ETV Bharat / state

CET Result 2023: ಆರ್.ಡಿ ಸಂಖ್ಯೆ ಸರಿಪಡಿಸಿಕೊಳ್ಳುವ ಗಡುವು ಮುಕ್ತಾಯ.. ಜೂನ್ 15 ರಂದು ಸಿಇಟಿ ಫಲಿತಾಂಶ..?

ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಆರ್. ಡಿ ಸಂಖ್ಯೆಯನ್ನು ಸರಿಪಡಿಸಿಕೊಳ್ಳಲು ನೀಡಲಾಗಿದ್ದ ಗಡುವು ಮುಕ್ತಾಯಗೊಂಡಿದೆ. ಹಾಗೆ ಜೂನ್ 15 ರಂದು ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Karnataka Examination Authority
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
author img

By

Published : Jun 12, 2023, 1:38 PM IST

ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಸಿಇಟಿ ಬರೆದಿರುವ ಅಭ್ಯರ್ಥಿಗಳು ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್. ಡಿ ಸಂಖ್ಯೆಯನ್ನು ಸರಿಪಡಿಸಿಕೊಳ್ಳಲು ನೀಡಲಾಗಿದ್ದ ಗಡುವು ಮುಕ್ತಾಯಗೊಂಡಿದ್ದು ಜೂನ್ 15 ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಆದರೆ ದಿನಾಂಕ ಮತ್ತು ಸಮಯದ ಪ್ರಕಟಣೆಯನ್ನು ಇನ್ನು ಅಧಿಕೃತವಾಗಿ ಪ್ರಕಟ ಮಾಡಿಲ್ಲ.

ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ 2.6 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಕ್ಕೆ ಅಗತ್ಯ ಸಿದ್ಧತೆ ಪೂರ್ಣಗೊಂಡಿದೆ. ಜೂನ್ 12 ರಂದೇ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತಾದರೂ ಸಿಇಟಿ ಬರೆದಿದ್ದ 2.6 ಲಕ್ಷ ಅಭ್ಯರ್ಥಿಗಳ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಆರ್‌.ಡಿ ಸಂಖ್ಯೆಯನ್ನು ತಪ್ಪಾಗಿ ಅರ್ಜಿಯಲ್ಲಿ ನಮೂದಿಸಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರವು ಅದರ ತಿದ್ದುಪಡಿಗೆ ಜೂನ್‌ 7ರಿಂದ 12ರವರೆಗೆ ಕೊನೆಯ ಅವಕಾಶ ನೀಡಿ ಫಲಿತಾಂಶ ಪಕಟ ದಿನಾಂಕವನ್ನು ಮುಂದೂಡಿಕೆ ಮಾಡಿಕೊಂಡಿತ್ತು.

ಇದರ ಜೊತೆಗೆ ಕೆಲವರು ಆದಾಯ ಪ್ರಮಾಣ ಪತ್ರದ ಬದಲು ಇಡಬ್ಲ್ಯುಎಸ್‌ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಸಿಇಟಿ ನಿಯಮಗಳ ಪ್ರಕಾರ ಇದಕ್ಕೆ ಮನ್ನಣೆ ಇಲ್ಲ. ಆದ್ದರಿಂದ ಅಭ್ಯರ್ಥಿಗಳು ಪ್ರಾಧಿಕಾರದ ಪೋರ್ಟಲ್‌ನಲ್ಲಿ ಜೂನ್‌ 12ರ ನಿಗದಿತ ಕಾಲಮಿತಿಯೊಳಗೆ ತಿದ್ದುಪಡಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ಪರಿಣಾಮಗಳಿಗೆ ವಿದ್ಯಾರ್ಥಿಗಳೇ ಹೊಣೆಗಾರರಾಗಲಿದ್ದಾರೆ ಎಂದು ಸೂಚಿಸಲಾಗಿತ್ತು ಅದರಂತೆ ಆರ್‌ಡಿ ಸಂಖ್ಯೆಗಳು ತಾಳೆಯಾಗದ ಅಭ್ಯರ್ಥಿಗಳ ಹೆಸರುಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು.

ಇಂದು ಬೆಳಗ್ಗೆ 11 ಗಂಟೆಗೆ ಸಮಯಾವಕಾಶ ಮುಕ್ತಾಯವಾಗಿದ್ದು, ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಸಿಇಟಿ ಬರೆದಿರುವ ಅಭ್ಯರ್ಥಿಗಳು ಜಾತಿ/ಆದಾಯ/ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರಗಳ ಆರ್. ಡಿ ಸಂಖ್ಯೆಯನ್ನು ಸರಿಪಡಿಸಿಕೊಳ್ಳದಿದ್ದರೆ ಅಂತಹ ವಿದ್ಯಾರ್ಥಿಗಳ ಮೀಸಲಾತಿ ಸೌಲಭ್ಯಗಳು ರದ್ದಾಗಿ, ಜನರಲ್‌ ಮೆರಿಟ್‌ ಕೋಟಾದಡಿ ಬರಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾಹಿತಿ ನೀಡಿದ್ದಾರೆ.

ಇನ್ನು ಸಿಇಟಿ ಫಲಿತಾಂಶ ಪ್ರಕಟಕ್ಕೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಜೂನ್ 15 ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ ಎನ್ನಲಾಗಿದೆ. ಸದ್ಯಕ್ಕೆ ಪ್ರಾಧಿಕಾರದ ಅಧಿಕಾರಿಗಳು ಮೌಖಿಕವಾಗಿ ಜೂನ್ 15ರ ದಿನಾಂಕವನ್ನು ತಿಳಿಸಿದ್ದಾರಾದರೂ ಅಧಿಕೃತವಾಗಿ ಇನ್ನು ಸಮಯ ಹಾಗು ದಿನಾಂಕ ಪ್ರಕಟಗೊಳ್ಳಬೇಕಿದೆ. ಆದರೂ ಈಗಿರುವ ಮಾಹಿತಿ ಪ್ರಕಾರ ಜೂನ್ 15 ರಂದೇ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ ಎನ್ನಲಾಗುತ್ತಿದೆ.

ವೃತ್ತಿ ಶಿಕ್ಷಣ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್ ಮತ್ತು ಹೋಮಿಯೋಪತಿ (ಆಯುಶ್), ಎಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದರೆ ಬಿಎಸ್ಸಿ. (ಕೃಷಿ), ಬಿ.ಎಸ್.ಸಿ. (ರೇಷ್ಮೆ ಕೃಷಿ), ಬಿ.ಎಸ್.ಸಿ (ತೋಟಗಾರಿಕೆ), ಬಿ.ಎಸ್.ಸಿ (ಅರಣ್ಯ), ಬಿ.ಎಸ್.ಸಿ. ಬಿ.ಎಸ್.ಕೆ (ಆಹಾರ ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್ಎಸ್ಸಿ (ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್), ಅಕ್ರಿ ಬಯೋ ಟೆಕ್, ಬಿಎಚ್ಎಸ್ಸಿ (ಹೋಮ್ ಸೈನ್ಸ್), ಬಿ.ಟೆಕ್ (ಅಗ್ರಿ ಎಂಗ್ಜಿ) ), B.Sc. (ಅಗ್ರಿ ಮಾರ್ಕೆಟಿಂಗ್ & ಕೋ-ಆಪ್), ಬಿ-ಫಾರ್ಮಾ, ಫಾರ್ಮಾ-ಡಿ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಸಲಾಗಿದೆ. ರಾಜ್ಯ ಸರ್ಕಾರ ನೀಡಿದ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿರುವ ವೇಳಾಪಟ್ಟಿ ಪ್ರಕಾರ ಮೇ 20- ಜೀವಶಾಸ್ತ್ರ ಮತ್ತು ಗಣಿತ,ಮೇ 21- ರಸಾಯನಶಾಸ್ತ್ರ, ಭೌತಶಾಸ್ತ್ರ, ಮೇ 22- ಹೊರನಾಡು, ಗಡಿನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ: ಸಿಇಟಿ ಪರೀಕ್ಷೆ 2023: ಆರ್​ಡಿ ಸಂಖ್ಯೆ ತಿದ್ದುಪಡಿಗೆ ಮತ್ತೊಂದು ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.