ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ.
ರಾಜಧಾನಿಯ ಗಾಂಧಿನಗರ, ಮೆಜೆಸ್ಟಿಕ್, ಕುರುಬರಹಳ್ಳಿ, ಯಲಹಂಕ, ಏರ್‌ಪೋರ್ಟ್ ರಸ್ತೆ, ಸದಾಶಿವನಗರ, ಯಶವತಪುರ, ಮಲ್ಲೇಶ್ವರಂ, ಮಹಾಲಕ್ಷಿ ಲೇಔಟ್ ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆ ಸುರಿಯಿತು.
ನಗರದಾದ್ಯಂತ ಮಧ್ಯಾಹ್ನ ಒಂದು ಗಂಟೆ ಕಾಲ ಧಾರಾಕಾರ ಮಳೆ ಸುರಿದು ತಂಪಾದ ವಾತಾವರಣದ ಅನುಭವ ಸಿಲಿಕಾನ್ ಸಿಟಿ ಜನತೆ ಅನುಭವಿಸುತ್ತಿದ್ದಾರೆ.
ರಾಜ್ಯದಲ್ಲಿ ಏ. 26ರವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ತಿಳಿಸಿದೆ.