ಬೆಂಗಳೂರು : ಜೆಡಿಎಸ್ ಮುಖಂಡ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಪಕ್ಷ ತೊರೆದು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ ಆದರು. ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ರಾಜ್ಯ ಸಂವಹನಾ ಉಸ್ತುವಾರಿ ಕಾಳಪ್ಪ ಸಮ್ಮುಖದಲ್ಲಿ ಸೇರ್ಪಡೆಗೊಂಡ ಡಾ. ತಿಪ್ಪೇಸ್ವಾಮಿ ವೆಂಕಟೇಶ್, 'ಕರ್ನಾಟಕದಲ್ಲಿ ಆಮ್ ಆದ್ಮಿ ಪಾರ್ಟಿ ಸರ್ಕಾರ ರಚನೆಯಾಗುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಆಮ್ ಆದ್ಮಿ ಪಾರ್ಟಿಗೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದೆ' ಎಂದರು.
ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಶಿಕ್ಷಣ ಹಾಗೂ ಆರೋಗ್ಯ ಕ್ರಾಂತಿಯನ್ನು ಗಮನಿಸಿರುವ ಜನರು ಕರ್ನಾಟಕದಲ್ಲೂ ಎಎಪಿ ಆಡಳಿತವನ್ನು ಬಯಸುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಆಮ್ ಆದ್ಮಿ ಪಾರ್ಟಿ ನೀಡಿರುವ ಭರವಸೆಗಳು ಜನಪರ ನಿಲುವು ಹಾಗೂ ದೂರದೃಷ್ಟಿಯನ್ನು ಹೊಂದಿವೆ. ರಾಜ್ಯಾದ್ಯಂತ ಜನರಿಂದ ಸಲಹೆಗಳನ್ನು ಸಂಗ್ರಹಿಸಿ ಪ್ರಣಾಳಿಕೆ ಸಿದ್ಧಪಡಿಸಿರುವುದು ಆಮ್ ಆದ್ಮಿ ಪಾರ್ಟಿಯು ಬೇರೆ ಪಕ್ಷಗಳಿಗಿಂತ ಭಿನ್ನ ಎಂಬುದು ಸಾಬೀತುಪಡಿಸಿದೆ ಎಂದು ಹೇಳಿದರು.
ಇದನ್ನೂ ಓದಿ : ಕೊರಟಗೆರೆಯಲ್ಲಿ ಮಾತ್ರ ಸ್ಪರ್ಧೆ, ಎರಡು ಕಡೆ ನಿಲ್ಲುವ ಅವಶ್ಯಕತೆ ನನಗಿಲ್ಲ: ಡಾ ಜಿ ಪರಮೇಶ್ವರ್
ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಡಾ. ತಿಪ್ಪೇಸ್ವಾಮಿ ವೆಂಕಟೇಶ್‌ರವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಪೃಥ್ವಿ ರೆಡ್ಡಿ, ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಅವರು ಕೃಷಿಯಲ್ಲಿ ಬಿಎಸ್ಸಿ, ಎಂಬಿಎ ಹಾಗೂ ಪಿಜಿಡಿಎಇಎಂ ಶಿಕ್ಷಣ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಬಿಎಂಪಿ, ಎಸ್‌ಬಿಐ ಹಾಗೂ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ತಮ್ಮ 40ನೇ ವಯಸ್ಸಿನಲ್ಲಿ ಸರ್ಕಾರಿ ನೌಕರಿಯನ್ನು ತ್ಯಜಿಸಿ ರಾಜಕೀಯ ಪ್ರವೇಶಿಸಿದ್ದರು. ಇಂತಹ ಸುಶಿಕ್ಷಿತ ಹಾಗೂ ಜನಪರ ಕಾಳಜಿಯುಳ್ಳ ನಾಯಕರು ಆಮ್ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
ಇದನ್ನೂ ಓದಿ : ರಾಜ್ಯ ರಚನೆಯಾದ ಬಳಿಕ ಪೂರ್ಣಾವಧಿ ಆಡಳಿತ ಕೊಟ್ಟವರು ಕೇವಲ ಮೂವರು ಮುಖ್ಯಮಂತ್ರಿಗಳು ಮಾತ್ರ!
ಇದನ್ನೂ ಓದಿ : ಹಾಸನ ಟಿಕೆಟ್ ನಿಷ್ಠಾವಂತ ಕಾರ್ಯಕರ್ತನಿಗೆ ಬಿಟ್ಟು ಯಾರಿಗೂ ಇಲ್ಲ: ಹೆಚ್ ಡಿ ಕುಮಾರಸ್ವಾಮಿ