ಬೆಂಗಳೂರು: ರಾಜ್ಯದಲ್ಲಿಂದು 408 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,29,960ಕ್ಕೆ ಏರಿಕೆಯಾಗಿದೆ.
ಇಂದು 564 ಮಂದಿ ಗುಣಮುಖರಾಗಿದ್ದು, 8,728 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 9,09,058 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,29,960ಕ್ಕೆ ಏರಿಕೆಯಾಗಿದೆ.
ಮೃತಪಟ್ಟವರ ಸಂಖ್ಯೆ 12,155ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 187 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 141 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದ್ದು, 3 ಮಂದಿ ಮೃತಪಟ್ಟಿದ್ದಾರೆ.