ETV Bharat / state

ವಿಧಾನಪರಿಷತ್​​ ಚುನಾವಣೆ: ಎಂಟಿಬಿ ನಾಗರಾಜ್, ಆರ್.ಶಂಕರ್‌ಗೆ ಟಿಕೆಟ್ ಬಹುತೇಕ ಫೈನಲ್..!

author img

By

Published : Jun 17, 2020, 11:59 PM IST

ಸದ್ಯದ ಮಾಹಿತಿ ಪ್ರಕಾರ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್​ಗೆ ವಿಧಾನಪರಿಷತ್ ಟಿಕೆಟ್ ಬಹುತೇಕ ಫೈನಲ್ ಆಗಿದ್ದು ಮೂರನೇ ಸ್ಥಾನಕ್ಕೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರಿಗೆ ನೀಡಲಾಗುತ್ತದೆ ಎನ್ನಲಾಗಿದೆ.

Ticket almost confirm
ವಿಧಾನಪರಿಷತ್​​ ಚುನಾವಣೆ

ಬೆಂಗಳೂರು: ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುತ್ತಿದ್ದು 50-50 ತಂತ್ರವನ್ನು ಅನುಸರಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ರಾಜ್ಯ ಬಿಜೆಪಿ ಕೋರ್ ಕಮಿಟಿ ಶಿಫಾರಸು ಪಟ್ಟಿಯನ್ನು ಪರಿಶೀಲನೆ ಮಾಡಿರುವ ಕೇಂದ್ರ ಸಂಸದೀಯ ಮಂಡಳಿ, ನಾಲ್ಕು ಸ್ಥಾನಗಳಲ್ಲಿ ರಾಜ್ಯ ಘಟಕದ ಶಿಫಾರಸು ಪಟ್ಟಿಯಲ್ಲಿನ ಎರಡು ಹೆಸರಿಗೆ ಗ್ರೀನ್ ಸಿಗ್ನಲ್ ನೀಡಿ ಮತ್ತೆರಡು ಸ್ಥಾನಕ್ಕೆ ಬೇರೆ ಆಯ್ಕೆ ಪ್ರಕಟಿಸಲು ಮುಂದಾಗಿದೆ ಎನ್ನಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್​ಗೆ ಟಿಕೆಟ್ ಬಹುತೇಕ ಫೈನಲ್ ಆಗಿದ್ದು ಮೂರನೇ ಸ್ಥಾನಕ್ಕೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರಿಗೆ ನೀಡಲಾಗುತ್ತದೆ ಎನ್ನಲಾಗಿದೆ. ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿರುವ ಮುನಿರತ್ನಗೆ ಕ್ಷೇತ್ರ ಬಿಟ್ಟುಕೊಡುವುದಕ್ಕೆ ಪರ್ಯಾಯವಾಗಿ ಪರಿಷತ್ ಸ್ಥಾನ ನೀಡಲು ನಿರ್ಧರಿಸಿದ್ದು ನಾಲ್ಕನೇ ಸ್ಥಾನವನ್ನು ಉತ್ತರ ಕರ್ನಾಟಕ ಭಾಗದ ನಾಯಕರೊಬ್ಬರಿಗೆ ನೀಡಲಾಗುತ್ತದೆ ಎಂದು ಪಕ್ಷದ ವಿಶ್ವಾಸನೀಯ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.