ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮನೆ ಮುಂದೆ ದಿಢೀರ್ ಪ್ರತಿಭಟನೆ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿರುವ ಕಾರಣ ಅವರ ನಿವಾಸದ ಎದುರು ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕೈ ಕಾರ್ಯಕರ್ತರ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಮನೆಯ ಎಡ ಮತ್ತು ಬಲಭಾಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಈ ಮಧ್ಯೆ, ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ಎಸ್‌ಐಟಿ ತನಿಖೆಯನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಸುವಂತೆ ಮನವಿ ಮಾಡಿದ್ದಾಳೆ. ಈ ವಿಚಾರವಾಗಿ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ. ಇನ್ನೊಂದೆಡೆ ನಿನ್ನೆ ಜಾರಕಿಹೊಳಿ ಎಸ್‌ಐಟಿ ಎದುರು ಹಾಜರಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಸುಮಾರು ನಾಲ್ಕು ಗಂಟೆಗಳಿಗೂ ಹೆಚ್ಚಿನ ಕಾಲ ಅಧಿಕಾರಿಗಳು ಮಾಜಿ ಸಚಿವರನ್ನ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ:18 ಡಿವೈಎಸ್ಪಿ, 100 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರದ ಆದೇಶ!