ETV Bharat / state

ಮುಂದಿನ ಐದು ದಿನಗಳ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - Thunder and lightning rain i

ರಾಜ್ಯದಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

thunder-and-lightning-rain-in-the-state-for-the-next-five-days
ಮುಂದಿನ ಐದು ದಿನಗಳ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
author img

By

Published : May 24, 2023, 11:02 PM IST

ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಮುಂದಿನ ಐದು ದಿನಗಳ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 2 ದಿನ ಮಳೆ ಸಾಧ್ಯತೆಯಿದ್ದು ಹೀಗಾಗಿ 17 ಜಿಲ್ಲೆಗಳಲ್ಲಿ ಭಾರಿ ಮಳೆಯ ಅಲರ್ಟ್ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಾಪುರ, ಚಿತ್ರದುರ್ಗ, ದಾವಣಗೆರೆ, ಕೋಲರಾ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.

ಗಾಳಿಯ ವೇಗ 30 ರಿಂದ 50 ಕಿ.ಮೀ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ, ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40 ರಿಂದ 50 ಕಿ.ಮೀ ಮತ್ತು ಕರಾವಳಿಯಲ್ಲಿ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.

ರಾಜಧಾನಿಯಲ್ಲಿ ಮಳೆ: ಮುಂದಿನ 24 ಗಂಟೆಗಳು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗಾಳಿಯ ವೇಗವು ಘಂಟೆಗೆ 40 ರಿಂದ 50 ಕಿ.ಮೀ. ಇರಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಂಭವವಿದೆ.

ನಿನ್ನೆ ಎಲೆಲ್ಲಿ ಮಳೆ: ನಿನ್ನೆ ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 6 ಸೆ. ಮೀ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಜಯಪುರದಲ್ಲಿ 5 ಸೆ. ಮೀ, ಹಾಸನ ಜಿಲ್ಲೆಯ ಶ್ರವಣಬೆಳಗೊಳ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ಮಳೆಯಾಗಿದೆ.

ಅತೀ ಗರಿಷ್ಠ ಉಷ್ಣಾಂಶ:ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಿರಲಿದೆ. ನಿನ್ನೆ ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 41.0 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಪಾಲಿಕೆ ಸ್ಮಾರ್ಟ್ ಸಿಟಿ ನಡುವೆ ಹಗ್ಗಜಗ್ಗಾಟ: ಕಾಮಗಾರಿ ಮುಗಿದರೂ ಇನ್ನೂ ಹಸ್ತಾಂತರವಾಗದೇ ಉಳಿದ ಪ್ರಾಜೆಕ್ಟ್​ಗಳು

ಅಂಡರ್‌ಪಾಸ್‌ಗಳಲ್ಲಿ ನಿಲ್ಲುವ ನೀರಿನ ಸಮಸ್ಯೆ ತಪ್ಪಿಸಲು ಸೂಕ್ತ ಕ್ರಮಕ್ಕೆ ಮುಂದಾದ ಬಿಬಿಎಂಪಿ: ಕಳೆದ ಮೂರು ದಿನಗಳ ಹಿಂದೆ ನಗರದ ಕೆ ಆರ್ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ತುಂಬಿದ್ದ ನೀರಲ್ಲಿ ಮುಳುಗಿ ಟೆಕ್ಕಿ ಸಾವನ್ನಪ್ಪಿದ ಘಟನೆಯ ನಂತರ ಟೀಕೆಗೆ ಒಳಗಾಗಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುವುದನ್ನು ತಪ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಸಿಸಿಟಿವಿ ಮತ್ತು ವರ್ಟಿಕಲ್ ಕ್ಲಿಯರೆನ್ಸ್ ಗೇಜ್ ಬೀಮ್: ಪಾಲಿಕೆಯ ಮುಖ್ಯ ಅಭಿಯಂತರರಾದ ಬಿ ಎಸ್ ಪ್ರಹ್ಲಾದ್ ಅವರು ಮೂರು ಪುಟಗಳ ವರದಿಯನ್ನು ಸಿದ್ಧಪಡಿಸಿದ್ದು, ಅದರಲ್ಲಿ ಅಂಡರ್‌ಪಾಸ್‌ನಲ್ಲಿ ನೀರು ನಿಲ್ಲುವುದನ್ನು ತಪ್ಪಿಸುವ ಕುರಿತು ವಿಸ್ತೃತ ವಿವರಣೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.