ಬೆಂಗಳೂರು : ರಾಜ್ಯದಲ್ಲಿಂದು 1,46,772 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 847 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಪ್ರಮಾಣ 29,70,208ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ ಶೇ.0.57ರಷ್ಟು ದಾಖಲಾಗಿದೆ. ಇಂದು 946 ಸೋಂಕಿತರು ಗುಣಮುಖರಾಗಿದ್ದು, ಈ ತನಕ 29,18,890 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಸಕ್ರಿಯ ಪ್ರಕರಣಗಳು 13,621ರಷ್ಟು ದಾಖಲಾಗಿವೆ. 20 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,668ಕ್ಕೆ ಏರಿದೆ. ಈ ಮೂಲಕ ಮೃತರ ಪ್ರಮಾಣ ಶೇ.2.36ರಷ್ಟು ದಾಖಲಾಗಿದೆ. ವಿಮಾನ ನಿಲ್ದಾಣದಿಂದ 1,296 ಪ್ರಯಾಣಿಕರು ಆಗಮಿಸಿದ್ದು, 96 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.
ರೂಪಾಂತರಿ ವೈರಸ್ ಅಪ್ಡೇಟ್ಸ್
1) ಡೆಲ್ಟಾ ( Delta/B.617.2) - 1653
2)ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) 160
4) ಬೇಟಾ ವೈರಸ್ (BETA/B.1.351) -8
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) -4 ಮಂದಿ
6) ಈಟಾ (ETA/B.1.525) - 1
7) ಡೆಲ್ಟಾ ಸಬ್ಲೈನ್ ಏಜ್ AY.4- 202
8) ಡೆಲ್ಟಾ ಸಬ್ಲೈನ್ ಏಜ್ AY .12- 14
ಓದಿ: ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ : ಸಿಎಂ ಬಸವರಾಜ ಬೊಮ್ಮಾಯಿ