ಬೆಂಗಳೂರು: ರಾಜ್ಯದಲ್ಲಿಂದು 1,440 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 16 ಮಂದಿ ಮೃತಪಟ್ಟಿದ್ದಾರೆ.
ಇಂದು 983 ಮಂದಿ ಬಿಡುಗಡೆಯಾಗಿದ್ದು, 24,150 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 8,51,690 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 8,87,667 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 11,808 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 318 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಒಟ್ಟು 712 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದು, 174 ಮಂದಿ ಗುಣಮುಖರಾಗಿದ್ದಾರೆ. 10 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 3,71,204 ಕ್ಕೆ ಏರಿಕೆಯಾಗಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 18394 ಇದೆ.