ಬೆಂಗಳೂರು: ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೋವಿಡ್ ಸೋಂಕು ಏರಿಕೆಯಾಗುತ್ತಿದೆ. ಇಂದು 33,336 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1624 ಮಂದಿಗೆ ಸೋಂಕು ದೃಢಪಟ್ಟಿದೆ.
ಇಂದು 1647 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,50,794 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ ಗೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 8,836 ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.87 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 5.35 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 67,671,831 ವಾರದ ಸಾವಿನ ಪ್ರಮಾಣ ಶೇ. 0. 05 ರಷ್ಟಿದೆ.
ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 5,265 ಒಳಗಾಗಿದ್ದು, ಇದುವರೆಗೂ 12,83,310 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1,176 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,30,482 ಕ್ಕೆ ಏರಿಕೆ ಆಗಿದೆ. ಇಂದು 1,381 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,06,209 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಇನ್ನು ಸಕ್ರಿಯ ಪ್ರಕರಣಗಳು 7,299 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,973 ರಷ್ಟಿದೆ.
ಓದಿ: ಸಾವಿನ ಮನೆಯಲ್ಲಿ ಸಂಭ್ರಮ ಯಾಕೆ? ಹರ್ಷಾಚರಣೆ ಮಾಡಲು ರಾಜ್ಯದಲ್ಲಿ ಶಾಂತಿ ನೆಲೆಸಿರಬೇಕಲ್ಲವೇ? : ಹೆಚ್ಡಿಕೆ ಕಿಡಿ