು. ಅವಘಡದಲ್ಲಿ 9 ಮಂದಿ ಪಾಲಿಕೆ ಸಿಬ್ಬಂದಿ ಗಾಯಗೊಂಡಿದ್ದರು. ಘಟನಾ ಸ್ಥಳಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ರಸ್ತೆ ಡಾಂಬರು ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆನ್ಜೆಮಿನ್ ಎಂಬ ಕೆಮಿಕಲ್​​ ಅನ್ನು ಬಿಟುಮಿನ್ ಟೆಸ್ಟ್‌ಗೆ ಬಳಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೇಲ್ಭಾಗದಲ್ಲಿದ್ದ ಕಚೇರಿಗೂ ಬೆಂಕಿ ಆವರಿಸಿತ್ತು.

ಈ ಬಗ್ಗೆ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಪ್ರತಿಕ್ರಿಯಿಸಿ, "ಬಿಬಿಎಂಪಿ ಮುಖ್ಯ ಕಚೇರಿಯ ಪ್ರಯೋಗಾಲಯದಲ್ಲಿ ಘಟನೆ ನಡೆದಿದೆ. ಓವನ್ ಬಾಕ್ಸ್ ಲೀಕ್ ಆಗಿ ಅವಘಡ ಉಂಟಾಯಿತು. ಏಳು ಜನರಿಗೆ ಗಾಯವಾಗಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಈಗಾಗಲೇ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ಮಾಡುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎನ್ನುವುದು ತನಿಖೆಯ ನಂತರ ಗೊತ್ತಾಗಲಿದೆ" ಎಂದು ತಿಳಿಸಿದ್ದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಮಾತನಾಡಿ, "ಸುಮಾರು 5 ರಿಂದ 5:30ರ ಹೊತ್ತಿಗೆ ಕಚೇರಿಯಲ್ಲಿ ಕೂತಿದ್ದಾಗ ವಿದ್ಯುತ್​ ಕಡಿತವಾಯಿತು. ಆಗ ಹಿಂದಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಯಿತು. ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೀಗಾಗಿ, ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಗಾಯಗೊಂಡರು. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್​ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಮಾಹಿತಿ ನೀಡಿದ್ದರು.

ಗಾಯಾಳುಗಳ ವಿವರ: ಮುಖ್ಯ ಅಭಿಯಂತರ ಶಿವಕುಮಾರ್, ಕಾರ್ಯಪಾಲಕ ಅಭಿಯಂತರರಾದ ಕಿರಣ್, ಸಂತೋಷ್ ಕುಮಾರ್, ವಿಜಯಮಾಲ, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಧರ್, ಪ್ರಥಮ ದರ್ಜೆ ಸಹಾಯಕ ಕಿರಣ್, ಆಪರೇಟರ್ ಜ್ಯೋತಿ, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಶ್ರಿನಿವಾಸ್, ಗಣಕಯಂತ್ರ ನಿರ್ವಾಹಕ ಮನೋಜ್ ಅಗ್ನಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 7 ಜನ ಪುರುಷ ಸಿಬ್ಬಂದಿ ಗಾಯಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.