ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರವಾಹ ಹಾನಿ ಪ್ರದೇಶಗಳಿಗೆ ಸಿಎಂ ಯಡಿಯೂರಪ್ಪ ನಾಳೆ (ಆ.12) ಭೇಟಿ ನೀಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಬಂದ ಹಿನ್ನೆಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭೇಟಿಯನ್ನು ರದ್ದುಗೊಳಿಸಲಾಗಿತ್ತು.
ಮೊದಲಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿಗೆ ಭೇಟಿ ನೀಡಲಿದ್ದು, ಬಳಿಕ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ತೆರಳಲಿದ್ದಾರೆ. ಕಾರವಾರದಲ್ಲಿಯೇ ತಂಗಲಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಿದ್ದಾರೆ.
ಮಂಗಳವಾರ ಕಾರವಾರದಿಂದ ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳ ಮಳೆ ಹಾನಿ ಕುರಿತು ಪರಿಶೀಲನೆ ನಡೆಸಿ, ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ತಿಳಿದು ಬಂದಿದೆ.