ಬೆಂಗಳೂರು : ರಾಜ್ಯದಲ್ಲಿಂದು ಒಟ್ಟು 1,692 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ. ರಾಜ್ಯಾದ್ಯಂತ ಇಂದು 33,320 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 1,692 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1,094 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 11,105 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಶೇ.5.07 ರಷ್ಟಿದ್ದು, ವಾರದ ಸೋಂಕಿತರ ಪ್ರಮಾಣ ಶೇ.6.05ರಷ್ಟಿದೆ. ಈ ವಾರದ ಸಾವಿನ ಪ್ರಮಾಣ ಶೇ.0.11 ಇದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಇಂದು ಒಟ್ಟು 1,154 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,36,068 ಕ್ಕೆ ಏರಿಕೆಯಾಗಿದೆ. ಇಂದು 861 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ ಕೋವಿಡ್ ಸಾವಿನ ಸಂಖ್ಯೆ 16,974 ದಾಖಲಾಗಿದೆ. ರಾಜಧಾನಿಯಲ್ಲಿ ಒಟ್ಟು 8,595 ಕೋವಿಡ್ ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ.
ಓದಿ : ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ಗೆ ಮೊದಲ ಬಲಿ: ಯುಎಇಯಿಂದ ಕೇರಳಕ್ಕೆ ಬಂದಿದ್ದ ಯುವಕ ಸಾವು