ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನಿತ್ಯ 9 ಸಾವಿರದ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆ ಕಂಡಿದೆ. ಇಂದು 55,707 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, 6,974 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಇತ್ತ 9,073 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,32,450 ಜನರು ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಒಟ್ಟು 93,153 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 822 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿಗೆ 83 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 8,228 ಏರಿಕೆಯಾಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ.