ETV Bharat / state

ಸೆಪ್ಟೆಂಬರ್​​ನಲ್ಲಿ 6ರಿಂದ 8ನೇ ತರಗತಿ‌ ಆರಂಭ: ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ - school starts

ಸೆಪ್ಟೆಂಬರ್​​ನಲ್ಲಿ 6 ರಿಂದ 8ನೇ ತರಗತಿ‌ ಆರಂಭವಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು ಎಂದು ಸೂಚಿಸಲಾಗಿದೆ.

time table for 6th to 8th standard
ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ
author img

By

Published : Aug 31, 2021, 10:35 PM IST

ಬೆಂಗಳೂರು: 6ರಿಂದ 8ನೇ ತರಗತಿ‌ ಆರಂಭವಾಗುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೊನಾ‌‌‌ ಸೋಂಕು ಇಳಿಕೆ ಆಗುತ್ತಿರುವ ಬೆನ್ನಲ್ಲೇ, ಸೆಪ್ಟೆಂಬರ್ 6ನೇ ತಾರೀಖಿನಿಂದ 6 ರಿಂದ 8ನೇ ತರಗತಿ ಶುರು ಮಾಡಲು ಸರ್ಕಾರ ನಿರ್ಧರಿಸಿದೆ‌.

ಭೌತಿಕವಾಗಿ ತರಗತಿಗಳನ್ನು ನಡೆಸಲು ಶಾಲಾ ಹಂತದಲ್ಲಿ ಕೊಠಡಿಗಳ ಲಭ್ಯತೆ, ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಸಂಖ್ಯೆಯನ್ನು ಆಧರಿಸಿ ಆರಂಭಿಸುವಂತೆ ಆದೇಶಿಸಲಾಗಿದೆ. 6 ರಿಂದ 8ನೇ ತರಗತಿಗಳು ವಿದ್ಯಾರ್ಥಿಗಳನ್ನು 15 ರಿಂದ 20 ಸಂಖ್ಯೆಯ ವಿದ್ಯಾರ್ಥಿಗಳ ತಂಡಗಳನ್ನಾಗಿ ಮಾಡಿಕೊಂಡು ಭೌತಿಕ ತರಗತಿಗಳನ್ನು ನಡೆಸಲು ತಿಳಿಸಿದೆ. 6 ರಿಂದ 7 ನೇ ತರಗತಿಯನ್ನ‌ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ,8ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ 2ರಿಂದ 4:30 ಗಂಟೆ ತನಕ ಎರಡನೇ ಪಾಳಿಯಲ್ಲಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ.

15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು. ಕೇರಳ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಲೂಕು ಹಾಗೂ ವಲಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಶಾಲೆ ಪ್ರಾರಂಭ ಮಾಡಬೇಕು. ಇದಕ್ಕಾಗಿ ಸಲಹಾತ್ಮಕ ವೇಳಾಪಟ್ಟಿ ಬಿಡುಗಡೆ ಗೊಳಿಸಿದೆ.

time table for 6th to 8th standard
ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ
time table for 6th to 8th standard
ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ

ಇನ್ನು, ಮಕ್ಕಳು ಶಾಲೆಗೆ ಹಾಜರಾಗುವಾಗ ಪೋಷಕರ ಅನುಮತಿ ಪತ್ರ ತರುವುದು ಕಡ್ಡಾಯ. ಹಾಗೇ ಅನುಮತಿ ಪತ್ರದಲ್ಲಿ ಮಗುವಿಗೆ ಕೋವಿಡ್-19ರ ಸೋಂಕಿನ ಯಾವುದೇ ಲಕ್ಷಣಗಳಿರುವುದಿಲ್ಲ ಎಂಬುದನ್ನು ದೃಢೀಕರಿಸಬೇಕು. ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಮನೆಯಿಂದಲೇ ಅಗತ್ಯವಾದ ಕುಡಿಯುವ ನೀರು, ಉಪಹಾರವನ್ನು ತರುವಂತೆ ಸೂಚನೆ ನೀಡಲಾಗಿದೆ.

ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಶುದ್ಧ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳ ಭೌತಿಕ ಹಾಜರಾತಿ ಕಡ್ಡಾಯವಲ್ಲ, ಆನ್‌ಲೈನ್‌ ಅಥವಾ ಪರ್ಯಾಯ ವಿಧಾನದಲ್ಲಿ ಕಲಿಯಬಹುದು.

ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳು ನಡೆಯಲಿದ್ದು, ಶನಿವಾರದಂದು ಯಾವುದೇ ಮಕ್ಕಳಿಗೆ ಭೌತಿಕ ತರಗತಿಗಳು ನಡೆಸುವಂತಿಲ್ಲ. ಶನಿವಾರದಂದು ಶಾಲೆಗಳನ್ನು ಸ್ಯಾನಿಟೈಸ್ ಮಾಡುವ ಕಾರ್ಯವನ್ನು ಕೈಗೊಳ್ಳಬೇಕೆಂದು ಆದೇಶಿಸಲಾಗಿದೆ.. ಪಾಸಿಟಿವ್ ದರವು ಶೇ.2ಕ್ಕಿಂತ ಕಡಿಮೆ ಇರುವ ತಾಲೂಕು ವಲಯಗಳಲ್ಲಿ ಮಾತ್ರ ಶಾಲೆಗಳನ್ನ ಪ್ರಾರಂಭಿಸಬೇಕು. ಆಯಾ ಜಿಲ್ಲೆಯ ಉಪನಿರ್ದೇಶಕರು ತಮ್ಮ ಜಿಲ್ಲೆಗಳಲ್ಲಿನ ತಾಲೂಕು ವಲಯಗಳಲ್ಲಿ ಶಾಲೆ ಪ್ರಾರಂಭವಾಗಿರುವ ಬಗ್ಗೆ ಮಾಹಿತಿಯನ್ನು ನೀಡಬೇಕು. ಶಾಲೆಯನ್ನು ಆರಂಭಿಸದೇ ಇರುವ ವಿವರವನ್ನು ಪ್ರತ್ಯೇಕವಾಗಿ primarydpi@gmail.comಗೆ ಮಾಹಿತಿಯನ್ನು ಸಲ್ಲಿಸಬೇಕು.

ಇದನ್ನೂ ಓದಿ: ರಾಜ್ಯದಲ್ಲಿ ಭೌತಿಕ ತರಗತಿ ಆರಂಭ: BMTC ಯಿಂದ ವಿದ್ಯಾರ್ಥಿ ಪಾಸುಗಳ ಅವಧಿ ವಿಸ್ತರಣೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.