ಬೆಂಗಳೂರು: ರಾಜ್ಯದಲ್ಲಿಂದು 1,247 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 13 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 890360ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 25046ಕ್ಕೆ ಏರಿಕೆಯಾಗಿವೆ. ಇಂದು 877 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 853461 ಮಂದಿ ಗುಣಮುಖರಾಗಿದ್ದಾರೆ. ಇನ್ನು ಒಟ್ಟು ಮೃತಪಟ್ಟವರ ಸಂಖ್ಯೆ 11834ಕ್ಕೆ ಏರಿಕೆಯಾಗಿದ್ದು, ಐಸಿಯುನಲ್ಲಿ 287 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಂಗಳೂರಿನ 620 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ. 282 ಮಂದಿ ಗುಣಮುಖರಾಗಿದ್ದಾರೆ.