ETV Bharat / state

ಐಟಿ ಸಿಟಿಯನ್ನ ಭಾರತದ ಬೈಸಿಕಲ್ ಸಿಟಿ ಆಗಿಸಲು ಪ್ರಯತ್ನ: ಸಚಿವ ಡಾ.ನಾರಾಯಣಗೌಡ - ಲೀಡ್ ಬೆಂಗಳೂರು ರೈಡ್ 2022

ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್ ಎಸ್ಎಸ್ ಸಹಯೋಗದೊಂದಿಗೆ ವಿಶ್ವ ಸೈಕಲ್ ದಿನಾಚರಣೆ ಪ್ರಯುಕ್ತ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸೈಕಲ್ ರ‍್ಯಾಲಿ ಆಯೋಜಿಸಲಾಗಿದೆ. ಈ ಮೂಲಕ ಬೆಂಗಳೂರನ್ನು ಭಾರತದ ಬೈಸಿಕಲ್ ಸಿಟಿಯನ್ನಾಗಿಸಲು ಪ್ರಯತ್ನಿಸುವುದಾಗಿ ಸಚಿವ ಡಾ. ನಾರಾಯಣ ಗೌಡ ಹೇಳಿದ್ದಾರೆ.

to-make-it-city-bengaluru-into-indias-bicycle-city-says-minister-narayana-gowda
ಐಟಿ ಸಿಟಿ ಬೆಂಗಳೂರನ್ನು ಭಾರತದ ಬೈಸಿಕಲ್ ಸಿಟಿಯನ್ನಾಗಿಸಲು ಪ್ರಯತ್ನ: ಸಚಿವ ಡಾ.ನಾರಾಯಣಗೌಡ
author img

By

Published : Jun 2, 2022, 7:31 PM IST

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಭಾರತದ ಬೈಸಿಕಲ್ ಸಿಟಿಯನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಕ್ರೀಡಾ ಸಚಿವ ನಾರಾಯಣ ಗೌಡ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಎನ್ ಎಸ್ಎಸ್ ಸಹಯೋಗದೊಂದಿಗೆ ವಿಶ್ವ ಸೈಕಲ್ ದಿನಾಚರಣೆ ಪ್ರಯುಕ್ತ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಸೈಕಲ್ ರ‍್ಯಾಲಿ ಆಯೋಜಿಸಲಾಗಿದೆ.

ವಿಧಾನಸೌಧದ ಮುಂಭಾಗದಲ್ಲಿ ನಾಳೆ ಸಚಿವರಾದ ಡಾ.ಅಶ್ವಥ್ ನಾರಾಯಣ್ ಅವರು, ಮುರುಗೇಶ್ ನಿರಾಣಿಯವರು ಸೇರಿದಂತೆ ಹಲವು ಗಣ್ಯರು ರ್ಯಾಲಿಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು. ಸೈಕಲ್ ಬಳಕೆಯಿಂದ ಆರೋಗ್ಯದಲ್ಲಾಗುವ ಉತ್ತಮ ಬದಲಾವಣೆಗಳ ಕುರಿತು ಜನರಿಗೆ ತಿಳಿಸುವುದಕ್ಕಾಗಿ, ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ಸೈಕಲ್ ಬಳಸುವಂತೆ ಪ್ರೇರೇಪಿಸುವ ಸಲುವಾಗಿ ವಿಶ್ವ ಬೈಸಿಕಲ್ ದಿನಾಚರಣೆಯನ್ನು ಆಯೋಜಿಸಲಾಗುತ್ತಿದೆ ಎಂದರು.

ಸೈಕಲ್‌ ಬಳಕೆ ಹೆಚ್ಚಾದಷ್ಟು ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದಾಗಿದೆ. ಹಾಗೂ ಮನುಷ್ಯ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಜೊತೆಗೆ ಟ್ರಾಫಿಕ್ ಸಮಸ್ಯೆಯನ್ನು ಕೂಡ ಕಡಿಮೆಗೊಳಿಸಬಹುದು. ಹಾಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸೈಕಲ್ ಬಳಕೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಒಟ್ಟು 75 ಐತಿಹಾಸಿಕ ಸ್ಥಳಗಳಲ್ಲಿ ಈ ಸೈಕಲ್ ರ‍್ಯಾಲಿ ನಡೆಯಲಿದೆ‌. ನಮ್ಮ ಕರ್ನಾಟಕದ ಐತಿಹಾಸಿಕ ಸ್ಥಳಗಳಾದ ಹಂಪಿ, ಬೇಲೂರು, ರಾಣಿ ಅಬ್ಬಕ್ಕ ಕೋಟೆ, ಗೋಲ್ ಗುಂಬಜ್, ಮೈಸೂರು ಅರಮನೆ, ಮಲ್ಪೆ ಮತ್ತು ಮಡಿಕೇರಿ ಕೋಟೆಗಳಲ್ಲಿ ಬೈಸಿಕಲ್ ರ‍್ಯಾಲಿ ಯನ್ನು ಆಯೋಜಿಸಲಾಗಿದೆ.

ನಮ್ಮ-ನಿಮ್ಮ ಸೈಕಲ್ ಫೌಂಡೇಷನ್, ಸ್ಟಾರ್ಟ್ ಅಪ್ ಸೆಲ್, ಬೆಂಗಳೂರು ಇವರ ಸಹಯೋಗದಲ್ಲಿ “ಲೀಡ್ ಬೆಂಗಳೂರು ರೈಡ್-2022" ಆಯೋಜಿಸುತ್ತಿದ್ದು ಇದರಲ್ಲಿ ಜರ್ಮನಿಯ ವಿವಿಧ ಕಂಪನಿಗಳ CEOಗಳು ಭಾಗವಹಿಸುತ್ತಿದ್ದಾರೆ. ಇದರ ಜೊತೆಗೆ ಸುಮಾರು 200 ಸೈಕ್ಲಿಸ್ಟ್‌ಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಓದಿ : ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾ ವಹಿಸಿ: ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.