ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆ ಹಾಗೂ ಒಳನಾಡಿನಲ್ಲಿ ಇಂದು ವ್ಯಾಪಕ ಮಳೆಯಾಗಿದೆ. ಆಗುಂಬೆಯಲ್ಲಿ 8 ಸೆಂ.ಮೀ, ಕೊಟ್ಟಿಗೆಹಾರ, ಕದರದಲ್ಲಿ 6 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಸೆ. 23-24ರಂದು ಸಾಧಾರಣ ಜೊತೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸೆ. 25 ರಿಂದ 27ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.23 ರಿಂದ 27ರವರೆಗೆ ಹಗುರದಿಂದ ಸಾಧಾರಣವಾಗಿ ಹಲವು ಸ್ಥಳಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಹಲವು ಕಡೆ ಹಗುರವಾಗಿ ಮಳೆಯಾಗಬಹುದು ಎಂದು ಸಿ ಎಸ್ ಪಾಟೀಲ್ ತಿಳಿಸಿದರು.