ಬೆಂಗಳೂರು: ರಾಜ್ಯದಲ್ಲಿಂದು 1791 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,65,931ಕ್ಕೆ ಏರಿಕೆ ಆಗಿದೆ.
ಕೊರೊನಾಗೆ 21 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,578ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ. 1.84 ಹಾಗೂ ಸಾವಿನ ಪ್ರಮಾಣ ಶೇ. 1.17ರಷ್ಟು ಇದೆ.
ಕೊರೊನಾದಿಂದ 1947 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,29,188 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 636 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದು, ರಾಜ್ಯದಲ್ಲಿ ಸದ್ಯ 25,146 ಸಕ್ರಿಯ ಪ್ರಕರಣಗಳು ಇವೆ. ಕಳೆದ 7 ದಿನಗಳಲ್ಲಿ 37,013 ಜನರು ಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ. ಇನ್ನು ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 1,67,989, ದ್ವಿತೀಯ ಸಂಪರ್ಕದಲ್ಲಿ 1,82,850 ಜನರು ಇದ್ದಾರೆ.