ಬೆಂಗಳೂರು: ರಾಜ್ಯದಲ್ಲಿಂದು 4,025 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 7,661 ಮಂದಿ ಗುಣಮುಖರಾಗಿದ್ದು, ಈವರೆಗೆ 7,41,219 ಮಂದಿ ಬಿಡುಗಡೆಯಾಗಿದ್ದಾರೆ. 45 ಮಂದಿ ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 11,091ಕ್ಕೆ ಏರಿಕೆಯಾಗಿದೆ.
ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 6,4,480ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 935 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ 3.99% ಇದ್ದು, 1.11% ಮರಣ ಪ್ರಮಾಣ ಇದೆ.
ಬೆಂಗಳೂರಿನಲ್ಲಿ ಒಟ್ಟು 2,175 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು, 4,378 ಮಂದಿ ಗುಣಮುಖರಾಗಿದ್ದಾರೆ. 19 ಮಂದಿ ಮೃತಪಟ್ಟಿದ್ದಾರೆ.
ಇಂದು 1,00,683 ಜನರ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ 77,01,031 ಜನರ ಟೆಸ್ಟ್ ನಡೆಸಲಾಗಿದೆ.