ಬೆಂಗಳೂರು: ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆಗೆ ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 3,012 ಕೋಟಿ ರೂ. ಅನುದಾನ ಒದಗಿಸಿದೆ.
ಸಂಸ್ಕೃತಿ ಇಲಾಖೆಗೆ ಸಿಕ್ಕ ಕೊಡುಗೆಗಳಿವು:
- ಹಾವೇರಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗಾಗಿ 20 ಕೋಟಿ ರೂ.ಮೀಸಲು
- ಸಾಂಸ್ಕೃತಿಕ ಚಟುವಟಿಕೆ ನಿರಂತವಾಗಿ ನಡೆಯಲು ಕಲಾಗ್ರಾಮದಲ್ಲಿ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಳಿಸಲು ಖಾಸಗಿ ಸಹಭಾಗಿತ್ವದಡಿ ಅಭಿವೃದ್ಧಿಗೆ ಕ್ರಮ
- ಯಕ್ಷಗಾನ ಕಲೆಯ ಸಮಗ್ರ ಆಯಾಮಗಳ ಕುರಿತು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜನೆ
- ಚಿಕ್ಕಬಳ್ಳಾಪುರದ ಕೈವಾರದಲ್ಲಿ ಜನಿಸಿದ ಶ್ರೀ ಯೋಗಿನಾರೇಯಣಾ ಯತೀಂದ್ರರು (ಕೈವಾರ ತಾತಯ್ಯ) ಅವರ ಹೆಸರಿನ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ವರ್ಷ ಮಾರ್ಚ್ 27ರಂದು ಆಚರಣೆಗೆ ಸೂಚನೆ
- ನಶಿಸಿ ಹೋಗುತ್ತಿರುವ ತಳಸಮುದಾಯದಲ್ಲಿರುವ ವಿಶಿಷ್ಟ ಕಲೆಗಳನ್ನು ಉಳಿಸಿ ಮುನ್ನಲೆಗೆ ತರಲು ರಾಜ್ಯದ ಪ್ರತಿ ವಿಭಾಗ ಮಟ್ಟದಲ್ಲಿ ಒಂದರಂತೆ ಒಟ್ಟು ನಾಲ್ಕು ಸಾಂಸ್ಕೃತಿಕ ಶಿಬಿರ ಕಾರ್ಯಕ್ರಮ ಆಯೋಜನೆಗೆ ಚಿಂತನೆ
- ಅಗಲಿದ ಕನ್ನಡದ ಹಿರಿಯ ಸಾಹಿತಿಗಳಾದ ಡಾ.ಸಿದ್ಧಲಿಂಗಯ್ಯ, ಡಾ.ಎಂ. ಚಿದಾನಂದಮೂರ್ತಿ, ಡಾ. ಚಂದ್ರಶೇಖರ ಪಾಟೀಲ್, ಚನ್ನವೀರ ಕಣವಿಯವರ ಅಮೂಲ್ಯ ಸಾಹಿತ್ಯ ಉಳಿಸಲು ವಿಶೇಷ ಯೋಜನೆ
- ಮಹಾದೇವ ಬಣಕಾರರ ಹಾವೇರಿ ಜಿಲ್ಲೆಯಲ್ಲಿ ಎರಡು ಸಾಂಸ್ಕೃತಿಕ ಭವನ ನಿರ್ಮಾಣ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪನೆ
- ನೆರೆ ರಾಜ್ಯಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆಗೆ ಕ್ರಮ
- ಗಡಿಯಲ್ಲಿರುವ ಪ್ರದೇಶಗಳಲ್ಲಿ ಸಂಪರ್ಕ ರಸ್ತೆಗಳು, ಕುಡಿಯುವ ನೀರಿನ ವ್ಯವಸ್ಥೆ, ಬೀದಿದೀಪಗಳು ಮುಂತಾದ ಮೂಲಭೂತ ಸೌಕರ್ಯಗಳನ್ನು ಗ್ರಾ ಪಂ ಮೂಲಕ ಒದಗಿಸಿ ಸಮಗ್ರವಾಗಿ ಅಭಿವೃದ್ಧಿಗೆ ಸೂಚನೆ
- ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪುಗಳನ್ನು ರಚಿಸಿ, ಸ್ವ-ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆ ಪ್ರೋತ್ಸಾಹ
ಕ್ರೀಡೆ ಹಾಗೂ ಯುವ ಸಬಲೀಕರಣ:
- ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಂಗಣವನ್ನು ಉನ್ನತೀಕರಿಸಿ ಕ್ರೀಡಾ ಅತ್ಯಾಧುನಿಕ ಉಪಕರಣಗಳನ್ನು ಒದಗಿಸಲು ಒಟ್ಟು 100 ಕೋಟಿ ರೂ.ಗಳ ಯೋಜನೆ ಘೋಷಣೆ
- ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳನ್ನು ಉತ್ತೇಜಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಭಾಗಿತ್ವದೊಂದಿಗೆ ಒಟ್ಟು 504 ಕೋಟಿ ರೂ. ಮೊತ್ತದಲ್ಲಿ ನರೇಗಾ ಯೋಜನೆಯಡಿ 'ಕ್ರೀಡಾ ಅಂಕಣ' ಗಳ ನಿರ್ಮಾಣ
- ರಾಜ್ಯದ ಕ್ರೀಡಾಂಗಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಮತ್ತು ಆರ್ಥಿಕ ಸ್ವಾವಲಂಬನೆಗೊಳಿಸಿ ಮೇಲ್ದರ್ಜೆಗೇರಿಸಲು 'ಬಳಕೆದಾರರ ಶುಲ್ಕ' (Pay and Play) ವ್ಯವಸ್ಥೆ ಅಳವಡಿಕೆ
- ಸಾಹಸ ಕ್ರೀಡೆ ಮತ್ತು ಸಾಹಸ ಪ್ರವಾಸೋದ್ಯಮವನ್ನು ಉತ್ತೇಜಿಸಲು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿಯನ್ನು ಉನ್ನತೀಕರಿಸಿ, ಅಗತ್ಯ ಸಾಹಸ ಕ್ರೀಡಾ ಮೂಲಸೌಕರ್ಯವನ್ನು ಒದಗಿಸಲಾಗುವುದು.
- ಮೈಸೂರು ನಗರದಲ್ಲಿ ಈಗಾಗಲೇ ಅನುಷ್ಠಾನಗೊಳಿಸಿರುವಂತೆ ರಾಜ್ಯಾದ್ಯಂತ ಯುವ ಕೇಂದ್ರಿತ ವಿವಿಧ ಯೋಜನೆಗಳನ್ನು ಸಂಯೋಜಿಸಿ ಯುವಜನತೆಗೆ ಉತ್ತಮ ಸೇವೆ ದೊರಕಿಸಲಾಗುವುದು.
- ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಅಂಗವಾಗಿ NCC ಕೆಡೆಟ್‌ಗಳಿಗೆ ತರಬೇತಿ ಜೊತೆಗೆ ಉತ್ತರ ಕನ್ನಡ, ಚಿತ್ರದುರ್ಗ, ರಾಮನಗರ ಮತ್ತು ಮತ್ತು ಆಲಮಟ್ಟಿ ಹಿನ್ನೀರಿನಲ್ಲಿ ಸಾಹಸ ಕ್ರೀಡಾ ತರಬೇತಿ
- ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021ನ್ನು ಪ್ರಸಕ್ತ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜನೆ
- ಕ್ರೀಡಾಕೂಟದಲ್ಲಿ 8,000ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ 20 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಸಂಘಟಿಸಲಾಗುವುದು.
- ಕೇಂದ್ರದ ಪ್ರಾಯೋಜಕತ್ವದ ಎನ್.ಎಸ್.ಡಿ.ಎಫ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಕ್ರೀಡಾ ಅಕಾಡೆಮಿ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕಾಗಿ 20 ಕೋಟಿ ರೂ.ಗಳ ಅನುದಾನ
- 2024ರ ಒಲಂಪಿಕ್ಸ್ ಮತ್ತು ಪ್ಯಾರಾಲಂಪಿಕ್ಸ್‌ಗೆ ರಾಜ್ಯದಿಂದ ಕನಿಷ್ಟ 75 ಕ್ರೀಡಾಪಟುಗಳನ್ನು ಸಿದ್ಧಪಡಿಸಲು 'ಅಮೃತ ಕ್ರೀಡಾ ದತ್ತು ಯೋಜನೆ' ಯಡಿ ತಲಾ 10 ಲಕ್ಷ ರೂ. ಗಳವರೆಗೆ ಪ್ರತಿವರ್ಷ ಶ್ರೇಷ್ಠ ಮಟ್ಟದ ತರಬೇತಿ ಪಡೆಯಲು ವಿನಿಯೋಗ
- 50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಕುಸ್ತಿ ಕ್ರೀಡಾಪಟುಗಳಿಗೆ ನೀಡುತ್ತಿರುವ ಮಾಸಾಶನವನ್ನು 1,000 ರೂ.ನಂತೆ ಹೆಚ್ಚಳ
ಪ್ರವಾಸೋದ್ಯಮಕ್ಕೆ ಕೊಟ್ಟಿದ್ದೇನು ?
- ಪ್ರವಾಸೋದ್ಯಮ ಉತ್ತೇಜಿಸಲು ಐಹೊಳೆ-ಪಟ್ಟದಕಲ್ಲು-ವಿಜಯಪುರ ಹಂಪಿ-ಬಾದಾಮಿ ಪ್ರವಾಸಿ ವೃತ್ತವನ್ನು ಮತ್ತು ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು ಹಳೇಬೀಡು ಪ್ರವಾಸಿ ವೃತ್ತವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ
- ಬೇಲೂರು, ಹಳೇಬೀಡು ಸೋಮನಾಥಪುರ ವ್ಯಾಪ್ತಿಯಲ್ಲಿ ಒಳಗೊಂಡಂತೆ ಹೊಯ್ಸಳರ ಪವಿತ್ರ ತಾಣಗಳ ಬರುವ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ
- ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗಜಲಪಾತದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಹೋಟೆಲ್ ಹಾಗೂ ಕಾಮಗಾರಿಗಳನ್ನು 116 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು
- ನಂದಿ ಬೆಟ್ಟದಲ್ಲಿ ಪಿಪಿಪಿ ಅಡಿ ರೋಪ್ ಅನ್ನು 93 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ
- ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ರೋಪ್‌ವೇ ನಿರ್ಮಿಸಲು ಯೋಜನೆ
- ಶ್ರೀ ಆಂಜನೇಯ ಸ್ವಾಮಿಯ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಯೋಜನೆ
- ಪ್ರವಾಸಿ ತಾಣಗಳ ಕಾಮಗಾರಿಗಳು 100 ಕೋಟಿ ಮೊತ್ತದಲ್ಲಿ ಅನುಷ್ಠಾನ
- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಾಗೂ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ದತ್ತಪೀಠ ಬೆಟ್ಟದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೋಪ್ ವೇ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ "ಪರ್ವತಮಾಲಾ" ಯೋಜನೆಯಡಿ ಪ್ರಸ್ತಾವನೆ ಸಲ್ಲಿಕೆ
- ಕಡಲತೀರದಲ್ಲಿ ಪರಸರ ಸ್ನೇಹಿ ಪ್ರವಾಸೋದ್ಯಮ ಉತ್ತೇಜಿಸಲು ಸಿ.ಆರ್.ಜಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಗೆ ಸರ್ಕಾರ ಕ್ರಮ
- ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (Archaeological Survey of India)ಯ ಸಹಯೋಗದೊಂದಿಗೆ ಪುನರುಜ್ಜೀವನಗೊಳಿಸಲು ಸೂಚನೆ
- ರಾಜ್ಯದ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 'Adopt a Monument' ಯೋಜನೆ ಮೂಲಕ ದತ್ತು ಪಡೆಯಲು ಅವಕಾಶ
- ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ 400 ಪ್ರವಾಸಿ ಮಾರ್ಗದರ್ಶಿಗಳಿಗೆ ಮಾಸಿಕ 2000 ರೂ.ಗಳ ನೀಡಿಕೆ
- ಪರಿಸರ ಸಂರಕ್ಷಣೆಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅರಣ್ಯ ಜೀವಿಶಾಸ್ತ್ರ ವ್ಯವಸ್ಥೆಯ ಮೇಲೆ ಪ್ರಾಕೃತಿಕ ಮತ್ತು ಮಾನವ ನಿರ್ಮಿತ ಒತ್ತಡಗಳಿಂದ ಉಂಟಾದ ದುಷ್ಪರಿಣಾಮವನ್ನು ಸರಿದೂಗಿಸುವ ಉದ್ದೇಶಕ್ಕಾಗಿ ಹಸಿರು ಆಯವ್ಯಯವನ್ನು (Eco-Budget) ರೂಪಿಸಿ, 100 ಕೋಟಿ ರೂ. ಅನುದಾನ ಹಂಚಿಕೆ
- ಕರಾವಳಿ ಭಾಗದ ಜಲ ಮೂಲಗಳನ್ನು ಕಲುಷಿತಗೊಳಿಸುತ್ತಿರುವ ಪ್ಲಾಸ್ಟಿಕ್ ಮಾಲಿನ್ಯವನ್ನು ನಿರ್ವಹಿಸಲು ವಿಶ್ವಬ್ಯಾಂಕ್ ನೆರವಿನೊಂದಿಗೆ ವಿನೂತನವಾದ 'ಬ್ಲೂ-ಪ್ಲಾಸ್ಟಿಕ್ ನಿರ್ವಹಣೆ ಯೋಜನೆ' ಯನ್ನು ಮುಂದಿನ 5 ವರ್ಷಗಳ ಅವಧಿಗೆ ಒಟ್ಟು 840 ಕೋಟಿ ರೂ.ಗಳ ವೆಚ್ಚದಲ್ಲಿ ಜಾರಿಗೆ
- ಖಾಸಗಿ ಭೂಮಿಗಳಲ್ಲಿ ಶ್ರೀಗಂಧ ಮರಗಳನ್ನು ಬೆಳೆಸುವಂತೆ ಉತ್ತೇಜನ ನೀಡಲು ಶ್ರೀಗಂಧದ ಮರಗಳ ಕತ್ರಾವಣೆ, ಸಾಗಾಣಿಕೆ ಮತ್ತು ಮಾರಾಟ ಪ್ರಕ್ರಿಯೆಗಳನ್ನು ಸರಳೀಕರಣ ಗೊಳಿಸಲು ಶ್ರೀಗಂಧ ನೀತಿ ಜಾರಿಗೆ
- ವನ್ಯಜೀವಿ ಅಧಿಸೂಚಿಸಿರುವ ಸಂರಕ್ಷಣಾ ಮೀಸಲು (Conservation Reserves) ಪ್ರದೇಶಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ಐದು ಕೋಟಿ ರೂ.ಗಳ ಅನುದಾನ
- ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಆನೆ ಹಾವಳಿ ತಡೆಗಟ್ಟಲು 100 ಕೋಟಿ ರೂ.ಗಳ ಅನುದಾನದಲ್ಲಿ ರೈಲುಹಳಿ ತಡೆಗೋಡೆ ನಿರ್ಮಾಣ
- ಖಾಸಗಿ ಭೂಮಿಗಳಲ್ಲಿ ರೈತರು ಬೆಳೆದಿರುವ ಮರಗಳ ಕಡಿಯುವ ಮತ್ತು ಸಾಗಾಣಿಕೆ ಸರಳೀಕರಣಕ್ಕೆ ಸೂಚನೆ
- ಬೆಳಗಾವಿ ಜಿಲ್ಲೆಯ ಹಿಡ್ಕಲ್ ಅಣೆಕಟ್ಟು ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಿ ಪಕ್ಷಿಗಳ ಹಾಗೂ ಚಿಟ್ಟೆಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಕ್ಷಿಧಾಮ ಮತ್ತು ಚಿಟ್ಟೆಗಳ ಉದ್ಯಾನ ಸ್ಥಾಪನೆ
ಇದನ್ನೂ ಓದಿ: ದೇವಾಲಯಗಳ ತಸ್ತೀಕ್ ಮೊತ್ತ 60 ಸಾವಿರಕ್ಕೆ ಹೆಚ್ಚಳ; ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗಳಿಗೆ ಮನ್ನಣೆ