ETV Bharat / state

ಟೊಮೆಟೊ ಜ್ವರ: ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಕ್ರಮ- ಡಾ.ಕೆ.ಸುಧಾಕರ್ - ಟೊಮೆಟೊ ಜ್ವರದ ಬಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯೆ

ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ ಆತಂಕ ಮೂಡಿಸಿದ್ದು, ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Tomato flu fear in Karnataka state, Tomato flu spread in children, Minister Sudhakar reaction on Tomato fever, Karnataka Tomato flu news, ಕರ್ನಾಟಕ ರಾಜ್ಯದಲ್ಲಿ ಟೊಮೇಟೊ ಜ್ವರದ ಭೀತಿ, ಮಕ್ಕಳಲ್ಲಿ ಹರಡುತ್ತಿರುವ ಟೊಮೆಟೊ ಜ್ವರ, ಟೊಮೆಟೊ ಜ್ವರದ ಬಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯೆ, ಕರ್ನಾಟಕ ಟೊಮೆಟೊ ಜ್ವರ ಸುದ್ದಿ,
ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ ಆತಂಕ
author img

By

Published : May 12, 2022, 7:44 AM IST

ಬೆಂಗಳೂರು: ಮಕ್ಕಳಲ್ಲಿ ಕಂಡುಬರುವ ಟೊಮೆಟೊ ಜ್ವರ ಹರಡುವಿಕೆ ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಈಗಾಗಲೇ ಇರುವ ಖಾಯಿಲೆಯಾಗಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಅಪರೂಪದ ವೈರಸ್ ರೋಗ ಟೊಮೆಟೊ ಜ್ವರ ಪ್ರಕರಣಗಳು ಕೇರಳದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್​ನಲ್ಲಿ ಕಂಡುಬಂದಿದೆ. ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಾಣಿಸುವಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ. ತೀವ್ರ ಜ್ವರ, ಮೈ-ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ Tomato ಟ್ರೆಂಡ್​​: ಎಲ್ಲೆಡೆ ಟೊಮೆಟೊ 'ಬಾತ್'​

ಕೇರಳದಲ್ಲಿ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ. ರಾಜ್ಯದ ಯಾವುದೇ ಆಸ್ಪತ್ರೆಗಳ ಹೊರರೋಗಿಗಳ ವಿಭಾಗಗಳಲ್ಲಿ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಬೇಕೆಂದು ತಿಳಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಯಿಂದ ಲಿಖಿತ ನಿರ್ದೇಶನ ನೀಡಲಾಗಿದೆ. ಟೊಮೆಟೊ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ. ಇದು ಕೇರಳದಲ್ಲಿ ಈಗಾಗಲೇ ಇರುವ ಎಂಡೆಮಿಕ್ ಕಾಯಿಲೆ ಆಗಿದೆ. ಆದ್ದರಿಂದ ಯಾವುದೇ ಆತಂಕ ಬೇಡ ಎಂದರು.

ಟೊಮೆಟೊ ಜ್ವರ ಎಂದರೇನು?: ಇದು ಒಂದು ರೀತಿಯ ಗುರುತಿಸಲಾಗದ ಜ್ವರ. ಹೆಚ್ಚಾಗಿ ಕೇರಳ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪತ್ತೆಯಾಗಿದೆ. ಈ ಜ್ವರವು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ದೇಹದಾದ್ಯಂತ ಗುಳ್ಳೆಗಳು ಮತ್ತು ಕೆಲವು ಕೆಂಪು ಬಣ್ಣದ ದದ್ದುಗಳನ್ನು ಉಂಟುಮಾಡುತ್ತವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.