ETV Bharat / state

ಕೆಲ ವೈಯಕ್ತಿಕ ಖಾತೆಗಳ ನಿರ್ಬಂಧ.. ಆದೇಶ ಪಾಲನೆ ಕುರಿತು ವಿವರಣೆ ಸಲ್ಲಿಸಲು ಎಕ್ಸ್ ಕಾರ್ಪ್‌ಗೆ ಹೈಕೋರ್ಟ್​ನಿಂದ ಕೊನೆಯ ಅವಕಾಶ

author img

By ETV Bharat Karnataka Team

Published : Aug 24, 2023, 1:33 PM IST

ಎಕ್ಸ್ ಕಾರ್ಪ್‌(ಟ್ವಿಟ್ಟರ್)ನ ಕೆಲವು ಖಾತೆಗಳ ನಿರ್ಬಂಧ ವಿಧಿಸಲು ಹೊರಡಿಸಿದ್ದ ಆದೇಶವನ್ನು ಎಕ್ಸ್ ಕಾರ್ಪ್ ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಲು ಹೈಕೋರ್ಟ್ ಇಂದು (ಗುರುವಾರ) ಕೊನೆಯ ಅವಕಾಶ ನೀಡಿದೆ. ​

ಎಕ್ಸ್ ಕಾರ್ಪ್‌ಗೆ ಇಂದು ಕೊನೆಯ ದಿನ
ಎಕ್ಸ್ ಕಾರ್ಪ್‌ಗೆ ಇಂದು ಕೊನೆಯ ದಿನ

ಬೆಂಗಳೂರು: ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69(ಎ) ಅಡಿಯಲ್ಲಿ ಕೆಲವು ಖಾತೆಗಳ ನಿರ್ಬಂಧ ವಿಧಿಸಲು ಹೊರಡಿಸಿದ್ದ ಆದೇಶವನ್ನು ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಲು ಎಕ್ಸ್ ಕಾರ್ಪ್(ಟ್ವಿಟ್ಟರ್)ಗೆ ಹೈಕೋರ್ಟ್ ಗುರುವಾರ (ಇಂದು) ಕೊನೆಯ ಅವಕಾಶವನ್ನು ನೀಡಿದೆ.

ಕೆಲ ವೈಯಕ್ತಿಕ ಖಾತೆಗಳನ್ನು ಬ್ಲಾಕ್ ಮಾಡಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಯ ಆದೇಶವನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜೆಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಈ ಟ್ವಿಟ್ಟರ್‌ಗೆ ಕೊನೆಯ ಅವಕಾಶವನ್ನು ನೀಡಿದೆ.

ವಿಚಾರಣೆ ವೇಳೆ, ಕೇಂದ್ರ ಸರ್ಕಾರದ ಹೊರಡಿಸಿದ್ದ ಆದೇಶವನ್ನು ಜಾರಿ ಮಾಡಲಾಗಿದೆಯೇ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ಪೀಠ ಅರ್ಜಿದಾರರ ಪರ ವಕೀಲರಿಗೆ ಸೂಚನೆ ನಿಡಿತು. ಇದಕ್ಕೆ ಪ್ರತಿಕ್ರಿಯಿಸಿದ ವಕೀಲರು, ಮೇಲ್ಮನವಿದಾರರಿಂದ ಮಾಹಿತಿಗಾಗಿ ಕಾಯಲಾಗುತ್ತಿದೆ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಈ ವೇಳೆ ನ್ಯಾಯಪೀಠ, ಇದೇ ಕೊನೆಯ ಮತ್ತು ಅಂತಿಮ ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿತು. ಜತೆಗೆ, 50 ಲಕ್ಷ ರೂ.ಗಳ ದಂಡ ವಿಧಿಸುವಂತೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿ ವಿಚಾರಣೆಯನ್ನು ಸೆಪ್ಟಂಬರ್ 15ಕ್ಕೆ ಮುಂದೂಡಿತು. ಅಲ್ಲದೆ, ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನೆ ಮಾಡಿರುವ ಅರ್ಜಿ ಹಾಗೂ ಇದೀಗ ಸಲ್ಲಿಸಿರುವ ಮೇಲ್ಮವಿ ಅರ್ಜಿಯಲ್ಲಿ ಆದೇಶ ಅನುಪಾಲನೆ ಮಾಡಿರುವ ಸಂಬಂಧ ಯಾವುದೇ ಅಂಶವನ್ನು ಉಲ್ಲೇಖಿಸಿಲ್ಲ ಎಂಬುದಾಗಿ ಪ್ರತಿವಾದಿಗಳು(ಕೇಂದ್ರ ಸರ್ಕಾರ) ತಿಳಿಸುತ್ತಿದ್ದಾರೆ.

ಹಾಗೆ, ಕೇಂದ್ರದ ಆದೇಶವನ್ನು ಮೇಲ್ಮವಿದಾರರು ಪಾಲನೆ ಮಾಡಿಲ್ಲ. ಈ ಸಂಬಂಧ ಈವರೆಗೂ ವಿವರಣೆ ನೀಡುವ ಹಂತದಲ್ಲಿಯೇ ಇದ್ದೀರಿ. ಹೀಗಿರುವಾಗ ನಿಮ್ಮ ಮೇಲ್ಮವಿಯನ್ನು ಯಾವ ಕಾರಣಕ್ಕಾಗಿ ಪುರಸ್ಕರಿಸಬೇಕು ಎಂದು ನ್ಯಾಯಪೀಠ ಮೌಖಿಕವಾಗಿ ಪ್ರಶ್ನಿಸಿತು. ಕೇಂದ್ರ ಸರ್ಕಾರದ ಆದೇಶದಂತೆ ಯಾವುದಾದರೂ ಅನುಪಾಲನೆ ಮಾಡಿದ್ದೇವೆ ಎಂಬುದಕ್ಕೆ ಸಂಬಂಧಿಸಿದಂತೆ ಪೀಠಕ್ಕೆ ವಿವರಿಸಲು ಸೂಚನೆ ನೀಡಿತು. ಅಲ್ಲದೆ, ಪೀಠ ಪ್ರತಿವಾದಿಗಳ ಪರವಾಗಿ ಹೋಗಬೇಕಾಗುತ್ತದೆ. ಆದ್ದರಿಂದ ಮೇಲ್ಮನವಿದಾರರು ಯಾವುದಾದರೂ ನಿರ್ಧಾರ ಕೈಗೊಳ್ಳವುದು ನಿಮ್ಮ ಜವಾಬ್ದಾರಿಯಾಗಿದೆ ಎಂದು ಪೀಠ ತಿಳಿಸಿತು.

ಪ್ರಕರಣದ ಹಿನ್ನೆಲೆ: ಕೆಲ ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಎಕ್ಸ್ ಕಾರ್ಪ್(ಟ್ವಿಟರ್) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಈ ಅರ್ಜಿಯ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಅರ್ಜಿ ವಜಾಗೊಳಿಸಿ 50 ಲಕ್ಷ ರೂ.ಗಳ ದಂಡವನ್ನು ವಿಧಿಸಿ ಆದೇಶಿಸಿತ್ತು. ಈ ಆದೇಶವನ್ನು ಎಕ್ಸ್ ಕಾರ್ಪ್ ದ್ವಿಸದಸ್ಯ ಪೀಠಕ್ಕೆ ಮೇಲ್ಮವಿ ಸಲ್ಲಿಸಿತ್ತು. ಅರ್ಜಿಯ ಕುರಿತು ಈ ಹಿಂದೆ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ, 50 ಲಕ್ಷ ರೂ.ಗಳ ದಂಡದ ಆದೇಶಕ್ಕೆ ತಡೆ ನೀಡಿತ್ತು. ಎಕ್ಸ್ ಕಾರ್ಪ್ ತನ್ನ ನಂಬಿಕೆಯನ್ನು ಉಳಿಸಿಕೊಳ್ಳುವುದಕ್ಕಾಗಿ ದಂಡದ ಒಟ್ಟು ಮೊತ್ತದಲ್ಲಿ ಶೇ. 50ರಷ್ಟು(25 ಲಕ್ಷ ರೂ.) ಮುಂದಿನ ಒಂದು ವಾರದಲ್ಲಿ (ಠೇವಣಿ) ಪಾವತಿಸಲು ನಿರ್ದೇಶನ ನೀಡಿದೆ. ಜತೆಗೆ, ಈ ತಡೆಯಾಜ್ಞೆಯನ್ನು ತೆರವುಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ ಆಕ್ಷೇಪಣೆಗಳನ್ನು ಮುಂದಿನ ದಿನಾಂಕದ ವೇಳೆಗೆ ಸಲ್ಲಿಸಬೇಕು ಎಂದು ಪೀಠ ತಿಳಿಸಿತ್ತು.

ಇದನ್ನೂ ಓದಿ: ಟ್ವಿಟ್ಟರ್​ಗೆ ದಂಡ ವಿಧಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.