ETV Bharat / state

ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು - ಈಟಿವಿಭಾರತ್​ ಕನ್ನಡ ನ್ಯೂಸ್​

ಈಜು ಬಾರದಿದ್ದರೂ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರ್ಘಟನೆ ಎಲೆಕ್ಟ್ರಾನಿಕ್​​ ಸಿಟಿಯಲ್ಲಿ ನಡೆದಿದೆ.

ಕಲ್ಲು ಕ್ವಾರಿಯಲ್ಲಿ ಮೂವರು ವಿದ್ಯಾರ್ಥಿಗಳು ಸಾವು

author img

By

Published : May 31, 2023, 9:22 PM IST

ಬೆಂಗಳೂರು : ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿಯ ಕ್ವಾರಿಯಲ್ಲಿ ಈ ಘಟನೆ ನಡೆದಿದ್ದು, ಮೂವರೂ 10 ನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿಗಳನ್ನು ಕಿರಣ್ (13) ತೀರ್ಥ(13) ಹಾಗೂ ಫೈಜಲ್ (14) ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಆಟ ಆಡಲು ಹೋಗಿದ್ದ ತೀರ್ಥ ಮತ್ತು ಫೈಜಲ್​​ ರಾತ್ರಿ ಆದರೂ ಮನೆಗೆ ಬಾರದ ಹಿನ್ನೆಲೆ ಪೋಷಕರು ಎಲ್ಲ ಕಡೆ ಹುಡುಕಾಡಿದ್ದಾರೆ. ಇದಾದ ನಂತರ ಕೆರೆ ಬಳಿ ಬಾಲಕರ ಸೈಕಲ್, ಬಟ್ಟೆ ಮತ್ತು ಚಪ್ಪಲಿ ಪತ್ತೆಯಾಗಿವೆ. ಈಜು ಬಾರದಿದ್ದರು ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಈಜುಕೊಳದಲ್ಲಿ ಬಾಲಕರು ಮುಳಗಿ ಸಾವು : ದಾವಣಗೆರೆಯ ದೇವರಾಜ ಅರಸು ಬಡಾವಣೆಯಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿ ನವೀಕರಣಗೊಂಡು ಲೋಕಾರ್ಪಣೆಯಾಗಿದ್ದ ಈಜುಕೊಳಕ್ಕೆ ಈಜಲು ತೆರಳಿದ್ದ ಬಾಲಕರಿಬ್ಬರು ಮೇ 19 ರಂದು ಮುಳುಗಿ ಸಾವನ್ನಪ್ಪಿದ್ದರು. ಮೃತರನ್ನು ದಾವಣಗೆರೆ ನಗರದ ಬೀಡಿ ಲೇಔಟ್​ನ ನಿವಾಸಿಗಳೆಂದು ಗುರುತಿಸಲಾಗಿತ್ತು.

ಈಜುಕೊಳಕ್ಕಾಗಮಿಸಿದ ಇಬ್ಬರು ಬಾಲಕರಿಗೆ ಈಜು ಬಾರದ ಹಿನ್ನೆಲೆ ಸಾವನ್ನಪ್ಪಿದ್ದರು. ಸಾಮಾನ್ಯವಾಗಿ ಇಂತಹ ಘಟನೆಗಳು ನಡೆಯಬಾರದೆಂದು ಈಜುಕೊಳಕ್ಕೆ ಮಾರ್ಗದರ್ಶಕರನ್ನು ನಿಯೋಜನೆ ಮಾಡಲಾಗುತ್ತದೆ. ಆದರೆ ಇಲ್ಲಿ ಯಾವ ಮಾರ್ಗದರ್ಶಕರು ಹಾಗೂ ತರಬೇತಿದಾರರು ಇಲ್ಲದಿರುವುರಿಂದ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು.

ನಾಲ್ವರು ಸ್ನೇಹಿತರು ನೀರುಪಾಲು: ನಂದಿ ಬೆಟ್ಟ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ಮೇ. 27 ಭಾನುವಾರ ದಂದು ನಡೆದಿತ್ತು. ಬೈಕ್​ನಲ್ಲಿ ಬಂದಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋಗಿದ್ದರು. ಈ ಸಂದರ್ಭದಲ್ಲಿ ನಾಲ್ವರು ಕೂಡ ನದಿನಲ್ಲಿ ಮುಳಗಿ ಸಾವನ್ನಪ್ಪಿದ್ದರು. ಇನ್ನು ವಿಷಯ ತಿಳಿದು ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ನೀರಿನಲ್ಲಿ ಮುಳುಗಿರುವ ಶವಗಳನ್ನು ಮೇಲೆತ್ತಿದ್ದರು.

ಬಿಹಾರದಲ್ಲಿ ಐವರು ನೀರಿನಲ್ಲಿ ಮುಳಗಿ ದುರ್ಮರಣ : ಬಿಹಾರದ ಗಂಡಕ್ ನದಿಯಲ್ಲಿ ಈಜಲು ಹೋಗಿದ್ದ ಐವರು ಹುಡುಗರು ನೀರು ಪಾಲಾಗಿರುವ ದುರ್ಘಟನೆ ಇದೇ ತಿಂಗಳ 5ನೇ ತಾರೀಖಿನಂದು ನಡೆದಿತ್ತು. ಸಾಹೇಬ್‌ಪುರ ಕಮಲ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಷ್ಣುಪುರದ ಅಹೋಕ್ ಗಂಡಕ್ ನದಿಯಲ್ಲಿ ಘಟನೆ ಜರುಗಿತ್ತು. ಒಟ್ಟು 9 ಮಂದಿ ಹುಡುಗರು ಈಜಲು ಹೋಗಿದ್ದರು. ಈ ಪೈಕಿ ನಾಲ್ವರು ಹೊರಗೆ ಬಂದಿದ್ದರು. ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಮುಳುಗಿದವರಲ್ಲಿ ಮೂವರು ಬಾಲಕರು, ಮುಂಗೇರ್ ಮತ್ತು ಮಾಧೇಪುರ ಜಿಲ್ಲೆಯವರಾಗಿದ್ದಾರೆ. ಇಬ್ಬರು ಹುಡುಗರು ವಿಷ್ಣುಪುರ ಅಹೋಕ್ ನಿವಾಸಿಗಳು. ಎಲ್ಲಾ ಬಿಶನ್‌ಪುರ ಗ್ರಾಮದಲ್ಲಿ ನಡೆಯಲಿರುವ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು.

ಇದನ್ನೂ ಓದಿ : ಮಾಂಸದ ಅಂಗಡಿಯ ಕಾರ್ಮಿಕನ ಕೊಲೆ: ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.