ಬೆಂಗಳೂರು: ಅತ್ಯುನ್ನತ ಹುದ್ದೆಗಳಾದ ಐಎಎಸ್, ಐಎಫ್ಎಸ್, ಐಪಿಎಸ್, ಐಆರ್ಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಇಂದು UPSC ಪ್ರಿಲಿಮ್ಸ್ ಪರೀಕ್ಷೆ ನಡೆಸಿದೆ.
ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕಾ ಸೇವಾ ಪರೀಕ್ಷೆ ಇದಾಗಿದ್ದು, ಬೆಂಗಳೂರಿನ 15ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಬಾರಿ 9.2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರು.
ಎರಡು ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಗೆ ಹಾಜರಾಗಲು ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಆಯ್ಕೆಯಾಗಬೇಕಿದೆ. ಮುಖ್ಯ ಪರೀಕ್ಷೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯ UPSC ಮುಖ್ಯಕಚೇರಿಯಲ್ಲಿ ಸಂದರ್ಶನ ನಡೆಯುತ್ತದೆ.