ಬೆಂಗಳೂರು: ರಾಜ್ಯದಲ್ಲಿಂದು 14,738 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, 66 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 3,591 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 96,561ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 9,99,958 ಮಂದಿ ಬಿಡುಗಡೆಯಾಗಿದ್ದು, ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 13,112ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 555 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲೇ ಸೋಂಕಿತರ ಸಂಖ್ಯೆ ಹತ್ತು ಸಾವಿರ ಮೀರಿದೆ. ಇಂದು 10,497 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು, 30 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣವೂ 0.44% ಇದ್ದು, ಸೋಂಕಿತರ ಪ್ರಮಾಣ 11.38 %ಗೆ ಏರಿಕೆಯಾಗಿದೆ.