ETV Bharat / state

ಕೇರಳದಿಂದ ರೆಮ್ಡಿಸಿವಿರ್‌ ಖರೀದಿಸಿ ಬೆಂಗಳೂರಲ್ಲಿ ಮಾರಾಟ ಮಾಡುತ್ತಿದ್ದ ಮೂವರ ಬಂಧನ - ರೆಮ್ಡಿಸಿವಿರ್ ಮಾರುತ್ತಿದ್ದವ ಬಂಧನ

ದುಬಾರಿ ಬೆಲೆಗೆ ರೆಮ್ಡಿಸಿವಿರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Black marketing of Remdesivir in Bengaluru
ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ
author img

By

Published : May 26, 2021, 6:58 AM IST

ಬೆಂಗಳೂರು: ಕಾನೂನು ಬಾಹಿರವಾಗಿ ಹೆಚ್ಚಿನ ಬೆಲೆಗೆ ರೆಮ್ಡಿಸಿವಿರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಗಳು ಕೇರಳದಿಂದ ಕಡಿಮೆ ಬೆಲೆಗೆ ರೆಮ್ಡಿಸಿವಿರ್ ಖರೀದಿಸಿ, 10 ಸಾವಿರ ರೂಪಾಯಿಗೆ ಒಂದು ಶೀಷೆಯಂತೆ ಮಾರುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳಿಂದ ಸುಮಾರು 25 ವಯಲ್ ರೆಮ್ಡಿಸಿವಿರ್ ವಶಪಡಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ತಿಳಿಸಿದ್ದಾರೆ.

Black marketing of Remdesivir in Bengaluru
ಆರೋಪಿಗಳಿಂದ ವಶಪಡಿಸಿಕೊಂಡ ರೆಮ್ಡಿಸಿವಿರ್

ಕೋವಿಡ್ ಎರಡನೇ ಅಲೆ ಪ್ರಾರಂಭವಾದ ಬಳಿಕ ರೆಮ್ಡಿಸಿವಿರ್ ಔಷಧಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಾಳ ಸಂತೆ ದಂಧೆಕೋರರು ಹೆಚ್ಚಿನ ಬೆಲೆಗೆ ಜೀವ ರಕ್ಷಕ ಔಷಧಿಯನ್ನು ಮಾರುತ್ತಿದ್ದಾರೆ. ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ರಾಜ್ಯಾದ್ಯಂತ ಹಲವು ಮಂದಿಯನ್ನು ಬಂಧಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.