ETV Bharat / state

ಸಾಲಬಾಧೆ ತಾಳಲಾರದೆ ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ - Bangalore suicide

ಸಾಲಗಾರರ ಕಾಟಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

three members of the same family committed suicide
ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
author img

By

Published : Oct 21, 2022, 5:22 PM IST

Updated : Oct 21, 2022, 8:03 PM IST

ಬೆಂಗಳೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂತೋಷ್ ಕುಮಾರ್ (54), ಆತನ ಪತ್ನಿ ಓಮನ್ ಸಂತೋಷ್ (50) ಹಾಗೂ ಮಗಳು ಸನುಷಾ (17) ಮೃತರು.

ಕೇರಳ ಮೂಲದ ಸಂತೋಷ್ ಕುಮಾರ್ ಕುಟುಂಬ 20 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು. ಆಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಹೊಂದಿದ್ದ ಸಂತೋಷ್ ಅತಿಯಾದ ಸಾಲ ಮಾಡಿಕೊಂಡಿದ್ದರಂತೆ. ಸಾಲಗಾರರ ಕಾಟಕ್ಕೆ ಮನನೊಂದು ಮನೆಯಲ್ಲೇ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಇದನ್ನೂ ಓದಿ: ಸಾಲಬಾಧೆಗೆ ಹೆದರಿ ಪತ್ನಿ, ಮಕ್ಕಳನ್ನು ಕೆರೆಗೆ ತಳ್ಳಿದ ಪತಿ: ಇಬ್ಬರು ಮಕ್ಕಳ ಸಾವು

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಎಸ್ಆರ್ ಲೇಔಟ್ ಠಾಣೆಯಲ್ಲಿ‌ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಾಲಬಾಧೆ: ನದಿಗೆ ಹಾರಿ ರೈತ ಆತ್ಮಹತ್ಯೆ!

Last Updated : Oct 21, 2022, 8:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.